ಕಲ್ಯಾಣದಲ್ಲಿ 35 ಮಕ್ಕಳಿಗೆ ಒಬ್ಬ ಶಿಕ್ಷಕ

Team Udayavani, Dec 28, 2021, 8:14 PM IST

gggggggggggggggggggg

ಕಲಬುರಗಿ: ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಮಟ್ಟ ಸುಧಾರಣೆ ಮತ್ತು ಈ ಭಾಗದಲ್ಲಿ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಮಕ್ಕಳ ಸಂಖ್ಯೆಗೆ ಅನುಗಣವಾಗಿ ಶಿಕ್ಷಕರನ್ನು ನೇಮಿಸಬೇಕೆಂದು ವಿಧಾನ ಪರಿಷತ್‌ ಸದಸ್ಯ ಶಶೀಲ ನಮೋಶಿ ಸರ್ಕಾರಕ್ಕೆ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗ ಶೈಕ್ಷಣಿಕವಾಗಿ ಹಿಂದುಳಿಯಲು ಶಿಕ್ಷಕ ಕೊರತೆಯೇ ಪ್ರಮುಖ ಕಾರಣವಾಗಿದೆ. ಸಾಕ್ಷರತಾ ಪ್ರಮಾಣದಲ್ಲೂ ಈ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಇವೆ. ಆದ್ದರಿಂದ ಮಕ್ಕಳು ಮತ್ತು ಶಿಕ್ಷಕರ ನಡುವಿನ ಅನುಪಾತವನ್ನು ಸರಿದೂಗಿಸುವುದು ಅವಶ್ಯವಾಗಿದೆ ಎಂದರು. ಬೆಂಗಳೂರು, ಮೈಸೂರು, ಮಂಗಳೂರು ಭಾಗದಲ್ಲಿ ಮಕ್ಕಳು ಮತ್ತು ಶಿಕ್ಷಕರ ನಡುವಿನ ಅನುಪಾತ ತೀರ ಕಡಿಮೆ ಇದೆ.

ಹೀಗಾಗಿ ಮಕ್ಕಳ ಮೇಲೆ ಶಿಕ್ಷಕರ ಗಮನ ಹರಿಸಿ ಕಲಿಕೆಯಲ್ಲಿ ತೊಡಗಿಸಲು ಸಾಧ್ಯವಾಗುತ್ತಿದೆ. ಆದರೆ, ನಮ್ಮ ಭಾಗದಲ್ಲಿ ಮಕ್ಕಳು ಮತ್ತು ಶಿಕ್ಷಕರ ನಡುವಿನ ಅನುಪಾತದಲ್ಲಿ ಸಾಕಷ್ಟು ಅಂತರ ಇದೆ. ಹೀಗಾಗಿ ಮಕ್ಕಳ ಕಲಿಕಾ ಮಟ್ಟದ ತುಂಬಾ ಕೆಳಮಟ್ಟದಲ್ಲಿ ಇದೆ ಎಂದರು. ಮಕ್ಕಳ-ಶಿಕ್ಷಕರ ಅನುಪಾತ (ಪಿಟಿಆರ್‌) ರಾಜ್ಯದ ಸರಾಸರಿ 24.43ರಷ್ಟು ಇದೆ. ಅಂದರೆ 24 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದಾರೆ. ಇದೇ ಹಾಸನ ಜಿಲ್ಲೆಯಲ್ಲಿ 12 ಮಕ್ಕಳು, ಚಿಕ್ಕಮಗಳೂರು ಜಿಲ್ಲೆಯಲ್ಲಿ 14 ಮಕ್ಕಳು, ತುಮಕೂರ ಜಿಲ್ಲೆಯಲ್ಲಿ 15 ಮಕ್ಕಳು, ಬೆಂಗಳೂರು ಗ್ರಾಮೀಣ ಮತ್ತು ರಾಮನಗರ ಜಿಲ್ಲೆಯಲ್ಲಿ ತಲಾ 16 ಹಾಗೂ ಮಂಡ್ಯ ಜಿಲ್ಲೆಯಲ್ಲಿ 17 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದಾರೆ.

ಇದು ಸದ್ಯ ಕಾರ್ಯನಿತರ ಶಿಕ್ಷಕರನ್ನು ಪರಿಗಣಿಸಿರುವ ಅನುಪಾತವಾಗಿದ್ದು, ಮಂಜೂರಾತಿ ಹುದ್ದೆಗಳ ಅನುಪಾತ ನೋಡಿ ಇದರ ಸಂಖ್ಯೆ ಇನ್ನೂ ಕಡಿಮೆಯಾಗುತ್ತದೆ ಎಂದರು. ಅದೇ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 35ರಿಂದ 40ಕ್ಕಿಂತ ಹೆಚ್ಚು ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ 44 ಮಕ್ಕಳಿಗೆ ಒಬ್ಬ ಶಿಕ್ಷಕ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 36 ಮಕ್ಕಳಿಗೆ ಒಬ್ಬ ಶಿಕ್ಷಕ, ಬಳ್ಳಾರಿ ಜಿಲ್ಲೆಯಲ್ಲಿ 35 ಮಕ್ಕಳು ಮತ್ತು ಕಲಬುರಗಿ ಜಿಲ್ಲೆಯಲ್ಲಿ 29 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದಾರೆ. ಅಂದರೆ ಮುಂದುವರೆ ಭಾಗ ಎಂದು ಕರೆಸಿಕೊಳ್ಳುವ ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಿಗೂ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಮಕ್ಕಳ-ಶಿಕ್ಷಕರ ನಡುವಿನ ಅನುಪಾತ ಎರಡುಪಟ್ಟು ವ್ಯತ್ಯಾಸ ಇದ್ದು, ಗಂಭೀರ ತಾರತಮ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡ ಶಾಮರಾವ ಪ್ಯಾಟಿ, ಶಶಿಧರ ಇದ್ದರು.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.