ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, May 14, 2020, 5:15 AM IST
ಕಲಬುರಗಿ: ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಗಂಜ್‌ನಲ್ಲಿರುವ ಎಪಿಎಂಸಿ ಎದುರು ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಎಪಿಎಂಸಿ ಕಾರ್ಯದರ್ಶಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಯಾವ ಕಾರಣಕ್ಕೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಬಾರದು ಎಂದು ಒತ್ತಾಯಿಸಿದರು. ಕಳೆದ 20 ವರ್ಷದಿಂದ ಉದಾರೀಕರಣ ನೀತಿಯಿಂದ ದೇಶದ ರೈತರು ಸಂಕಷ್ಟಕ್ಕಿಡಾಗಿದ್ದಾರೆ. ಈಗ ಕೋವಿಡ್ ದಿಂದ ಜನ ಸಂಕಷ್ಟದಲ್ಲಿದ್ದು ಇಂಥ ಸಂದರ್ಭದಲ್ಲಿ ಕೃಷಿಗೆ ಸಂಬಂಧಿಸಿದ ಕಾಯ್ದೆ ತರಾತುರಿಯಲ್ಲಿ ತಿದ್ದುಪಡಿ ತರುತ್ತಿರುವುದು ಆತಂಕಕಾರಿಯಾಗಿದೆ.ಎರಡು ದಿನಗಳಲ್ಲಿ ಸಂಪುಟ ಸಭೆಯಲ್ಲಿ ಗಮನಕ್ಕೆ ತರದೇ ನೇರವಾಗಿ ರಾಜ್ಯಪಾಲರಿಗೆ ಸುಗ್ರಿವಾಜ್ಞೆ ಹೊರಡಿಸಲು ಸಲ್ಲಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದರು.
ಯಾವುದೇ ಮಸೂದೆ ಕಾಯ್ದೆಯಾಗಿ ರೂಪಿಸುವ ಮೊದಲು ಎರಡು ಸದನಗಳಲ್ಲಿ ಚರ್ಚಿಸಿ ಅನುಮೋದನೆ ಪಡೆದು ರಾಜ್ಯಪಾಲರ ಅಂಗೀಕಾರಕ್ಕೆ ಕಳಿಸಬೇಕು. ಆದರೆ ಇಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಮಸೂದೆಯನ್ನು ನೇರವಾಗಿ ರಾಜ್ಯಪಾಲರಿಗೆ ಕಳಿಸಿರುವುದು ರೈತರಲ್ಲಿ ಅನೇಕ ಸಂಶಯಗಳಿಗೆ ಎಡೆಮಾಡಿದೆ. ಇದರಿಂದ ಸಣ್ಣ ರೈತರಿಗೆ ತೊಂದರೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಸಂಘದ ಅಧ್ಯಕ್ಷ ಶಿವಕುಮಾರ ಘಂಟಿ, ಕಾರ್ಯದರ್ಶಿ ಬಸವರಾಜ ತಡಕಲ್ ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಹಾಗೂ ಇತರರು ಎಪಿಎಂಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.