AICC ಅಧ್ಯಕ್ಷರ ತವರು ಕ್ಷೇತ್ರದಲ್ಲಿ ಶನಿವಾರ ಪಿಎಂ ಮೋದಿ ಚುನಾವಣ ರಣಕಹಳೆ
2019ರಲ್ಲೂ ಚುನಾವಣಾ ಭಾಷಣ ಮಾಡಿದ್ದರು.. ಖರ್ಗೆ ಸೋತಿದ್ದರು..
Team Udayavani, Mar 14, 2024, 8:07 PM IST
ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕ್ಷೇತ್ರ ಕಲಬುರಗಿ ಯಿಂದ ಚುನಾವಣಾ ಕಹಳೆ ಮೊಳಗಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾರ್ಚ್ 16 ರಂದು ಆಗಮಿಸುತ್ತಿದ್ದಾರೆ.
ಚುನಾವಣ ದಿನಾಂಕ ನಿಗದಿ ದಿನಗಣನೆ ನಡುವೆ ಪ್ರಧಾನಿ ಆಗಮಿಸುತ್ತಿರುವುದು ತೀವ್ರ ಕೂತುಹಲ ಮೂಡಿಸಿದೆ. ಮಾರ್ಚ್ 16 ರಂದು ಮಧ್ಯಾಹ್ನ 1ಕ್ಕೆ ವಿಶೇಷ ವಿಮಾನ ಮೂಲಕ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ, ತದನಂತರ ಹೆಲಿಕ್ಯಾಪ್ಟರ್ ಮೂಲಕ ನಗರದ ಪೊಲೀಸ್ ಮೈದಾನಕ್ಕೆ ಆಗಮಿಸಿ ಮಿನಿ ರೋಡಶೋ ಮುಖಾಂತರ ಸಮಾವೇಶ ನಡೆಯುವ ನೂತನ ವಿದ್ಯಾಲಯಕ್ಕೆ ಆಗಮಿಸುವರು.
ತದನಂತರ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಪಕ್ಷದ ಕಾರ್ಯಕರ್ತರು, ಜನರನ್ನು ಉದ್ದೇಶಿಸಿ ಭಾಷಣ ಮಾಡಿ ಚುನಾವಣ ಕಹಳೆ ಮೊಳಗಿಸಲಿದ್ದಾರೆ. 2019 ಲೋಕಸಭಾ ಚುನಾವಣೆ ಮುಂಚೆಯೂ ಪ್ರಧಾನಿ ಇದೇ ನೂತನ ವಿದ್ಯಾಲಯ ಮೈದಾನದಲ್ಲಿ ಚುನಾವಣಾ ಭಾಷಣ ಮಾಡಿದ್ದರು. ಇದೇ ಸಮಾವೇಶದಲ್ಲಿ ಆಗ ಕಾಂಗ್ರೆಸ್ ಪಕ್ಷದಿಂದ ಚಿಂಚೋಳಿ ಕ್ಷೇತ್ರದ ಶಾಸಕರಾಗಿದ್ದ ಡಾ. ಉಮೇಶ ಜಾಧವ್ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಯಾಗಿದ್ದರು.
ಈಗ ಎರಡನೇ ಬಾರಿಗೆ ಲೋಕಸಭಾ ಅಭ್ಯರ್ಥಿ ಯಾಗಿ ಕಣಕ್ಕಿಳಿಯುತ್ತಿರುವ ಸಂದರ್ಭದಲ್ಲಿ ಅದರಲ್ಲೂ ಟಿಕೆಟ್ ಪಟ್ಟಿ ಪ್ರಕಟವಾದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವುದರಿಂದ ಎಲ್ಲರ ನೋಟ ಕಲಬುರಗಿ ಯತ್ತ ಎನ್ನುವಂತಾಗಿದೆ.
ಸಿದ್ದತೆ ಪರಿಶೀಲನೆ
ನೂತನ ವಿದ್ಯಾಲಯ ಮೈದಾನದಲಿ ನಡೆಯುವ ಪ್ರಧಾನಿ ಕಾರ್ಯಕ್ರಮದ ಸಿದ್ದತೆ ಯನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ,ಪೊಲೀಸ್ ಆಯುಕ್ತ ಆರ್ ಚೇತನ್, ಎಸ್ಪಿ ಅಕ್ಷಯ ಹಾಕೆ ಪರಿಶೀಲನೆ ನಡೆಸಿದರು.
ಸಂಸದ ಡಾ.ಉಮೇಶ ಜಾಧವ್, ಬಿಜೆಪಿ ಮುಖಂಡ ರಾದ ರಾಜುಗೌಡ, ಪಿ.ರಾಜೀವ್, ರಾಜಕುಮಾರ ಪಾಟೀಲ್ ತೇಲ್ಕೂರ, ಶಿವರಾಜ ಪಾಟೀಲ್ ರದ್ದೇವಾಡಗಿ, ಚಂದು ಪಾಟೀಲ್ ಮುಂತಾದವರು ಸಹ ಸಮಾವೇಶದ ಸಿದ್ದತೆ ಗಳನ್ನು ಅವಲೋಕಿಸಿ ಪ್ರಧಾನಿ ಪ್ರವಾಸದ ವಿವರಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.