ಸುಡು ಬಿಸಿಲಿಗೆ ಬಸವಳಿದ ಜನತೆ


Team Udayavani, Mar 19, 2019, 6:34 AM IST

gul-1.jpg

ಕಲಬುರಗಿ: ನಗರದ ನೂತನ ವಿದ್ಯಾಲಯ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಜನತೆ ಬೀರು ಬಿಸಿಲಿಗೆ ಬಸವಳಿದು ಹೋದರು. ರಾಹುಲ್‌ ಗಾಂಧಿ ಭಾಷಣ ಕೇಳಲೆಂದು ಬಂದಿದ್ದ ಸಹಸ್ರಾರು ಜನರು ಸುಡು ಬಿಸಿಲಿನ ತಾಪಕ್ಕೆ ಹೈರಾಣಾದರು.

ಲೋಕಸಭಾ ಚುನಾವಣೆಯ ಮೂರನೇ ಹಂತದಲ್ಲಿ ಏ.23ಕ್ಕೆ ಮತದಾನ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕ
ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ, ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಕಲಬುರಗಿಯಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ನಡೆಸಿತು. ಖರ್ಗೆ ಪರ ಪ್ರಚಾರಕ್ಕೆಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆಗಮಿಸಿದ್ದರಿಂದ ಕಲಬುರಗಿ, ಯಾದಗಿರಿ, ಬೀದರ್‌ ಮತ್ತಿತರ ಕಡೆಗಳಿಂದ ಕಾಂಗ್ರೆಸ್‌ ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು. 

ರಾಹುಲ್‌ ಭಾಷಣ ಕೇಳಲೆಂದು ರ್ಯಾಲಿ ಆವರಣಕ್ಕೆ ಬೆಳಿಗ್ಗೆ 10ರಿಂದಲೇ ಜನತೆ ಬರತೊಡಗಿದ್ದರು. ಮಧ್ಯಾಹ್ನ 1.30ಕ್ಕೆ ರಾಹುಲ್‌ ಮೈದಾನಕ್ಕೆ ಬಂದರು. ನಂತರದಲ್ಲಿ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ದಿನೇಶ ಗುಂಡೂರಾವ್‌ ಭಾಷಣದ ಬಳಿಕ ರಾಹುಲ್‌ ತಮ್ಮ ಭಾಷಣ ಶುರು ಮಾಡಿದರು. 

ಅಷ್ಟರೊಳಗೆ ಜನತೆ ಸೂರ್ಯನ ಪ್ರತಾಪಕ್ಕೆ ತತ್ತರಿಸಿದರು. ಇದರ ನಡುವೆ ಸುಡು ಬಿಸಿಲಿಗೆ ನೀರಿನ ದಾಹ ಹೆಚ್ಚಾಗಿದ್ದರಿಂದ ನೀರಿಗಾಗಿ ಮೈದಾನದೊಳಗೆ ಜನತೆ ಪರಿತಪಿಸುವ ದೃಶ್ಯ ಕಂಡು ಬಂತು. ಅಲ್ಲದೇ, ರಾಹುಲ್‌ ಗಾಂಧಿ ಭಾಷಣ ಮುಗಿಯುತ್ತಿದ್ದಂತೆ ಮೈದಾನದಿಂದ ಹೊರಬಂದ ಜನರು ಹೋಟೆಲ್‌, ಬೇಕರಿ, ಎಳನೀರು ಅಂಗಡಿಗಳಲ್ಲಿ ಸೇರಿಕೊಂಡು ದಾಹ ನೀಗಿಸಿಕೊಂಡು ನಿಟ್ಟುಸಿರು ಬಿಟ್ಟರು.

ರಾಹುಲ್‌ ಗಾಂಧಿ ಕಾರ್ಯಕ್ರಮದಿಂದಾಗಿ ನಗರದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅಲ್ಲಲ್ಲಿ ಬ್ಯಾರಿಕೇಡ್‌ ಗಳನ್ನು ಹಾಕಿದ್ದರಿಂದ ಕಾರ್ಯಕ್ರಮ ಮುಗಿದ ಬಳಿಕ ಕೂಡ ಬಿಸಿಲಿನಲ್ಲಿ ಮನೆಗಳಿಗೆ ತೆರಳುವವರು ಹಾಗೂ ಸಾರ್ವಜನಿಕರು, ವಾಹನ ಸವಾರರು ಪರದಾಡಿದರು.

ಟಾಪ್ ನ್ಯೂಸ್

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

5-uv-fusion

UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.