ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ವೃದ್ಧಿ: ಮೋದಿ
Team Udayavani, Nov 3, 2017, 10:26 AM IST
ಜೇವರ್ಗಿ: ವಿದ್ಯೆ ಮಾನಸಿಕ ಸಾಮರ್ಥ್ಯ ಬೆಳೆಸಿದರೆ, ಕ್ರೀಡೆ ದೈಹಿಕ ಸಾಮರ್ಥ್ಯದ ಜೊತೆಗೆ ಎದುರಾಳಿಯನ್ನು ಎದುರಿಸುವ ಕಲೆ ಕಲಿಸುತ್ತದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಶರಣುಕುಮಾರ ಮೋದಿ
ಹೇಳಿದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಪ್ರಥಮ ಪ್ರೋ ಕಬ್ಬಡ್ಡಿ ಹೊನಲು ಬೆಳಕಿನ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ, ಇವೆರಡನ್ನು ಸಮವಾಗಿ ಸ್ವೀಕರಿಸುವ ಭಾವನೆ ಹೊಂದಿರಬೇಕು.
ಕ್ರೀಡಾಪಟುಗಳು ಯಾವುದೇ ಆಟವಾಡಲಿ ಅವರಲ್ಲಿ ದ್ವೇಷದ ಭಾವ ಇರಬಾರದು. ಗ್ರಾಮೀಣ ಕ್ರೀಡೆಗಳನ್ನು ಆಡುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಸದೃಢವಾಗುತ್ತದೆ. ಕಬ್ಬಡ್ಡಿ, ಕುಸ್ತಿ, ಭಾರ ಎತ್ತುವ ಕ್ರೀಡೆಗಳು ನಶಿಸುತ್ತಿರುವ ಇಂದಿನ ದಿನಗಳಲ್ಲಿ ಅವುಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಹೇಳಿದರು.
ರೈತ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೀತಿಯಲ್ಲಿ
ಪಟ್ಟಣದಲ್ಲಿ ಪ್ರೋ ಕಬ್ಬಡ್ಡಿ ಪಂದ್ಯಾವಳಿ ಆಯೋಜಿಸಿರುವ ಗೆಳೆಯರ ಬಳಗದ ಕಾರ್ಯ ಶ್ಲಾಘನೀಯ ಎಂದರು.
ನಂತರ ರಜಪೂತ ಲಯನ್ಸ್ ಹಾಗೂ ಜೈ ಸೇವಾಲಾಲ ತಂಡದ ನಡುವೆ ಪಂದ್ಯ ನಡೆದು ಕೊನೆಗೆ ಒಂದು ಅಂಕದಿಂದ ಜೈ ಸೇವಾಲಾಲ ತಂಡ ಜಯಶಾಲಿಯಾಯಿತು. ಮುಖಂಡ ರಾಜಶೇಖರ ಸೀರಿ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಸೊನ್ನದ ಡಾ| ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯರಾದ ಶಿವರಾಜ ಪಾಟೀಲ ರದ್ದೇವಾಡಗಿ, ಶಾಂತಪ್ಪ ಕೂಡಲಗಿ ಮತ್ತಿತರರು ಇದ್ದರು. ಸಂದೀಪಸಿಂಗ್ ಠಾಕೂರ ಪ್ರಾಸ್ತಾವಿಕವಾಗಿ ಮಾತನಾಡಿದರು, ರಾಜು ಮುದ್ದಡಗಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.