ಯೋಜನೆ ಲಾಭ ಅರ್ಹರಿಗೆ ತಲುಪಿಸಲು ಯತ್ನ
Team Udayavani, Aug 19, 2020, 5:29 PM IST
ಕಲಬುರಗಿ: ಜಿಪಂನಿಂದ ಸಾಕಷ್ಟು ಯೋಜನೆಗಳಿದ್ದು, ಅವುಗಳನ್ನೆಲ್ಲ ಅರ್ಹರಿಗೆ ತಲುಪಿಸುವ ನಿಟ್ಟಿನ ಜತೆಗೆ ಮುಂದಿನ ದಿನಗಳಲ್ಲಿ ವಸತಿ ನಿಲಯಗಳು ಪ್ರಾರಂಭವಾದಲ್ಲಿ ಪ್ರವೇಶಾತಿ ಬಯಸುವ ಎಲ್ಲ ವಿದ್ಯಾರ್ಥಿಗಳು ಪ್ರವೇಶ ಕಲ್ಪಿಸಲು ಮುಂದಾಗಲಾಗುವುದು ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ ಪಾಟೀಲ್ ಹೇಳಿದರು.
ಇಲ್ಲಿನ ಜಿಪಂ ನೂತನ ಸಭಾಂಗಣದಲ್ಲಿರುವ ಸ್ಥಾಯಿ ಸಮಿತಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಅವರು, ಕೋವಿಡ್ ದಿಂದ ಆರ್ಥಿಕ ಅನುದಾನದ ಕೊರತೆಯಿಂದ ಎಲ್ಲರಿಗೂ ಯೋಜನೆಗಳು ತಲುಪಲು ಸಾಧ್ಯವಾಗದಿದ್ದರೂ ಇರುವ ಯೋಜನೆಗಳ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮೊದಲು ಆದ್ಯತೆ ನೀಡಲಾಗುವುದು ಎಂದರು.
ಈ ವರ್ಷ ಕೋವಿಡ್ ದಿಂದ ಶಾಲಾ-ಕಾಲೇಜುಗಳೆಲ್ಲ ಬಂದ್ ಇರುವುದರಿಂದ ಎಲ್ಲ ವಸತಿ ನಿಲಯಗಳೆಲ್ಲ ಬಂದ್ ಆಗಿವೆ. ಮುಂದಿನ ದಿನಗಳಲ್ಲಿ ಆರಂಭವಾದಲ್ಲಿ ವಸತಿ ನಿಲಯ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆಲ್ಲ ಅವಕಾಶ ಕಲ್ಪಿಸಲಾಗುವುದು. ಒಬ್ಬ ವಿದ್ಯಾರ್ಥಿಯೂ ಹೊರಗುಳಿಯದಂತೆ ನಿಗಾವಹಿಸಲಾಗುವುದು ಎಂದರು.
ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಪಂ ವಿಪಕ್ಷ ನಾಯಕ ಶಿವಾನಂದ ಪಾಟೀಲ್ ಮರತೂರ, ಸದಸ್ಯರಾದ ಅರುಣ ಪಾಟೀಲ್, ಹರ್ಷಾನಂದ ಗುತ್ತೇದಾರ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಸೇರಿದಂತೆ ಮುಂತಾದವರು ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.