ಸಮಸ್ಯೆ ಆಲಿಸದ ಅಧಿಕಾರಿಗಳು: ರೈತರ ಅಸಮಾಧಾನ

Team Udayavani, Jul 22, 2017, 12:28 PM IST

22-GUB-8.jpg

ಅಫಜಲಪುರ: ಸರ್ಕಾರಗಳು ಎಷ್ಟೇ ರೈತ ಪರ ನಿಯಮಗಳನ್ನು ರೂಪಿಸಿದರೂ ರೈತರಿಗೆ ಅನ್ಯಾಯವಾಗುತ್ತಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ರೈತರು ಆರೋಪಿಸಿದರು.

ಪಟ್ಟಣದ ತಹಸೀಲ್‌ ಕಚೇರಿಯಲ್ಲಿ ತಹಶೀಲ್ದಾರ ಶಶಿಕಲಾ ಪಾದಗಟ್ಟಿ ನೇತೃತ್ವದಲ್ಲಿ ನಡೆದ ಇಲಾಖೆಗಳ ಅಧಿಕಾರಿಗಳು, ರೈತ ಮುಖಂಡರ ಮತ್ತು ರೈತರ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕು ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ರಮೇಶ ಹೂಗಾರ, ಪ್ರಾಂತ ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ ಮಾತನಾಡಿ, 2013-14ನೇ ಸಾಲಿನಲ್ಲಿ ರೆಣುಕಾ ಸಕ್ಕರೆ ಕಾರ್ಖಾನೆಯವರು ರೈತರ ಖಾತೆಗೆ 100 ರೂ. ಹಾಕಬೇಕಿತ್ತು. ಆದರೆ ಇದುವರೆಗೂ ಹಾಕಿಲ್ಲ. ಕೇಳಿದರೆ ಸಕ್ಕರೆ ಬಿಡುಗಡೆಯಾದ ಬಳಿಕ ಹಾಕುತ್ತೇವೆ, ಕೋರ್ಟ್ ನಲ್ಲಿ ಇತ್ಯರ್ಥ ಆಗಬೇಕೆಂದು ವಿನಾ ಕಾರಣ ಕಾಲ ಹರಣ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನ್ಯಾಯಾಲಯವೇ ಹಣ ಹಾಕುವಂತೆ ಸೂಚಿಸಿದರೂ ರೇಣುಕಾ ಸಕ್ಕರೆ ಕಾರ್ಖಾನೆಯವರು ಆದೇಶ ಪಾಲಿಸುತ್ತಿಲ್ಲ. ತಾಲೂಕಿನ ರೈತರೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ಈಗ ಸಭೆಗೆ ಸಂಬಂಧ ಪಟ್ಟವರು ಬರುವುದು ಬಿಟ್ಟು ಸಹಾಯಕರನ್ನು ಕಳುಹಿಸಿದ್ದೇ ಇದಕ್ಕೆ ಸಾಕ್ಷಿ ಎಂದು ಆರೋಪಿಸಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ರಾಜಕುಮಾರ ಬಡದಾಳ ಮಾತನಾಡಿ, ಬೆಳೆ ಹಾನಿ, ಫಸಲ್‌ ಭೀಮಾ ಯೋಜನೆಯಲ್ಲಿ ತಾಲೂಕಿನ ರೈತರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ ಅವರಿಗೆ ಹೇಳಿದರು. ಇದಕ್ಕೆ ಉತ್ತರಿಸಿದ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ, ಫಸಲ್‌ ಭೀಮಾ ಇನ್ಸೂರೆನ್ಸ್‌ 2016-17ರಲ್ಲಿ ಜಿಲ್ಲೆಯ ಸೇಡಂ, ಚಿತ್ತಾಪುರ ಹಾಗೂ ಚಿಂಚೋಳಿ ತಾಲೂಕುಗಳಿಗೆ ಬಂದಿದೆ ಎಂಬ ಮಾಹಿತಿ ಇದೆ. ಆದರೆ ಸರಿಯಾದ ಸ್ಪಷ್ಟತೆ ಇಲ್ಲ. ಈ ಕುರಿತಾಗಿ ಜಿಲ್ಲಾಧಿಕಾರಿಗಳು ಉಳಿದ ತಾಲೂಕುಗಳಿಗೆ ಯಾಕೆ ಬಂದಿಲ್ಲ ಎಂದು ಮಾಹಿತಿ ಕೇಳಿದ್ದಾರೆ ಎಂದು ಹೇಳಿದರು.

