ಯುವಕನ ಕುಟುಂಬಕ್ಕೆ ಒಂದು ಲಕ್ಷ ರೂ. ನೆರವು
Team Udayavani, Oct 18, 2021, 11:05 AM IST
ಸೇಡಂ: ಮುಧೋಳ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕುಟುಂಬಕ್ಕೆ ವೈಯಕ್ತಿಕವಾಗಿ ಒಂದು ಲಕ್ಷ ರೂ. ನೆರವು ನೀಡುತ್ತೇನೆ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕರಣದಲ್ಲಿ ಗಾಯಗೊಂಡಿರುವ ಯುವಕನನ್ನು ಬದುಕಿಸಲು ಸಾಧ್ಯವಾದ ಮಟ್ಟಿಗೆ ಪ್ರಯತ್ನಿಸುತ್ತೇನೆ. ವೈದ್ಯರಿಂದ ಮಾಹಿತಿಯನ್ನು ಪಡೆದಿದ್ದೇನೆ. ಅಲ್ಲದೇ ಈ ವಿಷಯದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಬಿಜೆಪಿ, ಕಾಂಗ್ರೆಸ್ ಪಕ್ಷದ ಮುಖಂಡರು ನೆರವಿಗೆ ಬರಬೇಕು ಎಂದು ಕೋರಿದ್ದಾರೆ.
ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯುವಕನ ಹೆಸರಲ್ಲಿ ಹೋರಾಟ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡರು ಮುಧೋಳ ಪಿಐ ಆನಂದರಾವ್ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದರೇ, ಬಿಜೆಪಿ ಮುಖಂಡರು ಅಮಾನತು ಹಿಂದಕ್ಕೆ ಪಡೆಯುವಂತೆ ಪ್ರತಿಭಟಿಸಿದ್ದಾರೆ. ಆದರೆ ಪಕ್ಷ ಬೇಧ ಮರೆತು ಘಟನೆಗೆ ಕಾರಣವಾದ ಎರಡೂ ಸಮುದಾಯದವರನ್ನು ಕರೆದು ಸಮಾಧಾನ ಮಾಡುವ ಕೆಲಸವನ್ನು ಯಾರೂ ಮಾಡಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನ ಕುಟುಂಬಕ್ಕೆ ಧೈರ್ಯ ತುಂಬಿ, ಧನ ಸಹಾಯ ಮಾಡಲು ಮುಂದೆ ಬಂದಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.