ರೈಲು ನಿಲ್ದಾಣಕ್ಕೆ ಪೊಲೀಸ್ ಭದ್ರತೆ
Team Udayavani, Jun 19, 2022, 10:05 AM IST
ಕಲಬುರಗಿ: ಕೇಂದ್ರ ಸರ್ಕಾರ ಜಾರಿಗೆ ತಂದ ಅಗ್ನಿಪಥ್ ನಿಯಮದ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಯುವಕರ ಆಂದೋಲನದ ಹಿನ್ನೆಲೆಯಲ್ಲಿ ನಗರದ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಸೇನೆ ಭರ್ತಿಯಲ್ಲಿ ಗುತ್ತಿಗೆ ಪದ್ಧತಿ ಮತ್ತು ವಯಸ್ಸಿನ ನಿರ್ಬಂಧವನ್ನು 23ಕ್ಕೆ ಏರಿಕೆ ಮಾಡಿರುವ ಕ್ರಮವನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ರೈಲು ನಿಲ್ದಾಣಕ್ಕೆ ಭದ್ರತೆ ಒದಗಿಸಲಾಗಿದೆ.
ವಿವಿಧ ರಾಜ್ಯಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ಭಸ್ಮ ಮಾಡಲಾಗಿದೆ. ಬಹುತೇಕ ಕಡೆ ಅನೇಕ ರೈಲುಗಳನ್ನು ರದ್ದು ಪಡಿಸಲಾಗಿದೆ. ಕಲಬುರಗಿಯಿಂದ ಹೊರಡುವ ರೈಲುಗಳು ರದ್ದಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಚನೆ ಮೇರೆಗೆ ರೈಲ್ವೆ ಸ್ಟೇಷನ್‌ಗಳಿಗೆ ಭಾರೀ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ಕಲಬುರಗಿ ರೈಲ್ವೆ ನಿಲ್ದಾಣಕ್ಕೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನಗರದ ರೈಲ್ವೆ ನಿಲ್ದಾಣದ ಪ್ರವೇಶದ ದ್ವಾರದಲ್ಲಿ ಪೊಲೀಸರ ಸರ್ಪಗಾವಲು ತೀವ್ರವಾಗಿದೆ. ಪ್ರಯಾಣಿಕರು ಸೇರಿದಂತೆ ಎಲ್ಲರ ಮೇಲೆ ನಿಗಾವಹಿಸಲಾಗುತ್ತಿದೆ. ಯುವಕರ ಓಡಾಟದ ಮೇಲೆ ಗಮನ ತೀವ್ರಗೊಳಿಸಲಾಗಿದೆ. ರೈಲ್ವೆ ನಿಲ್ದಾಣದಲ್ಲಿ ಯಾವುದೇ ಅವಘಡ ನಡೆಯದಂತೆ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ.
ಸಧ್ಯಕ್ಕೆ ಕಲಬುರಗಿ ರೈಲು ನಿಲ್ದಾಣ ಸೇಫಾಗಿದೆ. ನಮ್ಮ ಆರ್‌ಪಿಎಫ್ ಮತ್ತು ಜಿಆರ್‌ಪಿ ಪೊಲೀಸ್ ಬಲವನ್ನು ಬಳಕೆ ಮಾಡಿಕೊಂಡು ಭದ್ರತೆ ಕೈಗೊಂಡಿದ್ದೇವೆ. ಯಾವುದೇ ಪ್ರತಿಭಟನೆ ನಡೆದಿಲ್ಲ. ನಿಲ್ದಾಣ ಮತ್ತು ರೈಲ್ವೆಗೆ ಸಂಬಂಧಿಸಿದ ಎಲ್ಲ ಆಸ್ತಿ ಪಾಸ್ತಿ ಸೇಫಾಗಿದ್ದು, ಯಾವುದೇ ಗಲಾಟೆ ಇಲ್ಲ. ಮುಂಜಾಗ್ರತಾ ಕ್ರಮವಾಗಿ ನಮ್ಮ ಭದ್ರತಾ ಬಲದೊಂದಿಗೆ ಇನ್ನಷ್ಟು ಹೆಚ್ಚುವರಿ ಪೊಲೀಸ್ ಬಲವನ್ನು ಪಡೆಯಲಾಗಿದೆ. –ಮೋನಿ ರಾಮಚಂದ್ರ ಸ್ಟೇಷನ್ ಮಾಸ್ಟರ್ ಕಲಬುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.