ಶಹಾಬಾದನಲ್ಲಿ ಹಂದಿ-ಬೀದಿ ನಾಯಿಗಳದ್ದೇ ಕಾಟ


Team Udayavani, Jun 8, 2022, 1:00 PM IST

9dogs

ಶಹಾಬಾದ: ನಗರದಲ್ಲಿ ಹಂದಿ, ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಸಾರ್ವಜನಿಕರು ಬೇಸತ್ತು ಹೋಗಿದ್ದಾರೆ. ಹಂದಿಗಳು ಮತ್ತು ನಾಯಿಗಳ ಸಂತತಿ ಹೆಚ್ಚಾಗಿರುವುದರಿಂದ ಸದ್ಯ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡೇ ಹೋಗುವ ಪರಿಸ್ಥಿತಿಯಿದೆ.

ಕೆಲಸ ಮುಗಿಸಿ ರಾತ್ರಿ ಮನೆಗೆ ಬರುವವರಿಗೆ ಕಳ್ಳರಿಗಿಂತ ನಾಯಿಗಳದ್ದೇ ಭಯ ಹೆಚ್ಚಾಗಿದೆ. ಕಸದ ತೊಟ್ಟಿಯಲ್ಲಿ ಗಲೀಜು ತಿನ್ನಲು ಬೆಳಗ್ಗೆಯೇ ಹಂದಿಗಳು ಲಗ್ಗೆ ಹಾಕಿದರೆ, ಅವುಗಳನ್ನು ಹಿಮ್ಮೆಟ್ಟಿಸಲು ನಾಯಿಗಳು ಬೊಗಳುತ್ತವೆ. ನಗರದ ಮುಖ್ಯ ರಸ್ತೆಗಳಲ್ಲಿಯ ಮನೆಯೊಳಗೆ ಹಂದಿಗಳು, ಬೀದಿ ನಾಯಿಗಳು ರಾಜಾರೋಷವಾಗಿ ನುಗ್ಗುತ್ತಿವೆ. ಈ ಹಿಂದೆ ನಾಯಿಗಳ ಹಿಂಡು ಬಾಲಕರಿಗೆ ಕಚ್ಚಿದ ಅನೇಕ ಉದಾಹರಣೆಗಳು ಇವೆ. ಹಂದಿಗಳ ಕಾಟದಿಂದ ವೃದ್ಧ ಮಹಿಳೆಯೊಬ್ಬರು ಘಾಸಿಯಾಗಿದ್ದರೂ ಕೇಳುವವರೇ ಇಲ್ಲದಂತಾಗಿದೆ.

ನಗರದ ಆರೋಗ್ಯ ನಿರೀಕ್ಷರ ಕಚೇರಿ ಮುಂಭಾಗದಲ್ಲಿನ ತರಕಾರಿ ಮಾರುಕಟ್ಟೆ ಹತ್ತಿರ ನಗರಸಭೆ ಮಳಿಗೆ ಹಂದಿಗಳ ಪಾಲಿಗೆ ಸ್ವರ್ಗವಾದಂತಾಗಿದೆ. ಇಲ್ಲಿನ ತ್ಯಾಜ್ಯಕ್ಕೆ ಸದಾಕಾಲ ಮುತ್ತಿಗೆ ಹಾಕಿಕೊಂಡೇ ಇರುತ್ತವೆ. ನಗರಸಭೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ಬೀದಿ ನಾಯಿ, ಹಂದಿಗಳ ಕಾಟ ಹೆಚ್ಚಾದಾಗಲೊಮ್ಮೆ ಕುಂಭಕರ್ಣ ನಿದ್ರೆಯಿಂದ ಎಚ್ಚರಗೊಂಡಂತೆ ತಾತ್ಕಾಲಿಕ ಕಾರ್ಯವೆಸಗುವ ನಗರಸಭೆ ಅಧಿಕಾರಿಗಳು ಕೆಲ ದಿನಗಳ ನಂತರ ತಮಗೂ ಇದಕ್ಕೂ ಸಂಬಂಧವೇ ಇಲ್ಲವೆನ್ನುವಂತೆ ಇರುತ್ತಾರೆ. ಇನ್ನಾದರೂ ಗಮನಹರಿಸುವರೇ ಕಾದು ನೋಡಬೇಕಿದೆ.

ನಗರದ ವಾರ್ಡ್‌ ನಂ.17ರಲ್ಲಿ ಸಾಕಷ್ಟು ಹಂದಿಗಳು ಮನೆಯೊಳಗೂ ನುಗ್ಗುತ್ತಿವೆ. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಳೆದು ರಸ್ತೆಯ ತುಂಬಾ ಹರಡುತ್ತಿವೆ. ಹಂದಿಗಳನ್ನು ಹಿಡಿಯಲು ನಾಯಿಗಳ ದಂಡೇ ಬರುತ್ತಿವೆ. ರಕ್ತದ ರುಚಿ ಕಂಡ ನಾಯಿಗಳು ಹಂದಿಗಳ ಮೇಲೆ ಎರಗುತ್ತಿವೆ. ಇದರಿಂದ ಮಕ್ಕಳನ್ನು ಹೊರಗೆ ಕಳಿಸದಂತಹ ಪರಿಸ್ಥಿತಿ ಇದೆ. ಅಲ್ಲದೇ ಮುಖ್ಯ ರಸ್ತೆಗಳಲ್ಲಿ ನಾಯಿಗಳ ಉಪಟಳ ಹೆಚ್ಚಾಗಿದೆ. ಆದ್ದರಿಂದ ಕೂಡಲೇ ಹಂದಿ-ನಾಯಿಗಳ ಕಾಟ ತಪ್ಪಿಸಿ. -ನಾಗಣ್ಣ ರಾಂಪೂರೆ, ವಾರ್ಡ್‌ ನಿವಾಸಿ.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.