ಪದ್ಮಾವತಿ ಚಿತ್ರ ನಿಷೇಧಕ್ಕೆ ಆಗ್ರಹ
Team Udayavani, Nov 24, 2017, 10:51 AM IST
ಕಲಬುರಗಿ: ವಿವಾದಿತ ಪದ್ಮಾವತಿ ಹಿಂದಿ ಚಲನಚಿತ್ರವನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ರಜಪೂತ ಸಮಾಜ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಖಡ್ಗಗಳನ್ನು ಹಿಡಿದುಕೊಂಡು ಭಾಗವಹಿಸಿದ್ದ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಂದಕಿಶೋರ ಚೌಹಾಣ, ಕಿರಣಸಿಂಗ್ ಗೆಹರವಾರ, ಕಾರ್ತಿಕಸಿಂಗ್ ಬಯಾಸ್, ನರೇಶ ದುಬೈ, ಆಕಾಶಸಿಂಗ್ ಗೆಹರವಾರ, ಕಿರಣಸಿಂಗ ಹಜಾರೆ, ಗೌರವ ಠಾಕೂರ, ಆಕಾಶ ಠಾಕೂರ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಐಜಿಪಿ ಅಲೋಕಕುಮಾರ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿ ಪ್ರದರ್ಶಿಸಿದ ಚೌಕ ಠಾಣೆಯ ಎಎಸ್‌ಐ ಹಾಗೂ ಸ್ಟೇಷನ್ ಬಜಾರ ಎಎಸ್‌ಐ ಅವರನ್ನು ಅಮಾನತುಗೊಳಿಸಲಾಗಿದೆ ಹಾಗೂ ಚೌಕ್, ಬ್ರಹ್ಮಪೂರ ಹಾಗೂ ಸ್ಟೇಷನ್ ಬಜಾರ ಪಿಐಗಳ ವಿರುದ್ಧ ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರವಾಗಿ ಕರ್ತವ್ಯ ನಿರ್ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಐಜಿಪಿ ತಿಳಿಸಿದ್ದಾರೆ.
ಪದ್ಮಾವತಿ ಚಲನಚಿತ್ರವನ್ನು ವಿರೋಧಿಸಿ ರವಾನಗಿಯಿಲ್ಲದೇ ಶಹಾಬಜಾರ ಕಟಗರಪೂರದ ಬಾಲಾಜಿ ಮಂದಿರದಿಂದ ಶಹಾಬಜಾರ ನಾಕಾ, ಪ್ರಕಾಶ ಟಾಕೀಸ್, ಚೌಕ್ ಸರ್ಕಲ್, ಸೂಪರ್ ಮಾರ್ಕೆಟ್, ಜಗತ್ ವೃತ್ತದ ಮೂಲಕ ಸರ್ದಾರ
ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ಕಾನೂನುಬಾಹಿರವಾಗಿ ಪ್ರತಿಭಟನೆ ನಡೆಸಿದ್ದಲ್ಲದೇ, ಖಡ್ಗ ಪ್ರದರ್ಶಿಸುತ್ತ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದರು. ಈ ಬಗ್ಗೆ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.