ಭರದಿಂದ ಸಾಗಿದೆ ಕೆರೆ ನಿರ್ಮಾಣ ಕಾಮಗಾರಿ


Team Udayavani, Apr 5, 2018, 5:16 PM IST

5-April-22.jpg

ಕವಿತಾಳ: ಪಟ್ಟಣದ ನಿವಾಸಿಗಳ ಬಹುದಿನಗಳ ಬೇಡಿಕೆಯಂತೆ ಕವಿತಾಳ ಪಟ್ಟಣಕ್ಕೆ ಶುದ್ಧ ಶಾಶ್ವತ ಕುಡಿಯುವ ನೀರು ಪೂರೈಕೆಗಾಗಿ 73 ಕ್ಯಾಂಪ್‌ ಬಳಿ 13 ಎಕರೆ ಜಮೀನಿನಲ್ಲಿ ಬೃಹತ್‌ ಕೆರೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದ್ದು, 876 ಲಕ್ಷ ವೆಚ್ಚದಲ್ಲಿ ಬೃಹತ್‌ ಕೆರೆ ನಿರ್ಮಿಸಲಾಗುತ್ತಿದೆ.

ಪಟ್ಟಣದ ನಿವಾಸಿಗಳು ಶಾಸಕ ಹಂಪಯ್ಯ ನಾಯಕ ಅವರಿಗೆ ಕುಡಿಯುವ ನೀರಿಗಾಗಿ ಕೆರೆ ನಿರ್ಮಿಸುವಂತೆ ಮನವಿ ಸಲ್ಲಿಸಿದ್ದರು. ಸಹಾಯಕ ಕಾರ್ಯಪಾಲಕ ಅಭಿಯಂತರರ ಕಾರ್ಯಾಲಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕವಿತಾಳ ಮತ್ತು ಪರಸಾಪುರ ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮುಂದಿನ 20 ವರ್ಷಗಳವರೆಗೆ ಯಾವುದೇ ರೀತಿ ಕುಡಿಯುವ ನೀರಿನ ಸಮಸ್ಯೆ ಆಗಬಾರದೆಂಬ ದೃಷ್ಟಿಯಿಂದ ಕೆರೆ ನಿರ್ಮಿಸಲಾಗುತ್ತಿದೆ.

ಕೆರೆ ವಿವರ: ಕವಿತಾಳ ಪಟ್ಟಣಕ್ಕೆ ಒಳಪಡುವ 73 ಕ್ಯಾಂಪ್‌ ವ್ಯಾಪ್ತಿಯಲ್ಲಿ ಬರುವ ನೀರಾವರಿ ಇಲಾಖೆಗೆ ಒಳಪಡುವ ಸರಕಾರಿ ಭೂಮಿಯಲ್ಲಿ ಕೆರೆ ನಿರ್ಮಿಸಲಾಗುತ್ತಿದೆ. ನೀರಾವರಿ ಇಲಾಖೆಗೆ ಒಟ್ಟು 24 ಎಕರೆ ಭೂಮಿ ಇದ್ದು, ಈ ಪೈಕಿ ಕಾಲುವೆ ನಿರ್ಮಾಣಕ್ಕೆ 5.30 ಗುಂಟೆ ಹೋಗಿದೆ. ಇನ್ನುಳಿದ 9.25 ಎಕರೆ ಸೇರಿ ಖಾಸಗಿ ಭೂಮಿ ಖರೀದಿಸಿ ಒಟ್ಟು 13 ಎಕರೆ ಜಮೀನಿನಲ್ಲಿ ಬೃಹತ್‌ ಕೆರೆ ನಿರ್ಮಿಸಲಾಗುತ್ತಿದೆ.

ಭರದಿಂದ ಕಾಮಗಾರಿ: ಕೆರೆ ನಿರ್ಮಾಣ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದ್ದು, ಸ್ವಲ್ಪ ಕೆಲಸ ಬಾಕಿ ಇದೆ. ಸಂಪು ಮತ್ತು ಶುದ್ಧೀಕರಣ ಘಟಕ ನಿರ್ಮಿಸುವ ಕೆಲಸ ನಡೆದಿದೆ. ಕೆರೆಯಿಂದ ಕವಿತಾಳ ಪಟ್ಟಣದವರೆಗೆ ಪೈಪ್‌ಲೈನ್‌ ಕಾಮಗಾರಿ ನಡೆದಿದೆ. ಇನ್ನು ಜಾಕ್‌ವೆಲ್‌ ಕಾಮಗಾರಿ ಆರಂಭಿಸುವುದು ಮಾತ್ರ ಬಾಕಿ ಉಳಿದಿದೆ ಎನ್ನುತ್ತಾರೆ ಅಧಿಕಾರಿಗಳು. 

ಕೆರೆ ಕಾಮಗಾರಿ ಪೂರ್ಣಗೊಳಿಸಲು ಸೆಪ್ಟೆಂಬರ್‌ ತಿಂಗಳವರೆಗೆ ಕಾಲಾವಕಾಶವಿದೆ. ಆದರೆ ಆಗಸ್ಟ್‌ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶವಿದೆ.
ಅಮರಗುಂಡಪ್ಪ ಮೇಟಿ, ಗುತ್ತಿಗೆದಾರ.

ಮೂರು ತಿಂಗಳಲ್ಲಿ ಕವಿತಾಳ ಕೆರೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಲುವೆಗೆ ನೀರು ಬಂದ ನಂತರ ಕೆರೆ ಭರ್ತಿ ಮಾಡಿ ಉದ್ಘಾಟಿಸಲಾಗುವುದು.
ಗಣಪತಿ ಸಾಕರೆ, ಮಾನ್ವಿ ಜಿಪಂ ಎಇಇ

ಮೌನೇಶ ಕವಿತಾಳ 

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.