ಕಡಗಂಚಿ ಶ್ರಮಿಕರ ಆರ್ಥಿಕ ಆಸರೆ ಖಾತ್ರಿ


Team Udayavani, Jun 3, 2021, 8:47 PM IST

fghjhgfdsaXBMNBFDSAgfehghghgg

ಆಳಂದ: ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಇರುವ ತಾಲೂಕಿನ ಕಡಗಂಚಿ ಗ್ರಾಮ ಪಂಚಾಯಿತಿ ಪ್ರದೇಶ ಈಗ ಭೂಪಟದಲ್ಲಿ ಶೈಕ್ಷಣಿಕ ಕ್ಷೇತ್ರವಾಗಿ ಮಿಂಚುತ್ತಿದೆ.

ವಾಗರಿ-ರಿಬ್ಬನಪಲ್ಲಿ ಹೆದ್ದಾರಿಯ ಜಿಲ್ಲಾ ಕೇಂದ್ರ ಕಲಬುರಗಿ, ತಾಲೂಕು ಕೇಂದ್ರ ಆಳಂದ ಮಾರ್ಗ ಮಧ್ಯದಲ್ಲಿ ಇರುವ ಈ ವಿಶ್ವವಿದ್ಯಾಲಯ ಕಡಗಂಚಿ ಗ್ರಾಮಕ್ಕೆ ಹೊಂದಿಕೊಂಡಿದೆ. ಇದಕ್ಕೆ ರಾಜ್ಯ ಸರ್ಕಾರ ಮತ್ತು ರೈತರು ಸುಮಾರು 600 ಎಕರೆ ನಿವೇಶನ ನೀಡಿದ್ದಾರೆ. ಇಲ್ಲಿನ ಗ್ರಾಪಂನಿಂದ ವಿಶ್ವ ವಿದ್ಯಾಲಯಕ್ಕೆ ಉದ್ಯೋಗ ಖಾತ್ರಿ ಯೋಜನೆಗಳಿಂದ ಆರಂಭದಲ್ಲಿ ಅರಣ್ಯೀಕರಣಕ್ಕೆ ಸಾಥ್‌ ನೀಡಿದ ಹೆಗ್ಗಳಿಕೆಯೂ ಇದೆ.

ಧರ್ಮವಾಡಿ ಮತ್ತು ಬಸವಂತವಾಡಿ ಗ್ರಾಮಗಳು ಕಡಗಂಚಿ ವ್ಯಾಪ್ತಿಗೆ ಬರುತ್ತವೆ. ಇಲ್ಲಿನ ಬಹುತೇಕ ಜನರು ಕೃಷಿಕರು. ಹೆಚ್ಚು ಶಿಕ್ಷಣ ಪಡೆದು ಸರ್ಕಾರಿ ಹುದ್ದೆಯಲ್ಲಿ ಇದ್ದವರು ಇಲ್ಲಿದ್ದಾರೆ. ಅಲ್ಲದೇ ಎಸ್‌.ಎಸ್‌. ಪಾಟೀಲ ಅವರಂತ ದೇಶದ ದೊಡ್ಡ ಉದ್ಯಮಿಯನ್ನು ಪಡೆದ ಗ್ರಾಮ ಎನ್ನುವ ಹೆಗ್ಗಳಿಕೆಯೂ ಇದೆ. ಈ ಗ್ರಾಮದಲ್ಲಿ ದುಡಿಯುವ ಕೂಲಿ ಕಾರ್ಮಿಕರು ಇದ್ದಾರೆ. ಕೊರೊನಾ ಕರ್ಫ್ಯೂ, ಲಾಕ್‌ಡೌನ್‌ದಿಂದ ಈ ಕಾರ್ಮಿಕರು ಕೆಲಸವಿಲ್ಲದೇ ಕಂಗಾಲಾಗಿರುವ ಪರಿಸ್ಥಿತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಕೈಹಿಡಿದು ಬದುಕಿಗೆ ಆರ್ಥಿಕ ಆಶ್ರಯ ನೀಡಿದೆ.

ಗ್ರಾಪಂನಿಂದ ಒಟ್ಟು 1.80 ಕೋಟಿ ರೂ. ಕಾಮಗಾರಿ ಕೈಗೊಳ್ಳುವ ಗುರಿ ಹೊಂದಲಾಗಿದೆ. ಆದರೆ ಕೋವಿಡ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಕಾಮಗಾರಿಗೆ ತಾತ್ಕಾಲಿಕವಾಗಿ ತಡೆಯೊಡ್ಡಿದ್ದರಿಂದ ಸದ್ಯ 39 ಲಕ್ಷ ರೂ. ವೆಚ್ಚದಲ್ಲಿ ಬದು ನಿರ್ಮಾಣ, 15 ಲಕ್ಷ ರೂ.ಗಳಲ್ಲಿ ಗ್ರಾಮದ ಒಂದು ಕೆರೆಯನ್ನು ಐದು ಭಾಗವಾಗಿ ಹೂಳೆತ್ತಲಾಗಿದೆ. ಅಲ್ಲದೇ ನಾಲಾ ಹೂಳೆತ್ತಿದ್ದು, ಜಮೀನುಗಳಲ್ಲಿ ಬದು ನಿರ್ಮಾಣ ಕಾಮಗಾರಿಯಿಂದ ರೈತರಿಗೆ, ಕಾರ್ಮಿಕರಿಗೆ ಅನುಕೂಲವಾಗಿದೆ.

ಒಟ್ಟು ಮಹಿಳೆಯರು ಮತ್ತು ಪುರುಷರು ಸೇರಿ 2024 ಮಂದಿ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದಾರೆ. ಈಗಾಗಲೇ ಕೈಗೊಂಡ ಕಾಮಗಾರಿಯಲ್ಲಿ ದುಡಿದವರಿಗೆ 39 ಲಕ್ಷ ರೂ. ಕೂಲಿ ಪಾವತಿಯಾಗಿದೆ. ಕಾಮಗಾರಿಯಲ್ಲಿ 14676 ಮಾನವ ದಿನಗಳನ್ನು ಸೃಜಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 28 ಲಕ್ಷ ರೂ. ವೆಚ್ಚದಲ್ಲಿ ಗ್ರಾಪಂ ಕಟ್ಟಡ ಕಾಮಗಾರಿಗೆ ಅನುಮೋದನೆ ದೊರೆತಿದೆ.

ತ್ಯಾಜ್ಯವಸ್ತುಗಳ ವಿಲೇವಾರಿ ಘಟಕ ಸ್ಥಾಪನೆ ಕಾಮಗಾರಿಯನ್ನು ಕೊರೊನಾ ಲಾಕ್‌ಡೌನ್‌ ನಿಯಂತ್ರಣದ ಸಾಧಕ-ಬಾಧಕ ನೋಡಿ ಆರಂಭಿಸುವ ಕುರಿತು ಸಿದ್ಧತೆ ನಡೆದಿದೆ ಎನ್ನುತ್ತಾರೆ ಕಡಗಂಚಿ ಉಪಾಧ್ಯಕ್ಷೆ ಇಂದುಮತಿ ದತ್ತಪ್ಪಾ ಮಾದಗೊಂಡ.

-ಮಹದೇವ ವಡಗಾಂವ

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.