ಕೆಎಂಎಫ್‌ಗೆ ಪಾಟೀಲ ನೂತನ ಅಧ್ಯಕ್ಷ
Team Udayavani, Nov 16, 2018, 1:09 PM IST
ಕಲಬುರಗಿ: ತೀವ್ರ ಕುತೂಹಲ ಕೆರಳಿದ್ದ ಕಲಬುರಗಿ-ಬೀದರ-ಯಾದಗಿರಿ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್)ದ ಅಧ್ಯಕ್ಷರ ಚುನಾವಣೆಯಲ್ಲಿ ರಾಮಚಂದ್ರ ಕಲ್ಯಾಣರಾವ (ಆರ್. ಕೆ) ಪಾಟೀಲ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಗರದ ಒಕ್ಕೂಟದ ಕೇಂದ್ರ ಗುರುವಾರ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಆರ್.ಕೆ.ಪಾಟೀಲ ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಕಲಬುರಗಿ ಸಹಾಯಕ ಆಯುಕ್ತ ಎಂ. ರಾಚಪ್ಪ ಅವರು ಅವಿರೋಧ ಆಯ್ಕೆ ಘೋಷಿಸಿದರು.
ಆಳಂದ ತಾಲೂಕು ಸರಸಂಬಾ ಗ್ರಾಮದ ಹಾಲು ಉತ್ಪಾದಕರ ಸಂಘದ ಸದಸ್ಯತ್ವದಿಂದ ಕಳೆದ ಅಕ್ಟೋಬರ್ 31ರಂದು ನಡೆದ ಒಕ್ಕೂದ ನಿರ್ದೇಶಕರ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿ ಈಗ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಕೆ. ಪಾಟೀಲ ಅವರು ಆಳಂದ ಕ್ಷೇತ್ರದ ಮಾಜಿ ಶಾಸಕ ಬಿ.ಆರ್. ಪಾಟೀಲ ಅವರ ಸಹೋದರ ಪುತ್ರ.
ಅಧ್ಯಕ್ಷ ಸ್ಥಾನಕ್ಕೆ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶಂಪುರ ಹಾಗೂ ರಾಜಶೇಖರ ಪಾಟೀಲ ಅವರ ಸಹೋದದರಾದ ಅನುಕ್ರಮವಾಗಿ ಮಾರುತಿ ಖಾಶೆಂಪುರ ಹಾಗೂ ರೇವಣಸಿದ್ದಪ್ಪ ಪಾಟೀಲ ಅವರ ಹೆಸರು ಪ್ರಬಲವಾಗಿ ಕೇಳಿ ಬಂದಿತ್ತು. ಇದರ ನಡುವೆ ಮಲ್ಲಿಕಾರ್ಜುನ ಬಿರಾದಾರ ಹೆಸರೂ ಮುಂಚೂಣಿಯಲ್ಲಿತ್ತು. ಆದರೆ ಕಳೆದ ಒಂದೂವರೆ ದಶಕದಿಂದ ಕಲಬುರಗಿಗೆ ಅಧ್ಯಕ್ಷ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಜತೆಗೆ ಸಚಿವರ ಸಹೋದರರಿಗೆ ಮತ್ತೆ ಮಣೆ ಹಾಕಿದರೆ ಬೇರೆಯವರಿಗೆ ಅವಕಾಶ ಇಲ್ಲದಂತಾಗುತ್ತದೆ ಎಂಬುದನ್ನು ಮನಗಂಡು ಆರ್. ಕೆ.ಪಾಟೀಲ ಅವರನ್ನೇ ಒಮ್ಮತದ ಅಭ್ಯರ್ಥಿ ಎಂಬುದಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರು ಅಂತಿಮಗೊಳಿಸಿದ್ದರಿಂದ ಸುಗಮವಾಗಿ ಅವಿರೋಧ ಆಯ್ಕೆ ನಡೆಯಿತು. ಈ ಮೂಲಕ ಕಲಬುರಗಿ-ಬೀದರ- ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಕಾಂಗ್ರೆಸ್ ಬೆಂಬಲಿತ ಆಡಳಿತಕ್ಕೆ ಬಂದಂತಾಯಿತು. ಆರ್.ಕೆ. ಪಾಟೀಲ ಕೆಎಂಎಫ್ ಅಧ್ಯಕ್ಷರಾಗಲಿದ್ದಾರೆ ಎಂದು ಉದಯವಾಣಿ ಬುಧವಾರದ ಸಂಚಿಕೆಯಲ್ಲಿಯೇ ಸಮಗ್ರ ವರದಿ ಮಾಡಿದ್ದನ್ನು ಇಲ್ಲಿ ಗಮನಿಸಬಹುದಾಗಿದೆ.
