ಕಲಬುರಗಿಯಲ್ಲಿ ಪಾಕ್‌ ಧರ್ಮ ಪ್ರಚಾರಕನ ಹತ್ಯೆ

Team Udayavani, Feb 19, 2019, 1:10 AM IST

ban19021907medn.jpg

ಕಲಬುರಗಿ:  ಪ್ರವಾದಿ ಮೊಹ್ಮದ್‌ ಪೈಗಂಬರ್‌ ಹಾಗೂ ಕುರಾನ್‌ ಗ್ರಂಥ ಕುರಿತು ಅವಹೇಳನಕಾರಿ ಪ್ರಚಾರದಲ್ಲಿ ತೊಡಗಿದ್ದಾನೆಂದು ಆರೋಪಿಸಿ ಯುವಕನೊಬ್ಬನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಹೊರವಲಯ ತಾವರಗೇರಾ ಕ್ರಾಸ್‌ನಲ್ಲಿ ನಡೆದಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಜಲಾಲ್‌ (30) ಕೊಲೆಯಾದ ಧರ್ಮ ಪ್ರಚಾರಕ. ಪ್ರಕರಣ ಸಂಬಂಧ  ಸ್ಥಳೀಯರಾದ ಸೈಯ್ಯದ್‌ ತಬರೇಜ್‌, ಮಹ್ಮದ್‌ ಉಮರ್‌ ಫಾರೂಕ್‌, ಸೈಯ್ಯದ್‌ ಅಮ್ಜದ್‌, ಮಹ್ಮದ್‌ ಅಜರ್‌ ತಂದೆ ಅಬ್ದುಲ್‌, ಅಬ್ದುಲ್‌ ರಹೀಂ ಖಾಸ್ಕಿ, ಸೈಯ್ಯದ್‌ ಇಸ್ಮಾಯಿಲ್‌, ಸೈಯ್ಯದ್‌ ಹುಸೇನ್‌, ಮೊಹ್ಮದ್‌ ಉಮರ್‌ ಸೊಹೆಲ್‌, ಗೌಸ್‌ ಮೈನೂದ್ದಿನ್‌, ಸೈಯ್ಯದ್‌ ಮುಕ್ರಂ, ಅಬ್ದುಲ್‌ ಅಜೀಜ್‌, ಚಾಂದಪಾಶಾ, ಸೈಯ್ಯದ್‌ ರಹೀಮ್‌ ಹಾಗೂ ಮುದ್ದೇಪಿರ್‌ ಸೇರಿದಂತೆ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಐದಾರು ತಿಂಗಳಿನಿಂದ ಕಲಬುರಗಿ ಮಹಾನಗರದಲ್ಲಿ ಮಹ್ಮದ ಜಲಾಲ್‌ “ಪಾಕಿಸ್ತಾನದ ಅಹ್ಮದ್‌ ಇಸಾ’ ಪಂಥದ ಪ್ರಚಾರ ಮಾಡುತ್ತಿದ್ದ. ಅಲ್ಲದೇ ಪ್ರವಾದಿ ಮೊಹ್ಮದ್‌ ಪೈಗಂಬರ್‌ ಹಾಗೂ ಕುರಾನ್‌ ಕುರಿತು ಅವಹೇಳನಕಾರಿ ಪ್ರಚಾರದಲ್ಲಿ ತೊಡಗಿ ಸಾಹಿತ್ಯ, ಸಂದೇಶ ಪ್ರಚುರಪಡಿಸುತ್ತಿದ್ದ. ಇದನ್ನು ಸಹಿಸದ 20ಕ್ಕೂ ಹೆಚ್ಚು ಯುವಕರ ತಂಡ ಮೊದಲು ಬುದ್ಧಿವಾದ ಹೇಳಿದೆ. ಆದರೂ ತಿದ್ದಿಕೊಳ್ಳದ ಕಾರಣ ಕೊಲೆ ಮಾಡಲಾಗಿದೆ ಎಂದು ಎಸ್‌ಪಿ ಎನ್‌. ಶಶಿಕುಮಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದೂರು ನೀಡಿದಾಗ ನಾಪತ್ತೆಯಾಗಿದ್ದ: ಜಲಾಲ್‌ ಧರ್ಮ ಪ್ರಚಾರ ಸಂಬಂಧ ಕೆಲವು ತಿಂಗಳ ಹಿಂದೆ ದೂರು ನೀಡಲಾಗಿತ್ತು. ಆ ಸಂದರ್ಭದಲ್ಲಿ ಶೋಧ ನಡೆಸಿದಾಗ ಸ್ಥಳೀಯವಾಗಿ ಇರಲಿಲ್ಲ. ಈಗ ಮತ್ತೆ ಬಂದು ಧರ್ಮದ ವಿರುದ್ಧ ಕೆಲಸ ಮಾಡಲು ನಗರದ ಎಂಎಸ್‌ಕೆ ಮಿಲ್‌ ಬಳಿ ವಸತಿ ಗೃಹದಲ್ಲಿ ತಂಗಿದ್ದ. ಈ ವೇಳೆ ವಿಚಾರಣೆ ನೆಪದಲ್ಲಿ ತಾಜಸುಲ್ತಾನಪುರ ಬಳಿ ಕರೆದೊಯ್ದು  ನಂತರ ತಾವರಗೇರಾ ಕ್ರಾಸ್‌ ಬಳಿ  ಕುತ್ತಿಗೆ, ಹೊಟ್ಟೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದ ಯುವಕರು ಸುನ್ನಿ ಹಾಗೂ ಶಿಯಾ ಪಂಗಡಕ್ಕೆ ಸೇರಿದವರಾಗಿದ್ದಾರೆ ಎಂದರು.

