ಕೈದಿಗಳಿಗೆ ಕ್ಷಮಾದಾನ-ಖಂಡನೆ
Team Udayavani, Aug 19, 2022, 4:33 PM IST
ಕಲಬುರಗಿ: ಗುಜರಾತ್‌ನ ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಗುಜರಾತಿನ ಜೈಲಿನಲ್ಲಿರುವ 11ಜನ ಕೈದಿಗಳಿಗೆ ಕ್ಷಮಾದಾನ ನೀಡಿರುವ ಸಂಗತಿ ನಿಜಕ್ಕೂ ಆಘಾತಕಾರಿಯಾಗಿದೆ. ಅಲ್ಲದೇ, ದಲಿತ ಬಾಲಕ ನೀರು ಕುಡಿದ ಎನ್ನುವ ಕಾರಣಕ್ಕೆ ಸಾಯುವಂತೆ ಹೊಡೆದ ಶಿಕ್ಷಕನೊಬ್ಬ ಕೌರ್ಯ ಮೆರೆದಿರುವುದನ್ನು ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ.
ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ, ಅತ್ಯಾಚಾರ ಮತ್ತು ಕೊಲೆ ಮಾಡಿದ ಅಪರಾಧಿಗಳಿಗೆ ಗುಜರಾತ್ ಸರಕಾರ ಮಾಡಿದ ಕ್ಷಮಾದಾನವನ್ನು ಕೂಡಲೇ ರದ್ದುಗೊಳಿಸಬೇಕು. ಬಿಡುಗಡೆ ಆದವರಿಗೆ ಸಿಹಿ ಹಂಚಿ, ಸನ್ಮಾನದೊಂದಿಗೆ ಸ್ವಾಗತ ಮಾಡಿದವರನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು. ಬಿಲ್ಕಿಸ್ ಬಾನೋ ಮತ್ತು ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು. ಕೇಂದ್ರ ಸರಕಾರದ ಆದೇಶ ಉಲ್ಲಂಘನೆ ಮಾಡಿದ ಗುಜರಾತ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಡಕೆ ಮುಟ್ಟಿ ನೀರು ಕುಡಿದಿದ್ದಕ್ಕಾಗಿ ಹೊಡೆದು ಕೊಂದು ಹಾಕಿದ ಸರಸ್ವತಿ ವಿದ್ಯಾ ಮಂದಿರದ ಮುಖ್ಯಸ್ಥ ಮತ್ತು ಶಿಕ್ಷಕರಿಗೆ ಬೇಲ್ ರಹಿತ ಬಂಧನ ಮುಂದುವರಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಸರಕಾರವೇ ಶಿಕ್ಷಣ ಕೇಂದ್ರಗಳನ್ನು ನಡೆಸಬೇಕು. ಎಲ್ಲ ಖಾಸಗಿ ಶಿಕ್ಷಣ ಕೇಂದ್ರಗಳನ್ನು ರದ್ದು ಗೊಳಿಸಬೇಕು. ಸಾರ್ವತ್ರಿಕ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಬೇಕು. ಈ ದಿಕ್ಕಿನಲ್ಲಿ ರಾಜಸ್ಥಾನ ಸರಕಾರವು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ, ಡಾ|ಮೀನಾಕ್ಷಿ ಬಾಳಿ, ಚಂದಮ್ಮ ಗೋಳಾ, ಪದ್ಮಿನಿ ಕಿರಣಗಿ, ಸುಧಾಮ ಧನ್ನಿ, ಪಾಂಡುರಂಗ ಮಾವಿನಕರ್, ಪೀರಪ್ಪ ಯಾತನೂರು, ಗುರು ಕೋಣಿನ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.