ಸಭೆಯಲ್ಲಿ ಭಾಗವಹಿಸಿದ್ದವರು: ಚುನಾಯಿತ 12 ನಿರ್ದೇಶಕರ ಜತೆಗೆ ಐವರು ಅಧಿಕಾರಿಗಳು ಹಾಗೂ ಸರ್ಕಾರದಿಂದ ನಾಮನಿರ್ದೇಶನರಾದ ಸದಸ್ಯರೊಬ್ಬರು ಸೇರಿ 18 ಸದಸ್ಯರು ಚುನಾವಣೆ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಮೊದಲ
ಬಾರಿಗೆ ನಿರ್ದೇಶಕರಾಗಿ ಚುನಾಯಿತರಾದ ಆಳಂದದ ಸಂತೋಷ ಸುಭಾಷ ಗುತ್ತೇದಾರ, ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಪ್ರತಿನಿಧಿಯವರು ಮಾತ್ರ ಗೈರು ಹಾಜರಾಗಿದ್ದರು. ನಿರ್ದೇಶಕರಾದ ಈರಣ್ಣ ಶಿವಲಿಂಗಪ್ಪ ಝಳಕಿ, ಚಂದ್ರಕಾಂತ ಭೂಸನೂರ, ರೇವಣಸಿದ್ದಪ್ಪ ಪಾಟೀಲ, ಶ್ರೀಕಾಂತ ವೈಜನಾಥ ದಾನಿ, ಬಂಡುರಾವ ಕುಲಕರ್ಣಿ, ದಿವಾಕರರಾವ್ ಜಾಗೀರದಾರ್, ವಿಠಲರೆಡ್ಡಿ ಕೃಷ್ಣಾರೆಡ್ಡಿ, ಮಾರುತಿ ಖಾಶೆಂಪುರ, ಮಲ್ಲಿಕಾರ್ಜುನ ಬಿರಾದಾರ ಹಾಗೂ ಭೀಮರಾವ ಅಮೃತರಾವ್ ಪಾಲ್ಗೊಂಡಿದ್ದರು.
ಇದರ ಜತೆಗೆ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕರು, ಕೆಎಂಎಫ್ ಒಕ್ಕೂಟದ ರಾಜ್ಯ ಮಟ್ಟದ ಅಧಿಕಾರಿ, ಕಲಬುರಗಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸರ್ಕಾರದಿಂದ ಕಲಬುರಗಿ ಕೆಎಂಎಫ್ ಒಕ್ಕೂಟಕ್ಕೆ ನಾಮನಿರ್ದೇಶನಗೊಂಡಿರುವ ಸಂಗಪ್ಪ ಶಾಮರಾವ ಪಾಟೀಲ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.
ವಿಜಯೋತ್ಸವ: ಆರ್.ಕೆ. ಪಾಟೀಲ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ವಿಜಯೋತ್ಸವ ಆಚರಿಸಲಾಯಿತು. ಮಾಜಿ ಶಾಸಕ ಬಿ.ಆರ್. ಪಾಟೀಲ, ನಿರ್ದೇಶಕರು-ಕಾರ್ಯಕರ್ತರು ಪಾಲ್ಗೊಂಡಿದ್ದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಸವರಾಜ ವಾಲಿ, ನಿರ್ದೇಕರಾದ ಸೋಮಶೇಖರ ಗೋನಾಯಕ, ಜಿಪಂ ಸದಸ್ಯ ಅರುಣ ಎಂ. ಪಾಟೀಲ, ಶರಣು ಪಾಟೀಲ ಸೇರಿದಂತೆ ಇತರರು ಶುಭ ಕೋರಿದರು.
ಹೈನೋದ್ಯಮ ಉತ್ತೇಜನಕ್ಕೆ ಕ್ರಮ
ಸಕಾಲಕ್ಕೆ ಮಳೆ ಬಾರದೇ ರೈತರು ಕಷ್ಟ ಅನುಭವಿಸುತ್ತಿರುವುದರಿಂದ ಪರ್ಯಾಯವಾಗಿ ಆರ್ಥಿಕವಾಗಿ ಸ್ವಾವಲಂಬನೆ ರೂಪಿಸುವ ಹೈನೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಂಡು ಹಾಲು ಉತ್ಪಾದನೆಗೆ ಒತ್ತು ನೀಡಲಾಗುವುದು. ಪಕ್ಷದ ವರಿಷ್ಠರು ವಿಶ್ವಾಸವಿಟ್ಟು ಒಕ್ಕೂಟಕ್ಕೆ ಅಧ್ಯಕ್ಷರನ್ನಾಗಿಸಿದ್ದಾರೆ. ಹೀಗಾಗಿ ಎಲ್ಲರ ಸಲಹೆ-ಸೂಚನೆ ಮೇರೆಗೆ ಆರ್ಥಿಕ ಸಬಲತೆ ಹೊಂದುವ ನಿಟ್ಟಿನಲ್ಲಿ ಒಕ್ಕೂಟ ಮುನ್ನಡೆಸಿಕೊಂಡು ಹೋಗಲಾಗುವುದು.
ಆರ್.ಕೆ. ಪಾಟೀಲ, ನೂತನ ಅಧ್ಯಕ್ಷರು, ಕೆಎಂಎಫ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.