ಎಂ.ವಿ. ವಸ್ತು ಪ್ರದರ್ಶನಾಲಯ: ಡಿಸಿ ಮೆಚ್ಚುಗ
Team Udayavani, Dec 6, 2017, 10:14 AM IST
ಕಲಬುರಗಿ: ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನ ಹಾಗೂ ಸಾಧನೆಗಳ ಕುರಿತು ಹಮ್ಮಿಕೊಂಡ ಸಂಚಾರಿ ವಸ್ತು
ಪ್ರದರ್ಶನಾಲಯದ ಕುರಿತು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ದೇಶ ಕಂಡ ಅಪರೂಪದ ಇಂಜಿನಿಯರ್, ವಿಜ್ಞಾನಿ ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನ ಮತ್ತು ಸಾಧನೆಗಳ ಕುರಿತು ಮಂಗಳವಾರ ಹಮ್ಮಿಕೊಂಡ ಎಂ. ವಿಶ್ವೇಶ್ವರಯ್ಯ ಸಂಚಾರಿ
ವಸ್ತು ಪ್ರದರ್ಶನಾಲಯ ಉದ್ಘಾಟಿಸಿ ಅವರು ಮಾತನಾಡಿದರು.
ಸರ್. ಎಂ.ವಿ ಅವರ ಬಾಲ್ಯ, ಹುಟ್ಟೂರು ಮತ್ತು ಅವರು ಕಲಿತ ಶಾಲೆ, ಅಭಿಯಂತರರು ಆಗಿರುವುದು ಸೇರಿದಂತೆ
ಅವರ ಜೀವನದ ಅಮೂಲ್ಯವಾದ ಘಳಿಗೆಗಳ ಪ್ರದರ್ಶನವು ಒಳಗೊಂಡಿದ್ದು, ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ವಸ್ತು
ಪ್ರದರ್ಶನಾಲಯವನ್ನು ವೀಕ್ಷಿಸುವ ಮೂಲಕ ಸ್ಪೂರ್ತಿ ಹಾಗೂ ಪ್ರೇರಣೆ ಪಡೆಯಬೇಕು ಎಂದರು.
ಸರ್. ಎಂ. ವಿ ಅವರು ದೇಶ ಕಂಡ ಅಪರೂಪದ ವಿಜ್ಞಾನಿ ಮತ್ತು ಇಂಜಿನಿಯರ್ ಆಗಿದ್ದರು. ದೇಶದ ಅನೇಕ ಜ್ವಲಂತ
ಸಮಸ್ಯೆಗಳಿಗೆ ಅವರು ಪರಿಹಾರ ಕಂಡು ಹಿಡಿದಿದ್ದರು. ಅವರು ರಾಷ್ಟ್ರಕ್ಕೆ ಕೊಟ್ಟ ಕೊಡುಗೆಯನ್ನು ಮರೆಯಲಾಗದು ಎಂದು ಬಣ್ಣಿಸಿದರು.
ಜನರ ಸಮಸ್ಯೆಗಳಿಗೆ ಅಭಿಯಂತರರು ಪರಿಹಾರ ಕಂಡುಹಿಡಿಯುವ ಕೆಲಸ ಮಾಡಬೇಕು ಎಂದು ಹೇಳಿದ ಅವರು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಅತ್ಯಂತ ಅಗತ್ಯವಾಗಿದೆ. ಆ ಹಿನ್ನೆಲೆಯಲ್ಲಿ ಜಿಲ್ಲಾ ವಿಜ್ಞಾನ ಕೇಂದ್ರಕ್ಕೆ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ಭೇಟಿ ನೀಡಬೇಕು. ಆ ದಿಸೆಯಲ್ಲಿ ಜಿಲ್ಲಾಡಳಿತವು ಅಗತ್ಯ ಸಹಕಾರ ಕೊಡಲಿದೆ ಎಂದು ಭರವಸೆ ನೀಡಿದರು.
ಜಿಲ್ಲಾ ವಿಜ್ಞಾನ ಕೇಂದ್ರದ ವಿಜ್ಞಾನಾಧಿಕಾರಿ ಎನ್. ಲಕ್ಷ್ಮೀನಾರಾಯಣ ಮಾತನಾಡಿ, ಸರ್. ಎಂ. ವಿಶ್ವೇಶ್ವರಯ್ಯ ಸಂಚಾರಿ ವಸ್ತು ಪ್ರದರ್ಶನಾಲಯವು 45ರಿಂದ 60 ದಿನಗಳ ಕಾಲ ಪ್ರದರ್ಶನ ನೀಡಲಿದೆ. ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪ್ರದರ್ಶನ ವೀಕ್ಷಿಸಬೇಕು ಎಂದರು. ಹಿರಿಯ ಅಭಿಯಂತರ ಪಿ.ಎಸ್. ಮಹಾಗಾಂವಕರ್, ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ| ಶಶಿಕಾಂತ ಮೀಸೆ ಹಾಜರಿದ್ದರು. ಜಿಲ್ಲಾ ವಿಜ್ಞಾನ ಕೇಂದ್ರದ ಶಿಕ್ಷಣ ಅಧಿಕಾರಿ ಆರ್. ವೆಂಕಟೇಶ್ವರಲು ನಿರೂಪಿಸಿದರು. ನಗರದ
ಸರ್ಕಾರಿ ಮಹಿಳಾ ಮಹಾವಿದ್ಯಾಲಯ, ಚೇತನ್ ಯೂಥ್ ಫೋರಂ ಪ್ರೌಢಶಾಲೆ, ಆರಾಧನಾ ಶಾಲೆ ಸೇರಿದಂತೆ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಸ್ತು ಪ್ರದರ್ಶನವನ್ನು ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.