ತೆಲಂಗಾಣಕ್ಕೆ ರಾಯಚೂರು ವಿಲೀನ ಹೇಳಿಕೆಗೆ ಆಕ್ರೋಶ
Team Udayavani, Aug 20, 2022, 11:49 AM IST
ಕಲಬುರಗಿ: ತೆಲಂಗಾಣಕ್ಕೆ ಕರ್ನಾಟಕದ ರಾಯಚೂರು ಸೇರಿಸಲು ಅಲ್ಲಿನ ಜನ ಬಯಸಿದ್ದಾರೆ ಎನ್ನುವ ಹೇಳಿಕೆಯನ್ನು ಅಲ್ಲಗಳೆದಿರುವ ಮತ್ತು ಈ ಕುರಿತು ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ನೀಡಿರುವ ಹೇಳಿಕೆ ಖಂಡನೀಯ ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ ನರಿಬೋಳ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕರುನಾಡಿನ ಭಾಗವನ್ನು ತೆಲಂಗಾಣ ದವರು ಕೇಳುತ್ತಿದ್ದಾರೆ ಎನ್ನುವ ಕುರಿತು ಅಲ್ಲಿನ ಮುಖ್ಯಮಂತ್ರಿ ಹೇಳಿಕೆ ನೀಡಿದರೂ ನಮ್ಮ ರಾಜಕಾರಣಿಗಳು ಇನ್ನೂ ಖಂಡಿಸದೇ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಅಲ್ಲದೇ, ನಮ್ಮ ಮುಖ್ಯಮಂತ್ರಿಗಳು ಈ ಕುರಿತು ಇನ್ನೂ ತುಟಿ ಬಿಚ್ಚಿಲ್ಲ. ವಿಪಕ್ಷದ ರಾಜಕಾರಣಿಗಳು, ಜನಪ್ರತಿನಿಧಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಆಡಳಿತ ಪಕ್ಷದ ಶಾಸಕರು, ರಾಯಚೂರು ಶಾಸಕ ಡಾ|ಶಿವರಾಜ ಪಾಟೀಲ ಅವರಿಗೂ ಈ ಹೇಳಿಕೆ ಕೇಳಿಸಿ ಲ್ಲವೇ? ಎಂದು ಪ್ರಶ್ನಿಸಿದರು.
ಕುತಂತ್ರ ಅಡಗಿದೆ: ಒಂದು ರಾಜ್ಯದ ಮುಖ್ಯಮಂತ್ರಿ ಇನ್ನೊಂದು ರಾಜ್ಯದ ಒಂದು ಜಿಲ್ಲೆಯನ್ನು ತಮ್ಮ ರಾಜ್ಯಕ್ಕೆ ಸೇರಿಸಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿ ಎರಡು ದಿನವಾದರೂ ಕರ್ನಾಟಕ ಸರ್ಕಾರ ಉತ್ತರಿಸುವುದಿಲ್ಲ ಎಂದರೆ, ಒಳಗೊಳಗೆ ಏನೋ ಕುತಂತ್ರ ಅಡಗಿದೆ. ಬೆಳಗಾವಿ ವಿಷಯದಲ್ಲಿ ಅಬ್ಬರಿಸಿ, ಬೊಬ್ಬಿರಿಯುವ ರಾಜಕಾರಣಿಗಳು, ರಾಯಚೂರಿನ ವಿಷಯ ಬಂದಾಗ ಯಾಕೆ ಸುಮ್ಮನಿದ್ದಾರೆ ಎಂದು ಜನತೆಗೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.
ರಾಯಚೂರು ಕಲ್ಯಾಣ ಕರ್ನಾಟಕದ ಅವಿಭಾಜ್ಯ ಅಂಗ. ಕೆಸಿಆರ್ ಹೇಳಿಕೆ ಹಿಂದಕ್ಕೆ ಪಡೆಯುವ ವರೆಗೂ ತೆಲಂಗಾಣಕ್ಕೆ ಹೈದ್ರಾಬಾದ್ ಸೇರಿದಂತೆ ಪ್ರಮುಖ ನಗರಗಳಿಂದ ಕರ್ನಾಟಕ ಸಾರಿಗೆ ಸಂಚಾರ ಬಂದ್ ಮಾಡಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಸಾದ ಜೋಶಿ, ಶ್ರೀದೇವಿ ಕಾಲೆಬಾಗ, ಅನಿಲ ಪವಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.