![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 30, 2021, 5:56 PM IST
ಶಹಾಬಾದ: ಕೋವಿಡ್ ಸಂಕಷ್ಟ ಸಮಯದಲ್ಲಿ ಆಕ್ಸಿಜನ್ ನೀಡುವ ಗಿಡ ಮರಗಳ ಮಹತ್ವ ಮನದಟ್ಟು ಮಾಡಿಸಿ ಮನುಕುಲಕ್ಕೆ ಕೊರೊನಾ ಹೊಸ ಪಾಠ ಕಲಿಸಿದೆ ಎಂದು ಮರತೂರ ಗ್ರಾಪಂ ಸದಸ್ಯ ಅಜಿತ್‌ಕುಮಾರ ಪಾಟೀಲ ಹೇಳಿದರು.
ಮರತೂರ ಗ್ರಾಮದಲ್ಲಿ ಆಯೋಜಿಸಿದ್ದ ಸಸಿ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವೈರಸ್ ಕಳೆದ ಒಂದೂವರೆ ವರ್ಷದಿಂದ ಜಗತ್ತನ್ನೇ ಕಾಡುತ್ತಿದೆ. ಸೋಂಕಿತ ವ್ಯಕ್ತಿಗಳಿಗೆ ಉಸಿರಾಟದ ತೊಂದರೆಯಾದಾಗ ಆಕ್ಸಿಜನ್ ಸಿಲಿಂಡರ್ ಸಿಗದೇ ಪರದಾಡಿದಂತಹ ಪರಿಸ್ಥಿತಿ ನಾವೆಲ್ಲಾ ಕಂಡಿದ್ದೆವೆ.
ಅಲ್ಲದೇ ಆಕ್ಸಿಜನ್ ಕೊರತೆಯಿಂದ ಸಾವಿರಾರು ಜನರು ಪ್ರಾಣ ಬಿಟ್ಟಿದ್ದಾರೆ. ಆದರೆ ನಮ್ಮ ಜೀವಿತಾ ಅವಧಿಯೂದ್ದಕ್ಕೂ ಉಚಿತವಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿರುವ ಗಿಡಮರಗಳ ಮಹತ್ವ ಅರಿಯದ ಮೂಢ ಜನರಿಗೆ ಅರಿವು ಮೂಡಿದಂತಾಗಿದೆ. ಈಗಲಾದರೂ ಪ್ರತಿಯೊಬ್ಬರೂ ಕಡ್ಡಾಯವಾಗಿ ಒಂದಾದರೂ ಸಸಿ ನೆಟ್ಟು ಪೋಷಿಸಬೇಕು ಎಂದು ಹೇಳಿದರು.
ಪಿಕೆಪಿಎಸ್‌ಎನ್ ಅಧ್ಯಕ್ಷ ರವಿ ನರೋಣಿ ಮಾತನಾಡಿ, ಅರಣ್ಯ ನಾಶದಿಂದ ಪರಿಸರದ ತಾಪಮಾನ ಹೆಚ್ಚಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಆದ್ದರಿಂದ ಈ ತಾಪಮಾನ ತಡೆಯಲು ಮರ ಬೆಳೆಸಬೇಕು ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷ ಗುರುನಾಥ ಕಂಬಾ, ಗ್ರಾಪಂ ಸದಸ್ಯರಾದ ಸಿದ್ರಾಮಪ್ಪಗೌಡ ಮಾಲಿಪಾಟೀಲ, ಶಾಮರಾಯ ಸುಣಗಾರ, ಶೌಕತ್ ಅಲಿ, ಪರಶುರಾಮ, ಗೌರಿಶಂಕರ ಪಾಟೀಲ, ಶರಣಬಸಪ್ಪ ಪಾಟೀಲ, ಸಂಗಣ್ಣ ಮೈನಾಳ, ಗ್ರಾಪಂ ಕಾರ್ಯದರ್ಶಿ ಅಣ್ಣಾಸಾಬ ಪಾಟೀಲ, ಭೀಮಾಶಂಕರ ನರೋಣಿ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.