ಖಾತ್ರಿಗೆ ಸಿಗುತ್ತಿಲ್ಲ ಕಾರ್ಮಿಕರು
Team Udayavani, Jun 27, 2018, 5:03 PM IST
ವಾಡಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಮುಂದಾದರೂ ಕಾರ್ಮಿಕರು ಸಿಗುತ್ತಿಲ್ಲ. ಯೋಜನೆ ಸಾಕಾರಕ್ಕೆ ಸಾಕಷ್ಟು ಪ್ರಯತ್ನಿಸಿದರೂ ಶ್ರಮಿಕರು ಮುಂದೆ ಬರುತ್ತಿಲ್ಲ ಎಂದು ಲಾಡ್ಲಾಪುರ ಗ್ರಾಪಂ ಪಿಡಿಒ ಗುರುನಾಥರೆಡ್ಡಿ ಹೇಳಿದರು.
ಲಾಡ್ಲಾಪುರ ಗ್ರಾಪಂ ಕಚೇರಿಯಲ್ಲಿ ಮಂಗಳವಾರ ಅಧ್ಯಕ್ಷ ಸಾಬಣ್ಣ ಆನೇಮಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಉದ್ಯೋಗ ಖಾತ್ರಿ ಯೋಜನೆ ಸಾಕಾರಕ್ಕೆ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರ ಅಗತ್ಯವಿದೆ ಎಂದರು. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದ ಹೊರ ವಲಯದ ಕೋಗಿಲ್ಕೆರೆಯ ಹೂಳು ತೆಗೆಸಲು ಚಿಂತಿಸಲಾಗಿದೆ. ಇದರಿಂದ ಗ್ರಾಮಸ್ಥರಿಗೆ ಕೂಲಿಯೂ ಸಿಗುತ್ತದೆ.
ಗ್ರಾಮದ ಕೆರೆಯೊಂದು ಹೂಳಿನಿಂದ ಮುಕ್ತವಾಗಿ ನೀರಿನ ಸೆಲೆ ಹೆಚ್ಚುತ್ತದೆ. ಕೆರೆ ಅಭಿವೃದ್ಧಿಯಾದರೆ ಗ್ರಾಮದ ಸೌಂದರ್ಯ ಮತ್ತಷ್ಟು ಹೆಚ್ಚುತ್ತದೆ. ಗ್ರಾಪಂ ಸದಸ್ಯರು ಗ್ರಾಮಸ್ಥರ ಮನವೊಲಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗ್ರಾಪಂ ವ್ಯಾಪ್ತಿಯ ನಿರಾಶ್ರಿತರಿಗೆ ಆಶ್ರಯ ಮನೆಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದ್ಯ 701 ಅರ್ಜಿಗಳು ಗ್ರಾಪಂಗೆ ಸಲ್ಲಿಕೆಯಾಗಿವೆ.
ಫಲಾನುಭವಿಗಳ ಆಯ್ಕೆ ಕಾರ್ಯವನ್ನು ವಸತಿ ನಿಗಮ ಮಾಡಲಿದೆ. ಇನ್ನುಮುಂದೆ ಒಟ್ಟು ಆಸ್ತಿ ಮೌಲ್ಯದ ಆಧಾರದಡಿ ತೆರಿಗೆ ಪಡೆಯುವಂತೆ ರಾಜ್ಯ ಸರಕಾರ ಆದೇಶ ನೀಡಿದೆ ಎಂದು ಸದಸ್ಯರ ಗಮನ ಸೆಳೆದರು. ಇದಕ್ಕೆ ಸರ್ವ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು.
ಗ್ರಾಪಂ ಸದಸ್ಯ ಮಲ್ಲಿಕಾರ್ಜುನ ಬೆಳಗೇರಿ ಮಾತನಾಡಿ, ಕೊಂಚೂರು ಗ್ರಾಮದ ಜನತೆಗೆ ಕುಡಿಯಲು ಶುದ್ಧ ನೀರು ಸಿಗುತ್ತಿಲ್ಲ. ಅಶುದ್ಧ ನೀರು ಕುಡಿದು ಆರೋಗ್ಯ ಸಮಸ್ಯೆಉಂಟಾಗುತ್ತಿದೆ. ನೀರು ಶುದ್ಧೀಕರಣ ಘಟಕ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಗ್ರಾಪಂ ಸದಸ್ಯರಾದ ಈರಣ್ಣ ಮಲಕಂಡಿ, ರುದ್ರುಮುನಿ ಮಠಪತಿ, ಮಹಾನಂದಾ ಬಸವರಾಜ, ಶರಣಮ್ಮ ಸಾಬಣ್ಣ,
ಕಾಂತಿಬಾಯಿ ಶಂಕರ, ರಮೇಶ ಡಿಸಿ, ರಾಮು ರೂಪ್ಲಾ, ದ್ಯಾವಮ್ಮ ಭಜಂತ್ರಿ, ಕರ ವಸೂಲಿಗಾರ ಮಲ್ಲಿಕಾರ್ಜುನ
ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.