ಕವಿರಾಜಮಾರ್ಗ ನೀಡಿದ ನೆಲಕ್ಕಿಲ್ಲ ನೆಲೆ: ಪೋತೆ
Team Udayavani, Aug 22, 2017, 11:02 AM IST
ಸೇಡಂ: ಕನ್ನಡಕ್ಕೆ ಮೊಟ್ಟ ಮೊದಲ ಕೃತಿ ಕವಿರಾಜಮಾರ್ಗ ನೀಡಿದ ನೆಲ ಮಳಖೇಡಕ್ಕೆ ರಾಜ್ಯದಲ್ಲಿ ಮಾನ್ಯತೆ ದೊರೆಯುತ್ತಿಲ್ಲ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗ ಮುಖ್ಯಸ್ಥ ಡಾ| ಎಚ್.ಟಿ. ಪೋತೆ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಮತ್ತು ಡಾ| ಭೀಮಣ್ಣ ಎಚ್. ರಚಿತ ಕಾಯಕ ಯೋಗಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು
ಮಾತನಾಡಿದರು. ಹೈಕ ಭಾಗ ಇಡೀ ದೇಶಕ್ಕೆ ಅನೇಕ ಐತಿಹಾಸಿಕ ಕೊಡುಗೆ ನೀಡಿದೆ. ಆಗಿನ ಕಾಲಕ್ಕೆ ರಾಜ್ಯದ
ರಾಜಧಾನಿಯಾಗಿದ್ದ ಮಾನ್ಯಖೇಟ (ಈಗಿನ ಮಳಖೇಡ) ವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯುವ ಹಂಬಲ ಸ್ಥಳೀಯರಲ್ಲಿ ಮೂಡಬೇಕು ಎಂದು ಹೇಳಿದರು. 12ನೇ ಶತಮಾನದ ಶರಣ ಬಸವಣ್ಣ ಜನರ ಸಂಸ್ಕೃತಿಯಾಗಬೇಕು. ಸಂವಿಧಾನ ರಚಿಸಿದ ಡಾ| ಬಿ.ಆರ್. ಅಂಬೇಡ್ಕರ್ ನಮ್ಮ ಕನಸಾಗಬೇಕು. ಸತ್ಯದ ಮಾರ್ಗ ತೋರಿದ ಗೌತಮ ಬುದ್ಧ ಮತ್ತು ಮಹಾತ್ಮಾ ಗಾಂಧೀಜಿ ನಮ್ಮ ಬದುಕಾಗಬೇಕು. ಇವರೆಲ್ಲರ ದೇಶ ಪ್ರೇಮದಿಂದ ಇಂದಿಗೂ ಸಹ ಶಾಂತಿ, ಸೌಹಾರ್ದತೆ ಮನೆ ಮಾಡಿದೆ ಎಂದು ಹೇಳಿದರು. ಕಾಲೇಜಿನ ವಿದ್ಯಾರ್ಥಿ ಮಹೇಶ ಕಾಳಗಿ ರಚಿತ ಅನೇಕ ಕವಿತೆಗಳನ್ನು ಪಠ್ಯಪುಸ್ತಕದಲ್ಲಿ ಸೇರಿಸುವ ಸಂಬಂಧ ಚಿಂತನೆ ನಡೆದಿದೆ ಎಂದು ಹೇಳಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ ಮಾತನಾಡಿದರು. ಪ್ರಾಂಶುಪಾಲ ಡಾ| ಶಿವಶರಣಪ್ಪ ಧಾಬಾ, ದೈಹಿಕ ಶಿಕ್ಷಕ ಡಾ| ಜಗನ್ನಾಥ ಪಟ್ಟಣಕರ್, ಪ್ರೊ| ಬಿ. ಶಾಂತಪ್ಪ, ಡಾ| ಮಲ್ಲಿಕಾರ್ಜುನ ಮುಗಳಿ, ಡಾ| ರಾಜಕುಮಾರ ಸಲಗರ್, ಡಾ| ಸಂತೋಷಸಿಂಗ್ ಬಯಾಸ್, ಡಾ| ಭೀಮಣ್ಣ ಎಚ್. ಇದ್ದರು. ಬಸವರಾಜ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.