ರೈಲಲ್ಲಿ ಬಂದವರು ನಾಗಾವಿ ಕ್ವಾರಂಟೈನ್‌ಗೆ
Team Udayavani, Jun 2, 2020, 12:44 PM IST
ವಾಡಿ: ಸೋಮವಾರದಿಂದ ರೈಲುಗಳ ಸಂಚಾರ ಆರಂಭವಾಗುತ್ತಿದ್ದಂತೆ ಮಹಾರಾಷ್ಟ್ರ, ಆಂಧ್ರ ಹಾಗೂ ಬೆಂಗಳೂರಿನಿಂದ ಬರುವವರ ಮೇಲೆ ತೀವ್ರ ನಿಗಾವಹಿಸಲಾಗುತ್ತಿದ್ದು, ರೈಲು ನಿಲ್ದಾಣದಿಂದಲೇ ನೇರವಾಗಿ ಸರಕಾರಿ ಕ್ವಾರಂಟೈನ್‌ಗೆ ಕರೆದೊಯ್ಯಲಾಗುತ್ತಿದೆ.
ಸೋಮವಾರ ಸಂಜೆ 7.40ಕ್ಕೆ ಮುಂಬೈ-ಬೆಂಗಳೂರು ಉದ್ಯಾನ್ ಏಕ್ಸ್‌ಪ್ರೆಸ್ ರೈಲು ವಾಡಿ ಜಂಕ್ಷನ್ ನಿಲ್ದಾಣ ತಲುಪುತ್ತಿದ್ದಂತೆ ಪ್ಲಾಟ್ ಫಾರ್ಮ್ ಮೇಲೆ ಇಳಿಯುವ ಪ್ರಯಾಣಿಕರಿಗಾಗಿ ಕಾಯುತ್ತಿದ್ದ ಪೊಲೀಸರು ಸುರಕ್ಷತೆ ಒದಗಿಸಿದರೆ, ತಹಶೀಲ್ದಾರರು ಗೌರವದಿಂದ ಸ್ವಾಗತಿಸಿ ಥರ್ಮಲ್ ಸ್ಕ್ರೀನಿಂಗ್‌ಗೆ ಸಹಕರಿಸುವಂತೆ ಮನವೊಲಿಸಿದರು. ಕಿರಿಯ ಆರೋಗ್ಯ ಸಹಾಯಕಿ ಅನಿತಾ ಮಲಗೊಂಡ ಹಾಗೂ ಸಿಬ್ಬಂದಿ ಪ್ರತಿಯೊಬ್ಬ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದರು.
ವಾಡಿ ವಲಯದ ವಿವಿಧ ಗ್ರಾಮ ಹಾಗೂ ತಾಂಡಾಗಳಿಗೆ ಸೇರಿದ ಒಟ್ಟು 20 ಜನ ಪ್ರಯಾಣಿಕರನ್ನು ಏಳು ದಿನಗಳವರೆಗೆ ಚಿತ್ತಾಪುರ ಪಟ್ಟಣದ ನಾಗಾವಿ ಹಬ್ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಯಿತು. ತಹಶೀಲ್ದಾರ್ ಉಮಾಕಾಂತ ಹಳ್ಳೆ, ವಾಡಿ ನಗರ ಠಾಣೆ ಪಿಎಸ್‌ಐ ವಿಜಯಕುಮಾರ ಭಾವಗಿ, ಕ್ರೈಂ ಪಿಎಸ್‌ಐ ದಿವ್ಯಾ ಮಹಾದೇವ್, ರೈಲು ನಿಲ್ದಾಣ ಪಿಎಸ್‌ಐ ವೀರಭದ್ರಪ್ಪ ಪ್ರಯಾಣಿಕರಿಗೆ ಭದ್ರತೆ ಒದಗಿಸಿದರು.
ಮಂಗಳವಾರ ಬರುವ ರೈಲುಗಳಿಂದಲೂ ಪ್ರಯಾಣಿಕರು ಆಗಮಿಸಲಿದ್ದು, ಎಲ್ಲರಿಗೂ ನಾಗಾವಿ ಕ್ವಾರಂಟೈನ್‌ಗೆ ಕಳುಹಿಸಲಾಗುವುದು ಎಂದು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.