ರಾತ್ರಿ ಕರ್ಫ್ಯೂ ಜಾರಿ: ಪೊಲೀಸ್‌ ಆಯುಕ್ತ ರವಿಕುಮಾರ ಆದೇಶ


Team Udayavani, Dec 29, 2021, 8:22 PM IST

್ಗಹರಯಜಯಹಗ್

ಕಲಬುರಗಿ: ಕೋವಿಡ್‌ ರೂಪಾಂತರಿ ಓಮಿಕ್ರಾನ್‌ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಮಂಜಾಗೃತ ವಾಗಿ ನಗರಾದ್ಯಂತ ಮಂಗಳವಾರದಿಂದ ಜನವರಿ 7ರ ವರೆಗೆ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ಸಿಆರ್‌ಪಿಸಿ ಕಾಯ್ದೆ 1973ರ ಕಲಂ 144ರ ಅನ್ವಯ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಡಾ| ವೈ.ಎಸ್‌. ರವಿಕುಮಾರ ಆದೇಶ ಹೊರಡಿಸಿದ್ದಾರೆ.

ರಾತ್ರಿ ಕರ್ಫ್ಯೂ ಅವ ಧಿಯಲ್ಲಿ ಪ್ರತಿನಿತ್ಯ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ವ್ಯಕ್ತಿಗಳ ಸಂಚಾರ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇ ಧಿಸಲಾಗಿದೆ. ಆದರೆ, ಔಷಧಾಲಯಗಳು ಸೇರಿ ದಂತೆ ವೈದ್ಯಕೀಯ, ತುರ್ತು ಹಾಗೂ ಅಗತ್ಯ ಸೇವೆಗಳು ಸಂಪೂರ್ಣ ಕಾರ್ಯನಿರ್ವಹಿಸುತ್ತವೆ. ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿ ಸಲಾಗಿದೆ. ಲಾರಿಗಳು, ಸರಕು ವಾಹನಗಳು ಹಾಗೂ ಖಾಲಿ ವಾಹನಗಳು ಸೇರಿದಂತೆ ಎಲ್ಲ ರೀತಿಯ ಸರಕುಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಹೇಳಿದ್ದಾರೆ.

ತುರ್ತು ಅಗತ್ಯವಿರುವ ರೋಗಿಗಳು ಮತ್ತು ಅವರ ಪಾಲಕರ ಸಂಚಾರಕ್ಕೆ ಅನುಮತಿಸಲಾಗಿದೆ. ರಾತ್ರಿಯಲ್ಲಿ ಕಾರ್ಯಾಚರಣೆಗೆ ಅಗತ್ಯವಿರುವ ಕೈಗಾರಿಕೆಗಳು, ಕಂಪನಿಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದು, ಅಂತಹ ಸಂಸ್ಥೆಗಳ ನೌಕರರು ಆಯಾ ಸಂಸ್ಥೆ ನೀಡುವ ಗುರುತಿನಚೀಟಿ ಪ್ರದರ್ಶಿಸಿದಲ್ಲಿ ಅನುಮತಿಸಲಾಗುತ್ತದೆ. ಟೆಲಿಕಾಂ, ಅಂತರ್ಜಾಲ ಸೇವಾ ಪೂರೈಕೆದಾರರ ನೌಕರರು ಮತ್ತು ವಾಹನಗಳು ಆಯಾ ಸಂಸ್ಥೆ ನೀಡುವ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಾಮಗ್ರಿಗಳನ್ನು ಮನೆಗೆ ತಲುಪಿಸಲು ಹಾಗೂ ಇ-ಕಾಮರ್ಸ್‌ ಕಂಪನಿಗಳ ಕಾರ್ಯಾಚರಣೆಗೆ ಅನುಮತಿಸಲಾಗಿದೆ. ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಈ ಸಂದರ್ಭದಲ್ಲಿ ಪ್ರಯಾಣಿಕರು ಪ್ರಯಾಣದ ಟಿಕೇಟ್‌ ನ್ನು ತೋರಿಸಿ ವಿಮಾನ ನಿಲ್ದಾಣಗಳಿಗೆ, ರೈಲು ನಿಲ್ದಾಣಗಳಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿ ಮೂಲಕ ಸಂಚರಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ 4 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇ ಧಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.