ಮಗುವಿನ ಸಂಪರ್ಕಕ್ಕೆ ಬಂದ ಯುವತಿಗೂ ಕೋವಿಡ್-19 ದೃಢ: ಕಲಬುರಗಿಯಲ್ಲಿ ಸೋಂಕಿತರ 18ಕ್ಕೆ ಏರಿಕೆ
Team Udayavani, Apr 16, 2020, 2:38 PM IST
ಕಲಬುರಗಿ: ಮಹಾಮಾರಿ ಕೋವಿಡ್-19 ಸೋಂಕಿತ ಒಂದು ವರ್ಷದ ಮಗುವಿನ ನೇರ ಸಂಪರ್ಕಕ್ಕೆ ಬಂದಿದ್ದ 23 ವರ್ಷದ ಯುವತಿಗೆ ಗುರುವಾರ ಸೋಂಕು ದೃಢ ಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್-19 ರೋಗ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಕಲಬುರಗಿ ನಗರದ ಈ ಯುವತಿಗೆ ಕೋವಿಡ್-19 ಸೋಂಕು ಖಚಿತವಾಗಿದ್ದು, ಇಎಸ್ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ತಾಲೂಕಿನ ಕವಲಗಾ (ಬಿ) ಗ್ರಾಮದ ಒಂದು ವರ್ಷದ ಗಂಡು ಮಗುವಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು.
ಜಿಲ್ಲೆಯಲ್ಲಿ ಒಟ್ಟಾರೆ ಇದುವರೆಗೆ 18 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಇದರಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 34 ಹೊಸ ಪ್ರಕರಣಗಳು ಖಚಿತವಾಗಿದ್ದು, ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.