
ಕೊತ್ತಲ ಬಸವೇಶ್ವರ ಜಾತ್ರೆಗೆ ಜನವೋ ಜನ
Team Udayavani, Apr 13, 2018, 3:05 PM IST

ಸೇಡಂ: ಸುಪ್ರಸಿದ್ಧ ಐತಿಹಾಸಿಕ ಶ್ರೀ ಕೊತ್ತಲ ಬಸವೇಶ್ವರ ಜಾತ್ರೆ ಸಂಭ್ರಮ-ಸಡಗರದಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ನೆರವೇರಿತು. ಜಾತ್ರೆ ನಿಮಿತ್ತ ದೇವಾಲಯದಲ್ಲಿ ಪೀಠಾಧಿಪತಿ ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಪೂಜೆಗಳು ನೆರವೇರಿದವು. ಬುಧವಾರ ರಾತ್ರಿ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಿಂದ ತೆರಳಿದ ಉಚ್ಛಾಯಿ ಮೆರವಣಿಗೆ ರಾತ್ರಿ ಪಟ್ಟಣದ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿತು. ಈ ವೇಳೆ ಅನೇಕ ಭಕ್ತರು, ಪುರವಂತರು, ಉಚ್ಛಾಯಿ ಎದುರಿಗೆ ನೀರೆರೆದು ಪೂಜೆ ಸಲ್ಲಿಸಿದರು.
ಗುರುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಕೆಂಡ ಹಾಯುವ ಅಗ್ಗಿ ಕಟ್ಟೆ ಹತ್ತಿರ ಆಗಮಿಸಿದಾಗ ದೇವಾಲಯದ ಸದಾಶಿವ ಸ್ವಾಮೀಜಿ, ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮೀಜಿ, ಶಿವಶಂಕರೇಶ್ವರ ಮಠದ ಶಿವಶಂಕರ ಶಿವಾಚಾರ್ಯರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಗ್ಗಿ ಕಟ್ಟೆಗೆ ಐದು ಸುತ್ತು ಸುತ್ತಿ, ನಂತರ ಸಾವಿರಾರು ಭಕ್ತರೊಂದಿಗೆ ಪೀಠಾಧಿಪತಿ ಸದಾಶಿವ ಸ್ವಾಮೀಜಿ ಕೆಂಡ ಹಾಯ್ದರು.
ಈ ವೇಳೆ ಪುರವಂತರು ಮಾರುದ್ದದ ಸಲಾಕೆ, 100 ಅಡಿ ಹಗ್ಗವನ್ನು ತಮ್ಮ ಕೆನ್ನೆಗೆ ಚುಚ್ಚಿಕೊಂಡು ಭಕ್ತಿಯ ಪರಾಕಾಷ್ಠೆ ಮೆರೆದರು. ಇದನ್ನು ಕಂಡ ಜನ ಜೈಕಾರ ಹಾಕುತ್ತ ಭಕ್ತಿ ಸಮರ್ಪಿಸಿದರು. ಸಂಜೆ ರಥೋತ್ಸವ ನೋಡಲು ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಜನ ಆಗಮಿಸಿದ್ದರು. ಊಡಗಿ ರಸ್ತೆಯ ಗುಂಪಾದಿಂದ ಬಂದ ನಂದಿಕೋಲುಗಳ ಕುಣಿತ ನೆರೆದವರ ಗಮನಸೆಳೆದವು.
ನಂತರ ಶೃಂಗಾರಗೊಂಡ ಶ್ರೀ ಕೊತ್ತಲ ಬಸವೇಶ್ವರ ರಥ ರಥಬೀದಿಯಲ್ಲಿ ಸಂಚರಿಸಿತು. ಬಾದಾಮಿ, ಉತ್ತತ್ತಿ ಎಸೆದು ಭಕ್ತರು ಭಕ್ತಿ ಸಮರ್ಪಿಸಿದರು. ರಥೋತ್ಸವ ನೋಡಲು ಜನ ರಥ ಬೀದಿಯ ಬಹುತೇಕ ಕಟ್ಟಡಗಳ ಮೇಲೇರಿ ಕುಳಿತಿದ್ದು ಕುತೂಹಲ ಕೆರಳಿಸಿತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.