ಕಲ್ಯಾಣ ಕರ್ನಾಟಕ ಮರು ನಾಮಕರಣಕ್ಕೆ ಒಂದು ವರ್ಷ: ಒಂದು ಹಿನ್ನೋಟ
Team Udayavani, Sep 17, 2020, 11:54 AM IST
ಕಲಬುರಗಿ: ಹೈದರಾಬಾದ್ ಕರ್ನಾಟಕ’ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ರಾಜ್ಯ ಸರ್ಕಾರ ಮರು ನಾಮಕರಣ ಮಾಡಿ ಒಂದು ವರ್ಷವಾಗಿದೆ.
ಸೆ.17ಕ್ಕೆ ಒಂದು ವರ್ಷ ತುಂಬುತ್ತಿದೆ. ‘ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ’ವನ್ನು ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನಾಗಿ ಆಚರಿಸಲಾಗುತ್ತಿದೆ. ಈ ಉತ್ಸವದ ಹೊಸ್ತಿಲಲ್ಲಿರುವ ಈ ಸಂದರ್ಭದಲ್ಲಿ ಈ ಭಾಗದ ಜನ ಸಮಸ್ಯೆಗಳ ಸಂಕೋಲೆಯಿಂದ ಮುಕ್ತವಾದರೇ?’ ಅಭಿವೃದ್ಧಿಯ ಸುಳಿಗಾಳಿ ಬೀಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವೇ ಸಿಗುತ್ತಿಲ್ಲ!
ಬೀದರ್ ಮತ್ತು ಅವಿಭಜಿತ ಕಲಬುರ್ಗಿ, ರಾಯಚೂರು ಜಿಲ್ಲೆಗಳು ಹಿಂದೆ ಹೈದರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದವು. ಆಗಸ್ಟ್ 15, 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ, ಹೈದರಾಬಾದ್ ನಿಜಾಮ ತನ್ನ ಸಂಸ್ಥಾವನ್ನು ಸ್ವತಂತ್ರ ಭಾರತದಲ್ಲಿ ವಿಲೀನಗೊಳಿಸಲು ಒಪ್ಪದ ಕಾರಣ ಹೈದರಾಬಾದ್ ಕರ್ನಾಟಕದ ಈ ಭಾಗಕ್ಕೆ ಸ್ವಾತಂತ್ರ್ಯ ದೊರೆಯಲೇ ಇಲ್ಲ. ಅಂದಿನ ಕೇಂದ್ರ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಬಿಗಿ ನಿಲುವಿನಿಂದಾಗಿ ಹೈದರಾಬಾದ್ ನಿಜಾಮ ಸಂಸ್ಥಾನ 1948 ಸೆಪ್ಟೆಂಬರ್ 17 ರಂದು ಭಾರತ ಒಕ್ಕೂಟದಲ್ಲಿ ವಿಲೀನವಾಯಿತು. ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಸೆ.17ರಂದು. ಹೀಗಾಗಿ ಪ್ರತಿ ವರ್ಷವೂ ಸೆಪ್ಟೆಂಬರ್ 17ನ್ನು ಈ ಜಿಲ್ಲೆಗಳಲ್ಲಿ ‘ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ’ ಎಂದು ಆಚರಿಸಲಾಗುತ್ತಿತ್ತು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಿಎಂ ಬಿಎಸ್ ವೈ
ಹೈದರಾಬಾದ್ ಕರ್ನಾಟಕದ ಹೆಸರಿನಲ್ಲಿಯೇ ದಾಸ್ಯ ಇದೆ. ಹೀಗಾಗಿ ಶರಣರ ಈ ನಾಡಿಗೆ ‘ಕಲ್ಯಾಣ ಕರ್ನಾಟಕ’ಎಂದು ನಾಮಕರಣ ಮಾಡಬೇಕು ಎಂಬ ಬೇಡಿಕೆ ಇತ್ತು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿದ್ದಂತೆಯೇ 2019ರ ಸೆಪ್ಟೆಂಬರ್ 17ರಂದು ಈ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ಹೆಸರಿಟ್ಟರು. ಇದು ಕಲ್ಯಾಣ ಕರ್ನಾಟಕ ಉತ್ಸವದ ಎರಡನೇ ದಿನಾಚರಣೆ.
ಪಟೇಲ್ ಪ್ರತಿಮೆ: ಹೈದರಾಬಾದ್ ನಿಜಾಮ ಸಂಸ್ಥಾನದ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಿ, ಈ ಸಂಸ್ಥಾನ ಸ್ವತಂತ್ರ ಭಾರತದ ಒಕ್ಕೂಟದಲ್ಲಿ ವಿಲೀನವಾಗುವಂತೆ ಮಾಡುವಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಕಾರ್ಯ ಪ್ರಮುಖವಾಗಿತ್ತು. ಹೈದರಾಬಾದ್ ಕರ್ನಾಟಕಕ್ಕೆ ವಿಮೋಚನೆ ದೊರಕಿಸಿಕೊಟ್ಟಿದ್ದಕ್ಕಾಗಿ ಕಲಬುರ್ಗಿಯಲ್ಲಿ ಪಟೇಲ್ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈ ಕಾರ್ಯಕ್ರಮಕ್ಕೂ ಮುನ್ನ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುವುದು ಸಂಪ್ರದಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.