Kalaburagi; ಮುತ್ತಗಾದಲ್ಲಿ ನಂದಿ ಬಸವೇಶ್ವರ ಮೂರ್ತಿ ಧ್ವಂಸ: ವಾರದೊಳಗೆ ಎರಡನೇ ಪ್ರಕರಣ
Team Udayavani, Oct 17, 2023, 4:51 PM IST
ಕಲಬುರಗಿ: ಜಿಲ್ಲೆಯ ಶಹಾಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಂಠಿ ಬಸವೇಶ್ವರ ದೇವಸ್ಥಾನದ ನಂದಿ ಬಸವೇಶ್ವರ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿದ್ದಾರೆ.
ನಂದಿ ಬಸವೇಶ್ವರರ ಮೂರ್ತಿಯನ್ನು ಸಂಪೂರ್ಣ ಧ್ವಂಸಗೊಳಿಸಿ ಅವಮಾನ ಎಸಗಲಾಗಿದ್ದು, ವಾರದಲ್ಲೇ ಜಗಜ್ಯೋತಿ ಬಸವೇಶ್ವರ ಭಾವಚಿತ್ರಕ್ಕೆ ಅವಮಾನ ಎಸಗಿದ ಎರಡನೇ ಪ್ರಕರಣ ಇದಾಗಿದೆ.
ಮುತ್ತಗಾ ಗ್ರಾಮದಲ್ಲಿ ಪ್ರಸಿದ್ದ ಕಂಠಿ ಬಸವೇಶ್ವರ ದೇವಸ್ಥಾನದ ಒಳಗೆ ನುಗ್ಗಿ ನಂದಿ ಬಸವೇಶ್ವರ ಪುತ್ಥಳಿಯನ್ನು ಧ್ವಂಸಗೊಳಿಸಲಾಗಿದೆ.
ವಾರದ ಹಿಂದೆ ಅಂದರೆ ಕಳೆದ ಅ. 10 ರಂದು ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಕೆಲ ಕಿಡಿಗೇಡಿಗಳು ಅವಮಾನಗೊಳಿಸಿರುವ ಪ್ರಕರಣದ ಆರೋಪಿಗಳ ಬಂಧನ ಇನ್ನೂ ಆಗಿಲ್ಲ, ಇದರ ನಡುವೆ ಇದೊಂದು ಘಟನೆ ನಡೆದಿರುವುದು ಸಮಾಜಕ್ಕಾದ ಅವಮಾನ ಎಂದು ವೀರಶೈವ-ಲಿಂಗಾಯತ ಸಮಾಜ ಆಕ್ರೋಶ ವ್ಯಕ್ತಪಡಿಸಿದೆ.
ಸಮಾನತೆ ಸಾರಿದ ಜಗಜ್ಯೋತಿ ಬಸವಣ್ಣನವರಿಗೆ ಅವಮಾನ ಮಾಡಲೆಂದೆ ನಂದಿ ಬಸವೇಶ್ವರ ಪುತ್ಥಳಿ ಒಡೆದು ಹಾಕಲಾಗಿದ್ದು, ಆರೋಪಿಗಳು ಯಾರೇ ಇರಲಿ ಇದ್ದರೂ 24 ಗಂಟೆಯೊಳಗೆ ಬಂಧಿಸಬೇಕೆಂದು ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.
ಹಲಕರ್ಟಿ ಬಸವೇಶ್ವರ ಭಾವಚಿತ್ರ ಅವಮಾನಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಲು ತನಿಖಾ ಕಾರ್ಯ ಕೊನೆ ಹಂತದಲ್ಲಿದೆ. ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಕಾಂಕ್ ಖರ್ಗೆ ಸೋಮವಾರವಷ್ಟೇ ಹೇಳಿಕೆ ನೀಡಿದ್ದಾರೆ. ಈಗ ಮತ್ತೊಂದು ಘಟನೆ ನಡೆದಿರುವುದು ಎಲ್ಲರನ್ನು ಕೆರಳಿಸಿದೆ.
ಮುತ್ತಗಾ ಗ್ರಾಮಕ್ಕೆ ಪೊಲೀಸರು ತೆರಳಿ ಶೋಧನೆ ನಡೆಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಮೇಲಿಂದ ಮೇಲೆ ಇಂತಹ ಅವಮಾನ ಪ್ರಕರಣಗಳು ಯಾಕೆ ನಡೆಯುತ್ತಿವೆ? ಇದರ ಹಿಂದೆ ಯಾರ ಕೈವಾಡವಾದರು ಇದೆ ಎಂಬುದನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಬೇಕು. ಹಲಕರ್ಟಿಯಲ್ಲಿ ನಡೆದ ಪ್ರಕರಣದ ನಡುವೆ ಈ ಪ್ರಕರಣ ನಡೆದಿರುವುದು ಲಿಂಗಾಯತರಿಗೆ ಬಹಳ ನೋವುಂಟು ಮಾಡಿದೆ.ಹೀಗಾಗಿ 24 ಗಂಟೆಯೊಳಗೆ ಪ್ರಕರಣ ಬೇಧಿಸಿ ಆರೋಪಿಗಳನ್ನು ಬಂಧಿಸಬೇಕು. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದರೆ ಲಿಂಗಾಯತರು ರಾಜ್ಯದ್ಯಾಂತ ಹೋರಾಟಕ್ಕಿಳಿಯುವುದು ಅನಿವಾರ್ಯವಾಗುತ್ತದೆ ಎಂದು ಅಖಲ ಭಾರತ ವೀರಶೈವ ಲಿಂಗಾಯತ್ ಮಹಾಸಭಾ ಯುವ ಘಟಕದ ಜಿಲ್ಲಾ ಗೌರವ ಅಧ್ಯಕ್ಷ ಎಂ ಎಸ್ ಪಾಟೀಲ ನರಬೋಳ ಹಾಗೂ ಮುತ್ತಗಾ ಗ್ರಾಮದ ಮುಖಂಡ ಡಾ. ಮಹೇಂದ್ರ ಕೋರಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.