ನಾಡಪಿಸ್ತೂಲು ಮಾರಾಟ ಜಾಲ ಬಯಲಿಗೆ


Team Udayavani, Feb 10, 2017, 3:02 PM IST

gul5.jpg

ಕಲಬುರಗಿ: ಜಿಲ್ಲೆಯ ಅಫಜಲಪುರ ಹಾಗೂ ಆಳಂದ ತಾಲೂಕಿನಲ್ಲಿ ಅವ್ಯಾಹುತವಾಗಿ ಗನ್‌ಗಳ ಮಾರಾಟ ನಡೆಯುತ್ತಿದೆ ಎಂಬ ಸಾರ್ವಜನಿಕ ಟೀಕೆ-ಆರೋಪ ನಡುವೆ ಪೊಲೀಸರು ತೀವ್ರ ತನಿಖೆ ನಡೆಸಿ, ಗನ್‌ ಮಾರಾಟಗಾರರ ಜಾಲವನ್ನು ಬಯಲಿಗೆಳೆದಿದ್ದಾರೆ. 

ಖಚಿತ ಮಾಹಿತಿ ಮೇರೆಗೆ ಅಫಜಲಪುರ-ದುಧನಿ ರಸ್ತೆಯಲ್ಲಿರುವ ಹಳಾಳ ಕ್ರಾಸ್‌ ಹತ್ತಿರ ನಾಡ ಪಿಸ್ತೂಲ್‌ ವ್ಯವಹಾರ ಮಾಡುತ್ತಿದ್ದ ಐವರನ್ನು ಬಂಧಿಸಿ ನಾಲ್ಕು ನಾಡಪಿಸ್ತೂಲುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಅಳಂದ ತಾಲೂಕಿನ ಝಳಕಿ ಗ್ರಾಮದ ಸೈಫನಸಾಬ್‌ ಹುಸೇನಸಾಬ ಶಿರೂರ, ಪಂಡಿತ ಬಸಣ್ಣ ಬನಶೆಟ್ಟಿ, ಅಫಜಲಪುರ ತಾಲೂಕಿನ ಅತನೂರ ಗ್ರಾಮದ ಸೈಫನಸಾಬ್‌ ಅಬ್ದುಲ್‌ ರವೂಫ್‌ ಬಾಗವಾನ್‌, ಶಿವಕುಮಾರ ಸಿದ್ಧರಾಮ ಹುಲಿ ಹಾಗೂ ದೇವಲ್‌ ಗಾಣಗಾಪುರದ ಮಲ್ಲಿಕಾರ್ಜುನ ಶಾಂತಪ್ಪ ಹೊಸಮನಿ ಎಂಬ ಆರೋಪಿಗಳನ್ನೇ ಬಂಧಿಸಿ ನಾಲ್ಕು ನಾಡಪಿಸ್ತೂಲು ಹಾಗೂ ಐದು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು. 

ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ಬಳಿ ನಾಡಪಿಸ್ತೂಲು ತೋರಿಸಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲಬುರಗಿಯ ಮಾರ್ಕೆಟ್‌ ಸತೀಶನನ್ನು ಬಂಧಿಸಿ ವಿಚಾರಣೆ ಮಾಡಿದಾಗ ನಾಡಪಿಸ್ತೂಲು ಅಫಜಲಪುರ ತಾಲೂಕಿನಿಂದಲೇ ಪೂರೈಕೆಯಾಗಿರುವ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ದಾಳಿ ನಡೆಸಿದಾಗ ಈ ಜಾಲ ಬಯಲಿದೆ ಬಂದಿದೆ. ಝಳಕಿಯ ಸೈಫನ್‌ಸಾಬ್‌ ಶಿರೂರ ಈ ಹಿಂದೆಯೂ ನಾಡಪಿಸ್ತೂಲ್‌ ಮಾರಾಟ ದಂಧೆ ಹಿನ್ನೆಲೆಯಲ್ಲಿ ಸೆರೆ ಸಿಕ್ಕಿದ್ದ.

ಇವುಗಳನ್ನು ಮಧ್ಯಪ್ರದೇಶದ ತಪನಸಿಂಗ್‌ ಎಂಬಾತನಿಂದ ಪಡೆದಿದ್ದಾರೆ ಎನ್ನಲಾಗುತ್ತಿದೆ. ಎಲ್ಲ ಹಂತದಿಂದ ತನಿಖೆ ನಡೆಯುತ್ತಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ 23 ನಾಡಪಿಸ್ತೂಲು, 21 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದರು. 

ಪೇದೆ ಅಮಾನತು: ಅಕ್ರಮ ಆಸ್ತಿ ಹೊಂದಿದ ಆರೋಪ ಹಾಗೂ ಅಕ್ರಮ ಮರಳುಗಾರಿಕೆಯಲ್ಲಿ ಪಾಲ್ಗೊಂಡಿದ್ದ ಆರೋಪದ ಮೇರೆಗೆ ಎಸಿಬಿ ದಾಳಿಗೆ ಒಳಗಾದ ಸಂಚಾರಿಯ ಮುಖ್ಯಪೇದೆ ಕನಕರೆಡ್ಡಿ ಯಾದವ್‌ ನನ್ನು ಅಮಾನತುಗೊಳಿಸಿ, ಇಲಾಖೆಯಿಂದ ತನಿಖೆ ನಡೆಸಲಾಗುತ್ತಿದೆ ಎಂದರು. ಆಳಂದ ಡಿವೆಎಸ್ಪಿ ಪಿ.ಡಿ.ಗಜಕೋಶ, ಅಪಜಲಪುರ ಸಿಪಿಐ ಸಂಗಮೇಶ ಪಾಟೀಲ ಇದ್ದರು.  

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.