ಡಾ| ಶರಣಪ್ರಕಾಶಗೆ ಶ್ರೇಷ್ಠ ವೈದ್ಯಶ್ರೀ ರಾಷ್ಟ್ರೀಯ ಪ್ರಶಸಿ
Team Udayavani, Dec 27, 2020, 4:55 PM IST
ಕಲಬುರಗಿ: ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್ ಉಡಗಿ ಅವರಿಗೆ ಶ್ರೇಷ್ಠ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹೊಸ ವರ್ಷ 2021ರ ಶುಕ್ರವಾರದಂದು ಡಾ.ಪಿ.ಎಸ್.ಶಂಕರ ಪ್ರತಿಷ್ಠಾನದವತಿಯಿಂದ ಹಮ್ಮಿಕೊಳ್ಳುವ ಸಮಾರಂಭದಲ್ಲಿ ಶ್ರೇಷ್ಠ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಬಾರಿ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ನೀಡಲು ತೀರ್ಮಾನಿಸಲಾಗಿದೆ. ಇತ್ತೀಚೆಗೆ ಜರುಗಿದ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಪ್ರೊ.ನರೇಂದ್ರ ಬಡಶೇಷಿ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವರಾಗಿ ರಾಜ್ಯದಲ್ಲಿ, ವಿಶೇಷವಾಗಿ ಕಲಬುರಗಿಯಲ್ಲಿ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ವಿವಿಧ ಜಿಲ್ಲೆಗಳಲ್ಲಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅನೇಕ ರಾಜ್ಯದ ಜಿಲ್ಲೆಗಳಲ್ಲಿ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯಗಳು ಸ್ಥಾಪಿಸುವುದರಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ಇದಲ್ಲದೆ ಕಲಬುರಗಿಯಲ್ಲಿ ಸ್ಥಾಪನೆಯಾಗಿದ್ದ ಕ್ಯಾನ್ಸರ್ ಆಸ್ಪತ್ರೆಯನ್ನು ನವೀಕರಣ ಹಾಗೂಕ್ರಿಯಾಶೀಲದಿಂದ ಕೆಲಸ ಮಾಡಲು ಡಾ.ಶರಣಪ್ರಕಾಶಪಾಟೀಲರ ಶ್ರಮ ಅರ್ಥಪೂರ್ಣವಾಗಿದೆ. ಇದರ ಜತೆಯಲ್ಲಿ ಜಯದೇವ ಹೃದಯರೋಗ ಆಸ್ಪತ್ರೆಸ್ಥಾಪನೆ ಮತ್ತು ಕ್ರಿಯಾಶೀಲತೆಯಲ್ಲಿ ಅವರ ಕೊಡುಗೆಅಪಾರವಾಗಿದೆ. ಡಾ.ಪಿ.ಎಸ್.ಶಂಕರ ಪ್ರತಿಷ್ಠಾನದವತಿಯಿಂದ ಈ ವರ್ಷ 10,000 ರೂ. ನಗದು ಪುರಸ್ಕಾರ,ಪ್ರಶಸ್ತಿ ಪತ್ರ ನೀಡಿ ಡಾ.ಶರಣಪ್ರಕಾಶ ಪಾಟೀಲ, ಮಾಜಿ ಸಚಿವರಿಗೆ ಗೌರವ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.