ಭಾನುವಾರ ಶವ ಪತ್ತೆಯಾದಾಗ ಮೊದಲು ಅಪರಿಚಿತ ಎನ್ನಲಾಗಿತ್ತು. ನಂತರ ವಿಚಾರಿಸಿದಾಗ ಪಾಕಿಸ್ತಾನದ ಇಸಾ ಧರ್ಮದ ಪ್ರಚಾರಕ ಹಾಗೂ ಔರಂಗಾಬಾದ್‌ನ ಗುರುಗಳೊಬ್ಬರ ಹೆಸರು ಪ್ರಸ್ತಾಪಿಸಿ ಧರ್ಮ ಪ್ರಚಾರ ಮಾಡುತ್ತಿದ್ದ ಎಂಬುದು ತಿಳಿಯಿತು. ಕೆಲವರನ್ನು ವಿಚಾರಿಸಿದಾಗ ಜಲಾಲ್‌ ಇಸ್ಲಾಂ ಧರ್ಮದ ವಿರುದ್ಧ ಪ್ರಚಾರದಲ್ಲಿ ತೊಡಗಿದ್ದ ಎಂಬ ಆರೋಪದ ಮೇರೆಗೆ ಕೊಲೆ ನಡೆದಿರುವುದು ಬಯಲಿಗೆ ಬಂದಿದೆ.

ಘಟನೆ ನಡೆದ 24 ಗಂಟೆಯೊಳಗೆ 14 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಕೆಲವರನ್ನು ಬಂಧಿಸಬೇಕಾಗಿದೆ. ಬಂಧಿತರಲ್ಲಿ ಕೆಲವರು ಮಸೀದಿಯಲ್ಲಿ ಧರ್ಮ ಪ್ರಚಾರದಲ್ಲಿ ತೊಡಗಿದ್ದವರು ಎನ್ನಲಾಗಿದೆ. ಪರಿಶೀಲನೆ ಬಳಿಕ ಸ್ಪಷ್ಟವಾಗಲಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ 2 ಕಾರು, 3 ಬೈಕ್‌, ತಲವಾರ್‌, ಬಡಿಗೆ ಹಾಗೂ ಪೈಪ್‌ಗ್ಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದರು.

ಟಾಪ್ ನ್ಯೂಸ್

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.