ನವ ಚಿತ್ತಾಪುರ ನಿರ್ಮಾಣ ಯಾತೆ
Team Udayavani, Mar 20, 2018, 12:54 PM IST
ಚಿತ್ತಾಪುರ: ಕಾಂಗ್ರೆಸ್‌ನ ನವ ಚಿತ್ತಾಪುರ ನಿರ್ಮಾಣ ಹಾಗೂ ಪಗ್ರತಿಗಾಗಿ ಕಾರ್ಯಕ್ರಮ ಮಾ. 20ರಂದು ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಉದ್ಘಾಟಿಸಲಿದ್ದಾರೆ. ಪಟ್ಟಣದ ಅಮರಾವತಿ (ರಾಯಲ್ ಮೈದಾನ)ದಲ್ಲಿ ನವ ಚಿತ್ತಾಪುರ ನಿರ್ಮಾಣ ಹಾಗೂ ಪಗ್ರತಿಗಾಗಿ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 11:00ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಪಟ್ಟಣದ ಯರಗಲ್ ಕ್ರಾಸ್‌ನಿಂದ ಮೆರವಣಿಗೆಗೆ ಚಾಲನೆ ನೀಡುವರು. ಮೆರವಣಿಗೆ ಪಟ್ಟಣದ ಯರಗಲ್ ಕ್ರಾಸ್‌ನಿಂದ ಕೋರ್ಟ್ ರಸ್ತೆ, ಲಾಡ್ಜಿಂಗ್ ಕ್ರಾಸ್, ಬಸವೇಶ್ವರ ವೃತ್ತ, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಭುವನೇಶ್ವರಿ ಚೌಕ್, ಕಪಡಾ ಬಜಾರ್, ಚಿತ್ತಾವಲಿ ಚೌಕ್ ಮೂಲಕ ಸಾಗಿ ವೇದಿಕೆಗೆ ತಲುಪಲಿದೆ.
ವೇದಿಕೆಯಲ್ಲಿ ಪ್ರಗತಿಗಾಗಿ ಪ್ರಿಯಾಂಕ್ ಖರ್ಗೆ ಎಂಬ ಲಾಂಛನ ಹಾಗೂ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಬಿಡುಗಡೆ ಮಾಡಲಿದ್ದಾರೆ. ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಪಂ ಸದಸ್ಯರು, ತಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು, ಪುರಸಭೆ ಅಧ್ಯಕ್ಷೆ, ಉಪಧ್ಯಕ್ಷ ಹಾಗೂ ಸದಸ್ಯರು, ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು, ವಾಡಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು, ಎಸ್‌ಸಿ-ಎಸ್‌ಟಿ ಘಟಕದ ಅಧ್ಯಕ್ಷರು, ತಾಲೂಕಿನ ಪ್ರತಿಯೊಂದು ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್‌ನ ತಾಲೂಕು ಅಧ್ಯಕ್ಷರು, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಪಟ್ಟಣದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಒಬ್ಬರು ಡಿವೈಎಸ್ಪಿ, ಮೂವರು ಸಿಪಿಐ, ನಾಲ್ವರು ಪಿಎಸ್‌ಐ, 17 ಜನ ಎಎಸ್‌ಐ, 41 ಜನ ಎಚ್‌ಸಿ-ಪಿಸಿ, 54 ಜನ ಪಿಸಿ, 8 ಜನ ಮಹಿಳಾ ಪೇದೆ ಒಳಗೊಂಡು ಸೂಕ್ತ ರೀತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾದೆ.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾಕಲಾಗಿರುವ ಬ್ಯಾನರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಸದಸ್ಯ ಡಾ| ಮಲ್ಲಿಕಾರ್ಜುನ ಖರ್ಗೆ, ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜಕೀಯ ಗಣ್ಯರ ಭಾವಚಿತ್ರಗಳು ರಾರಾಜಿಸುತ್ತಿವೆ. ನವ ಚಿತ್ತಾಪುರ ನಿರ್ಮಾಣ ಹಾಗೂ ಪಗ್ರತಿಗಾಗಿ ಪ್ರಿಯಾಂಕ್ ಖರ್ಗೆ ಕೈಪಿಡಿಯನ್ನು ತಾಲೂಕು ಹಾಗೂ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಇಡೀ ರಾಜ್ಯದಲ್ಲಿಯೇ ಆಗದ ರೀತಿಯಲ್ಲಿ ಪಟ್ಟಣದಲ್ಲಿ ಮಾದರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ.
ಪ್ರಿಯಾಂಕ್ ಖರ್ಗೆ, ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.