ಬೇಡಿಕೆಗೆ ತಕ್ಕಂತೆ ಬೀಜ-ರಸಗೊಬ್ಬರ ದಾಸ್ತಾನಿಗೆ ಸೂಚನೆ
Team Udayavani, Jun 7, 2020, 6:51 AM IST
ಕಲಬುರಗಿ: ಈ ವರ್ಷ ಉತ್ತಮ ಮಳೆ ಲಕ್ಷಣಗಳು ಕಂಡು ಬರುತ್ತಿವೆ. ಹೀಗಾಗಿ ಮುಂಗಾಮಿಗೆ ಬೇಕಾಗುವ ಅಗತ್ಯ ಬೀಜಗಳ ದಾಸ್ತಾನು ಮಾಡುವುದು ಬಹಳ ಅಗತ್ಯವಾಗಿದೆ ಎಂದು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು. ಕ್ಷೇತ್ರದ ನರೋಣಾದ ರೈತ ಸಂಪರ್ಕ ಕೇಂದ್ರದಲ್ಲಿ
ಪ್ರಸಕ್ತ ಸಾಲಿನ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಅಲ್ಪಾವಧಿ ಬೆಳೆಗಳಿಗೂ ರೈತರು ಒತ್ತು ನೀಡುವುದರಿಂದ ಹೆಸರು, ಉದ್ದು, ಸೂರ್ಯಕಾಂತಿ ಬೀಜ ಸೇರಿದಂತೆ ಇತರ ಎಲ್ಲ ಬೀಜ ಎಲ್ಲೂ ಕೊರತೆಯಾಗದಂತೆ ನೋಡಿಕೊಳ್ಳಿ ಎಂದರು.
ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರಕ್ಕೂ ಆದ್ಯತೆ ನೀಡಿ, ರೈತ ಸಂಪರ್ಕಕ್ಕೆ ಬರುವ ರೈತರಿಗೆ ಕೊರೊನಾ ಕುರಿತು ಮಾಹಿತಿ ನೀಡಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್ ದಿಂದ ಸಂಕಷ್ಟಕ್ಕೆ ಒಳಗಾಗಿರುವ ತೋಟಗಾರಿಕೆ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ಪ್ರಕಟಿಸಿದ್ದಾರೆ. ಹೂವಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರೈತರ ಸಮೀಕ್ಷೆ ನಡೆದಿದೆ ಎಂದರು. ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಜಿಪಂ ಸದಸ್ಯೆ ವಿಜಯಲಕ್ಷ್ಮೀ ರಾಗಿ, ಆಳಂದ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ್, ನರೋಣಾ ಕೃಷಿ ಅಧಿಕಾರಿ ಬಸವರಾಜ ಅಟ್ಟೂರ, ಸಹಾಯಕ ಕೃಷಿ ಅಧಿಕಾರಿಗಳಾದ ಅಫ್ರೋಜಾ, ಸುರೇಖಾ ಅಂಕಲಗಿ, ಲೆಕ್ಕ ಸಹಾಯಕ ಶರಣು ಹಿರೇಗೌಡ, ಎಟಿಎಂ ಲಕ್ಷ್ಮೀಪುತ್ರ ಸ್ವಾಮಿ, ಕಲಬುರಗಿ ಗ್ರಾಮೀಣ ಮಂಡಲದ ಅಧ್ಯಕ್ಷ ಸಂಗಮೇಶ ವಾಲಿ, ರೈತ ಮುಖಂಡರಾದ ವೀರೂ ಸ್ವಾಮಿ, ಶಂಭುಲಿಂಗ ಡೆಂಕಿ, ಮಂಜು ಕೊರೆ, ವಿಠಲ ಸೇರಿದಂತೆ ಮುಂತಾದವರಿದ್ದರು.
ರೈತ ಸಂಪರ್ಕ ಕೇಂದ್ರದಿಂದ ಸಿಗುವ ಸಬ್ಸಿಡಿ ಬೀಜ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಅಧಿಕಾರಿಗಳಿಂದ ಸಲಹೆ ಪಡೆದು ಬೆಳೆ ಬೆಳೆದು ಉತ್ತಮ ಇಳುವರಿ ಪಡೆಯಬೇಕು.-ಬಸವರಾಜ ಮತ್ತಿಮಡು, ಶಾಸಕರು.
ಆಳಂದ ತಾಲೂಕಿನಲ್ಲಿ 1,31,131 ಹೆಕ್ಟೇರ್‌ನಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಮುಂಗಾರು ಆರಂಭದ ಮುಂಚೆಯೇ ರೋಹಿಣಿ ಉತ್ತಮವಾಗಿ ಬರುತ್ತಿದೆ. ಬಿತ್ತನೆ ಸಕಾಲಕ್ಕೆ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿರುವುದರಿಂದ ಎಲ್ಲ ಅಗತ್ಯ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಪ್ರಮುಖವಾಗಿ ತೊಗರಿ, ಉದ್ದು, ಹೆಸರು, ಸೂರ್ಯಕಾಂತಿ, ಮೆಕ್ಕೆಜೋಳ, ಸಜ್ಜೆ ಬೀಜ ಲಭ್ಯವಿದೆ. – ಶರಣಗೌಡ ಪಾಟೀಲ, ಸಹಾಯಕ ಕೃಷಿ ಅಧಿಕಾರಿ ಆಳಂದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.