ಗ್ರಾಪಂ ಗ್ರಂಥಾಲಯಕ್ಕೆ ನವರೂಪ
Team Udayavani, Oct 19, 2021, 11:41 AM IST
ವಾಡಿ: ಜ್ಞಾನ ದೇಗುಲ ಗ್ರಂಥಾಲಯಕ್ಕೆ ನೂತನ ರೂಪ ನೀಡಿ, ಓದುಗರ ಗಮನ ಸೆಳೆಯಲು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮ ಪಂಚಾಯಿತಿ ಶ್ರಮಿಸುತ್ತಿದ್ದು, ಪ್ರಸಕ್ತ ವರ್ಷ ಜಿಲ್ಲಾ ಪಂಚಾಯಿತಿ ಕ್ಷೇತ್ರವಾಗಿಯೂ ಗುರುತಿಸಿಕೊಂಡಿದೆ.
ಗ್ರಾಮಕ್ಕೆ ಮಂಜೂರಾಗಿರುವ ಸಾರ್ವಜನಿಕ ಗ್ರಂಥಾಲಯ ಇದುವರೆಗೂ ಜಿಲ್ಲಾ ಗ್ರಂಥಾಲಯ ಇಲಾಖೆ ಅಧೀನದಲ್ಲಿ ನಡೆಯುತ್ತಿತ್ತು. ಇದೀಗ ಗ್ರಂಥಾಲಯ ನಿರ್ವಹಣೆ ಜವಾಬ್ದಾರಿಯನ್ನು ಪಂಚಾಯತಿ ಆಡಳಿತಕ್ಕೆ ಒಪ್ಪಿಸಲಾಗಿದೆ.
ದಲಿತಪರ ಹೋರಾಟಗಾರ ಸುಭಾಷ ಯಾಮೇರ ವರ್ಷದ ಹಿಂದೆ ಗ್ರಾಪಂಗೆ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಧೂಳಿನಿಂದ ಕೂಡಿದ್ದ ಗ್ರಂಥಾಲಯಕ್ಕೆ ಹೊಸ ರೂಪ ಬಂದಿದೆ.
ಗ್ರಾಮಾಭಿವೃದ್ಧಿ ಜತೆಗೆ ಗ್ರಂಥಾಲಯಕ್ಕೂ ಜೀವ ನೀಡಲು ಮುಂದಾದ ಸುಭಾಷ ಯಾಮೇರ, ಅಭಿವೃದ್ಧಿ ಅಧಿಕಾರಿ ರೇಷ್ಮಾ ಕೋತ್ವಾಲ ಸಹಕಾರ ಪಡೆದು ನೂತನ ಪೀಠೊಪಕರಣ ಖರೀದಿಗೆ ಮುಂದಾದರು. ಮೂಲೆ ಸೇರಿದ್ದ ಅಪಾರ ಮೌಲ್ಯದ ಸಾವಿರಾರು ಸಾಹಿತ್ಯ ಕೃತಿಗಳನ್ನು ಮೆತ್ತಿದ್ದ ಧೂಳು ಜಾಡಿಸಿ ಕಪಾಟಿನಲ್ಲಿ ಜೋಡಿಸಿಟ್ಟಿದ್ದಾರೆ.
ಇದನ್ನೂ ಓದಿ: ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ
ಓದುವ ಕೋಣೆಗೆ ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಕುರ್ಚಿ, ಮೇಜುಗಳಿಂದ ಕಂಗೊಳಿಸುತ್ತಿರುವ ಗ್ರಂಥಾಲಯ ಕೋಣೆ ಈಗ ಓದುಗರನ್ನು ಸೆಳೆಯುತ್ತಿದೆ. ವಿದ್ಯಾರ್ಥಿಗಳು ಗ್ರಂಥಾಲಯದ ಲಾಭ ಪಡೆಯುತ್ತಿದ್ದಾರೆ. ಅಲ್ಲದೇ ಗ್ರಾಮದ ಅಗಸಿ ಕಟ್ಟೆ ಮೇಲೆ ಹರಟೆ ಹೊಡೆಯುತ್ತಿದ್ದ ವಿದ್ಯಾವಂತರೂ ಈಗ ಗ್ರಂಥಾಲಯಕ್ಕೆ ಆಗಮಿಸಿ ತಮ್ಮ ಜ್ಞಾನ ಹೆಚ್ಚಿಸಿಕೊಳ್ಳುತ್ತಿದ್ದಾರೆ.
ಜ್ಞಾನದ ಹರಿವು ಹೆಚ್ಚಿಸುವ ಸಾಹಿತ್ಯ ಕೃತಿಗಳ ದರ್ಶನ ನಮ್ಮೂರಿನ ಜನರಿಗೂ ಆಗಬೇಕು ಎನ್ನುವ ಉದ್ದೇಶದಿಂದ ಗ್ರಂಥಾಲಯ ಸುಧಾರಣೆಗೆ ಕ್ರಮ ಕೈಗೊಂಡಿದ್ದೇವೆ. ಅಧಿಕಾರಿಗಳು ಮತ್ತು ವಾರ್ಡ್ ಸದಸ್ಯರು ಸಹಕಾರ ನೀಡಿದ್ದಾರೆ. ನಾಡಿನ ಹಿರಿಯ ಸಾಹಿತಿಗಳ ಕೃತಿಗಳನ್ನು ಇನ್ನಷ್ಟು ಖರೀದಿಸಿ ತರುವ ಆಲೋಚನೆಯಿದೆ. –ಸುಭಾಷ ಯಾಮೇರ, ಗ್ರಾಪಂ ಅಧ್ಯಕ್ಷ
-ಮಡಿವಾಳಪ್ಪ ಹೇರೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.