ಬೃಹತ್ ಉದ್ಯೋಗ ಮೇಳಕ್ಕೆ ಸಜ್ಜು
Team Udayavani, Oct 13, 2018, 10:37 AM IST
ಸೇಡಂ: ನಿರುದ್ಯೋಗ ನಿವಾರಣೆಗಾಗಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಬೃಹತ್ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳನ್ನು ಒಂದೆಡೆ ಸೇರಿಸಿ ನಿರುದ್ಯೋಗಿಗಳ ಬಾಳಿಗೆ ಬೆಳಕಾಗಲು ನಿರ್ಧರಿಸಿದ್ದಾರೆ.
ಸುಮಾರು 20 ವರ್ಷಗಳಿಂದಲೂ ಈ ಭಾಗದಲ್ಲಿ ಉದ್ಯೋಗದ ಅಭಾವ ಕಾಡುತ್ತಲೇ ಇದೆ. ಸ್ಥಳೀಯವಾಗಿ ಅನೇಕ ಸಿಮೆಂಟ್ ಕಾರ್ಖಾನೆಗಳು ಸ್ಥಾಪನೆಗೊಂಡರೂ ಉದ್ಯೋಗ ದೊರೆಯದೆ ಸಾವಿರಾರು ಯುವಕ-ಯುವತಿಯರು ಕಂಗಾಲಾಗಿದ್ದರು. ಈಗ ನಡೆಯಲಿರುವ ಉದ್ಯೋಗ ಮೇಳ ಸೇಡಂ ಇತಿಹಾಸದಲ್ಲೇ ಉದ್ಯೋಗ ಕಲ್ಪಿಸುವ ಬಹುದೊಡ್ಡ ವೇದಿಕೆಯಾಗಿ ಹೊರಹೊಮ್ಮಲಿದೆ.
ಆನ್‌ಲೈನ್-ಆಫ್‌ಲೈನ್: ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಇಚ್ಚಿಸುವರ ನೋಂದಣಿಗಾಗಿಯೇ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ನೇತೃತ್ವದಲ್ಲಿ ಹೊಸದೊಂದು ವೆಬ್‌ಸೈಟ್ ಆರಂಭಿಸಲಾಗಿದೆ. (http://jobs.sedam.org) ಇದರಲ್ಲಿ ಮಾಹಿತಿ ಕಲ್ಪಿಸಿದ ಕೂಡಲೇ ಐಡಿ ಸಂಖ್ಯೆಯೊಂದು ಅರ್ಜಿದಾರನ ಮೊಬೈಲ್ ಸಂಖ್ಯೆಗೆ ರವಾನೆಯಾಗುತ್ತದೆ. ಅಲ್ಲದೆ ಆಫ್‌ಲೈನ್‌ಗಾಗಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.
ಪಟ್ಟಣದ ಎಸ್.ಬಿ.ಐ ಬ್ಯಾಂಕ್ ಪಕ್ಕದಲ್ಲಿರುವ ಕಂಪ್ಯೂಸಿಸ್ ಪಾಯಿಂಟ್, ರೈಲ್ವೆ ನಿಲ್ದಾಣದ ಬಳಿಯ ಪಾಟೀಲ ಝೆರಾಕ್ಸ್
ಅಂಗಡಿ, ಬಸ್ ನಿಲ್ದಾಣದ ಎದುರಿನ ಲಕ್ಕಿ ಝರಾಕ್ಸ್‌ನಲ್ಲಿ ಆಫಲೈನ್ ನೋಂದಣಿಗಾಗಿ ವ್ಯವಸ್ಥೆ ಕಲ್ಪಿಸಲಾಗಿದೆ.
ಒಂದೇ ದಿನ 900 ಅರ್ಜಿ: ನ.18 ರಂದು ಪಟ್ಟಣದ ಮಾತೃಛಾಯಾ ಕಾಲೇಜು ಆವರಣದಲ್ಲಿ ನಡೆಯುವ ಉದ್ಯೋಗ ಮೇಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಕಲ್ಪಿಸಿದ ಒಂದೇ ದಿನದಲ್ಲಿ 900ಕ್ಕೂ ಹೆಚ್ಚು ಅರ್ಜಿಗಳು ಅಂತರ್ಜಾಲದ ಮೂಲಕ ಸಲ್ಲಿಕೆಯಾಗಿವೆ.
ಸ್ಥಳೀಯ ಕಾರ್ಖಾನೆಗಳು ಭಾಗಿಯಾಗುವಿಕೆ ನಿಶ್ಚಿತವಿಲ್ಲ : ವಿಧಾನಸಭೆ ಚುನಾವಣೆ ಪೂರ್ವದಿಂದಲೇ ಸ್ಥಳೀಯ ಸಿಮೆಂಟ್ ಕಾರ್ಖಾನೆಗಳಲ್ಲಿ ಉದ್ಯೋಗ ಕಲ್ಪಿಸುವಂತೆ ಯುವ ಜನತೆ ಬೇಡಿಕೆ ಇಟ್ಟಿದ್ದರು. ಆದರೆ ಈಗ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ಸ್ಥಳೀಯ ಸಿಮೆಂಟ್ ಕಾರ್ಖಾನೆಗಳು ಪಾಲ್ಗೊಳ್ಳಲಿವೆ ಎಂಬುದು ಇನ್ನೂ ನಿತ್ಛಳವಾಗಿಲ್ಲ. ಅಲ್ಲದೆ ಸ್ಥಳೀಯ ಕಾರ್ಖಾನೆಗಳಲ್ಲಿ ಉದ್ಯೋಗ ಕಲ್ಪಿಸುವುದು ಕಷ್ಟಸಾಧ್ಯ ಎನ್ನಲಾಗುತ್ತಿದೆ.
20 ಸಾವಿರಕ್ಕೂ ಹೆಚ್ಚು ಉದ್ಯೋಗ ಕಲ್ಪಿಸುವ ಗುರಿಯಿಟ್ಟುಕೊಂಡು ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಈ ಮೂಲಕ ನಿರುದ್ಯೋಗ ನಿವಾರಣೆಗೆ ಪಣತೊಟ್ಟಿದ್ದೇವೆ. ಜನರಿಗೆ ಮೂಲಭೂತ ಸೌಕರ್ಯಕ್ಕಿಂತಲೂ ಮಿಗಿಲಾಗಿ ಬದುಕಲು ದಾರಿ ಬೇಕು. ನನ್ನ ಕ್ಷೇತ್ರದ ಬಹುತೇಕ ಬಡ ಮತ್ತು ನಿರುದ್ಯೋಗಿಗಳ ಧ್ವನಿಯಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಸ್ಥಳೀಯ ಸಿಮೆಂಟ್ ಕಾರ್ಖಾನೆಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಂತೆ ಕೋರುವ ಚಿಂತನೆ ನಡೆದಿದೆ.
ರಾಜಕುಮಾರ ಪಾಟೀಲ ತೇಲ್ಕೂರ್, ಶಾಸಕ
ಶಿವಕುಮಾರ ಬಿ. ನಿಡಗುಂದಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.