ಶರಣಬಸವ ವಿವಿಯಿಂದ ಆನ್‌ಲೈನ್ ತರಗತಿ
Team Udayavani, Aug 16, 2020, 5:26 PM IST
ಕಲಬುರಗಿ: ಕೋವಿಡ್ ವ್ಯಾಪಕ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭಿಸಲು ಸಾಧ್ಯವಾಗುತ್ತಿಲ್ಲ. ಆದರೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಹಾಗೂ ವಿಶ್ವವಿದ್ಯಾಲಯದ ಶಾಲಾ-ಕಾಲೇಜುಗಳು ಆನ್‌ಲೈನ್ ತರಗತಿಯನ್ನು ಕೈಗೊಳ್ಳುತ್ತಿವೆ ಎಂದು ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.
ನಗರದ ಶರಣಬಸವೇಶ್ವರ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕೋವಿಡ್-19 ಕಾರಣದಿಂದಾಗಿ 2020 ವರ್ಷ ಭಾರತ ಸೇರಿದಂತೆ ಇಡೀ ಜಗತ್ತಿಗೆ ಕೆಟ್ಟ ವರ್ಷವಾಗಿದೆ. ಇದರಿಂದ ದೇಶದ ಪ್ರಗತಿ ನಿಧಾನಗತಿಯಲ್ಲಿ ಸಾಗಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಕುಂದುಂಟಾಗಿದೆ. ಆರ್ಥಿಕ ತೊಂದರೆಯಿಂದಾಗಿ ಶಿಕ್ಷಣ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೀಗಾಗಿ ಇದರ ನಡುವೆ ಆನ್‌ಲೈನ್ ಕಾರ್ಯಕ್ರಮ ಪರಿಣಾಮಕಾರಿಯಾಗಿ ಮುನ್ನೆಡೆಸಿಕೊಂಡು ಬರಲಾಗುತ್ತಿದೆ ಎಂದು ವಿವರಣೆ ನೀಡಿದರು.
ಬಳ್ಳಾರಿ ಸಮೂಹದ ಅಡಿಯಲ್ಲಿ ಬರುವ 8 ಜಿಲ್ಲೆಗಳ ಎನ್‌ಸಿಸಿ ಕೆಡೆಟ್‌ಗಳಿಗಾಗಿ ನಡೆಸಲಾದ ಸಿ ಪ್ರಮಾಣಪತ್ರ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಎನ್‌ಸಿಸಿ ಕೆಡೆಟ್ ಶ್ರೀನಿವಾಸ್ ಕುಲಕರ್ಣಿಯನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಶರಣಬಸವ ವಿಶ್ವವಿದ್ಯಾಲಯದ ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ವಿವಿ ಕುಲಸಚಿವ ಡಾ| ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ್ ಶಾಸ್ತ್ರಿ, ಡೀನ್ ಡಾ| ಲಕ್ಷ್ಮೀ ಪಾಟೀಲ್, ಡೀನ್ ಡಾ| ಬಸವರಾಜ್ ಮಠಪತಿ ಮತ್ತು ವಿವಿಯ ಇತರ ಅಧಿಕಾರಿಗಳು ಇದ್ದರು. ಸರ್ಕಾರದ ನಿಯಮಾವಳಿ ಪ್ರಕಾರ ಸರಳ ಹಾಗೂ ಯಾವುದೇ ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗಳಿಲ್ಲದೇ ಸ್ವಾತಂತ್ರ್ಯೊತ್ಸವ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.