ರೈತ ಸಂಪರ್ಕ ಕೇಂದ್ರಗಳಲ್ಲಿ ಬೆಲೆ ನಿಗದಿ ಫಲಕ ಅಳವಡಿಸುತ್ತಿಲ್ಲ, ಸರ್ಕಾರದ ಸಬ್ಸಿಡಿ ಏನೆಂದು ರೈತರಿಗೆ ತಿಳಿಯುತ್ತಿಲ್ಲ. ಇದರಿಂದ ಮಧ್ಯವರ್ತಿಗಳು ಲಾಭ ಪಡೆದುಕೊಳ್ಳುತ್ತಿದ್ದಾರೆ. ಇದರಲ್ಲಿ ಭಾರಿ ಮೋಸ ನಡೆದಿದೆ ಎಂದು ರೈತರುಆರೋಪಿಸಿದರು. ಪಶು ಸಂಗೋಪನಾ ಇಲಾಖೆ ಅಧಿಕಾರಿ ಕೆ. ಎಂ ಕೋಟೆ ಮಾತನಾಡಿ, ಸದ್ಯ ಪಶು ಭಾಗ್ಯ ಯೋಜನೆ ಅಡಿಯಲ್ಲಿ ಅರ್ಜಿಗಳನ್ನು ಕರೆಯಲಾಗಿದೆ. ಅಗಸ್ಟ್‌ 4 ಕೊನೆ ದಿನವಾಗಿದೆ. ಯೋಜನೆಯಲ್ಲಿ ಎಮ್ಮೆ, ಆಡು, ಕೋಳಿ ಸಾಕಾಣಿಕೆ ಮಾಡಬಹುದು. ಆಸಕ್ತರು ಅರ್ಜಿಗಳನ್ನು ಕಚೇರಿಗೆ ಸಲ್ಲಿಸಬೇಕು. ಪರಿಶಿಷ್ಟ ಜಾತಿ/ಪಂಗಡದವರಿಗೆ 50, ಸಾಮಾನ್ಯ ವರ್ಗದವರಿಗೆ 25 ಪ್ರತಿಶತ ಸಬ್ಸಿಡಿ ಇರುತ್ತದೆ ಎಂದು ಹೇಳಿದರು.

ಪಶು ಇಲಾಖೆಯಲ್ಲಿ ಅರ್ಜಿ ಫಾರಂಗಳಿಗೆ 5ರಿಂದ 10 ರೂ. ಪಡೆಯಲಾಗುತ್ತಿದೆ. ಜಾನುವಾರುಗಳ ಮೇವಿಗಾಗಿ ಸರ್ಕಾರ
ಉಚಿತವಾಗಿ ನೀಡುವ ಮೆಕ್ಕೆಜೋಳ, ಜೋಳದ ಬೀಜಕ್ಕೆ ಒಂದೊಂದು ಬ್ಯಾಗಿಗೆ 50 ರೂ. ಪಡೆಯಲಾಗುತ್ತಿದೆ ಎಂದು ರೈತರಾದ ಭಾಗಪ್ಪ ಮಾಂಗ್‌, ನಿಂಗಪ್ಪ ಕೊನಳ್ಳಿ ಆರೋಪಿಸಿದರು.

ತಾಲೂಕಿನ ವಿವಿಧ ರೈತ ಸಂಘಗಳ ಮುಖಂಡರು, ರೈತರು ಮತ್ತು ರೇಣುಕಾ ಸಕ್ಕರೆ ಕಾರ್ಖಾನೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.