ಕರ್ತವ್ಯ ಲೋಪ; ಪಿಎಸ್‌ಐ ಅಮಾನತು

ಕಾಂಗ್ರೆಸ್‌-ಕೋಲಿ ಸಮಾಜ ಮುಖಂಡರಿಂದ ತಡರಾತ್ರಿವರೆಗೂ ಧರಣಿ,ಎಸ್‌ಪಿ ಆದೇಶ

Team Udayavani, Jan 5, 2021, 12:45 PM IST

ಕರ್ತವ್ಯ ಲೋಪ; ಪಿಎಸ್‌ಐ ಅಮಾನತು

ಕಲಬುರಗಿ: ಜೇವರ್ಗಿ ತಾಲೂಕಿನ ಜೈನಾಪುರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ನಂತರ ನಡೆದ ಗಲಾಟೆಯಲ್ಲಿ ತಾಯಿಯೊಂದಿಗೆ ಜೈಲು ಸೇರಿದ್ದ ಬಾಲಕಿ ಭಾರತಿ ಸಾವಿನ ಪ್ರಕರಣದಲ್ಲಿ ಜೇವರ್ಗಿ ಪಿಎಸ್‌ಐ ಮಂಜುನಾಥ ಹೂಗಾರಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್‌ಐ ಮಂಜುನಾಥ ಹೂಗಾರ ಅವರನ್ನು ಅಮಾನತುಮಾಡಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್‌ ಜಾರ್ಜ್‌ ಆದೇಶಿಸಿದ್ದಾರೆ.

ಜೈನಾಪುರದಲ್ಲಿ ಗ್ರಾಪಂ ಚುನಾವಣೆ ವಿಜೇತ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜು ಸಾಯಿಬಣ್ಣ ತಳವಾರ ಮತ್ತು ಬೆಂಬಲಿಗರು ಪರಾಜಿತಗೊಂಡಿದ್ದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಸಂತೋಷ ತಳವಾರಮುಂದೆ ವಿಜಯೋತ್ಸವ ಮಾಡಿದ್ದರು. ಈ ವೇಳೆಗಲಾಟೆ ನಡೆದಿತ್ತು. ನಂತರ ಎರಡೂ ಕಡೆಗಳಿಂದದೂರು-ಪ್ರತಿದೂರು ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಿಸುವಲ್ಲಿ ಮತ್ತು ಬಂಧಿಸುವಲ್ಲಿ ಪಿಎಸ್‌ಐ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಿಲ್ಲ. ಕೇವಲ ಸಂತೋಷ ತಳವಾರ ಕುಟುಂಬದವರನ್ನು ಮಾತ್ರ ಬಂಧಿಸಿದ್ದಾರೆ.

ಬಂಧಿತರಾದ ಸಂತೋಷ ಸಹೋದರ ರವಿ ಮತ್ತು ಅತ್ತಿಗೆ ಸಂಗೀತಾ ಅವರೊಂದಿಗೆ ಬಾಲಕಿ ಭಾರತಿಯನ್ನು ಜೈಲಿಗೆ ಕಳುಹಿಸಲಾಗಿತ್ತು. ಇದಕ್ಕೂ ಮುನ್ನ ಜೈಲಿನಲ್ಲಿ ಸಂಗೀತಾ ಪೊಲೀಸರು ಥಳಿಸುವಾಗ ಬಾಲಕಿಗೆ ಪೆಟ್ಟಾಗಿತ್ತು. ಹೀಗಾಗಿ ಜೈಲಿನಲ್ಲಿ ಅಸ್ವಸ್ಥಗೊಂಡು ಬಾಲಕಿ ಸಾವನ್ನಪ್ಪುವಂತೆ ಆಗಿದೆ. ಇದಕ್ಕೆ ಪಿಎಸ್‌ಐ ಮಂಜುನಾಥ ಹೂಗಾರ ಅವರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಅಲ್ಲದೇ, ಜಿಲ್ಲಾಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ರವಿವಾರ 10 ಗಂಟೆ ಕಾಲ ಧರಣಿ ನಡೆಸಲಾಗಿತ್ತು.ಜೇವರ್ಗಿ ಶಾಸಕರಾದ ಕಾಂಗ್ರೆಸ್‌ ಮುಖ್ಯ ಸಚೇತಕಡಾ.ಅಜಯಸಿಂಗ್‌ ಮತ್ತು ಕೋಲಿ ಸಮಾಜದಮುಖಂಡರು ಹೋರಾಟದಲ್ಲಿ ಪಾಲ್ಗೊಂಡುಪಿಎಸ್‌ಐ ಅಮಾನತಿಗೆ ಆಗ್ರಹಿಸಿದ್ದರು. ಆದರೆ,ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕರಣದ ತನಿಖೆನಂತರ ಪಿಎಸ್‌ಐ ವಿರುದ್ಧ ಕ್ರಮ ಜರುಗಿಸುವುದಾಗಹೇಳಿದ್ದರು. ಇದಕ್ಕೆ ಒಪ್ಪದ ಕುಟುಂಬದವರು  ಮತ್ತು ಮುಖಂಡರು ತಡರಾತ್ರಿವರೆಗೂ ಧರಣಿ ಕೈಗೊಂಡಿದ್ದರು.

ರಾತ್ರಿ 11 ಗಂಟೆ ಸುಮಾರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಶಾಸಕ ಡಾ.ಅಜಯಸಿಂಗ್‌ಮತ್ತು ಮಾಜಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌ಮತ್ತು ಮುಖಂಡರೊಂದಿಗೆ ದೂರವಾಣಿಯಲ್ಲಿಮಾತನಾಡಿದ್ದರು. 24 ಗಂಟೆಯೊಳಗೆ ಪಿಎಸ್‌ಐ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರುಭರವಸೆ ನೀಡಿದ್ದರು. ಹೀಗಾಗಿ ರಾತ್ರಿ ಧರಣಿಕೈಬಿಡಲಾಗಿತ್ತು. ಗೃಹ ಸಚಿವರ ಹೇಳಿಕೆಯಂತೆ 24ಗಂಟೆಯೊಳಗೆ ಕರ್ತವ್ಯ ಲೋಪ ವಹಿಸಿದ ಪಿಎಸ್‌ಐ ಮಂಜುನಾಥ ಅವರನ್ನು ಎಸ್‌ಪಿ ಅಮಾನತು ಮಾಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಹೆಚ್ಚುವರಿಎಸ್‌ಪಿ ಪ್ರಸನ್ನ ದೇಸಾಯಿ ನೇತೃತ್ವದಲ್ಲಿ ನಡೆಸುತ್ತಿದ್ದು,ತನಿಖೆ ಮುಂದುವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.