ಅಗತ್ಯ ಕೆಲಸಗಳಿಗೆ ಮಾತ್ರ ಹೊರ ಬನ್ನಿ, ಬಸ್ ಸೇವೆ ಕಡಿತ: ಕಲಬುರಗಿ ಜಿಲ್ಲಾಧಿಕಾರಿ
Team Udayavani, Mar 14, 2020, 1:06 PM IST
ಕಲಬುರಗಿ: ಕೊರೊನಾ ಸೋಂಕಿನಿಂದ ವ್ಯಕ್ತಿ ಮೃತಪಟ್ಟ ಕಾರಣ ಹಾಗೂ ಸೋಂಕು ಹರಡುವಿಕೆ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಗತ್ಯ ವಸ್ತುಗಳಿಗಾಗಿ ಮಾತ್ರ ಜನತೆ ಮನೆಯಿಂದ ಹೊರಬೇಕು. ಅನಗತ್ಯವಾದ ಕೆಲಸ ಕಾರ್ಯಗಳನ್ನು ಸ್ಥಗಿತ ಗೊಳಿಸಬೇಕೆಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಶರತ್ ಮನವಿ ಮಾಡಿದರು.
ಕಿರಣಾ ಅಂಗಡಿ, ಮೆಡಿಕಲ್ ಶಾಪ್ ಗಳು ಹಾಗೂ ಇತರ ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿರುತ್ತದೆ. ಬಟ್ಟೆ, ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತದೆ. ನಾಗರಿಕರು ಅಗತ್ಯ ವಸ್ತುಗಳನ್ನು ಖರೀದಿ ಮಾಡಿದ ತಕ್ಷಣ ವಾಪಸ್ ಮನೆಗೆ ತೆರಳಬೇಕು. ನಾವು ಸೆಕ್ಷನ್ 144ರಡಿ ನಿಷೇಧಾಜ್ಞೆ ಮಾಡುತ್ತಿಲ್ಲ. ನಿರ್ದಾಕ್ಷಿಣ್ಯ ಕ್ರಮ ಜರುತ್ತಿದ್ದೇವೆ ಅಷ್ಟೇ ಎಂದರು.
ಕೆಲ ಸರ್ಕಾರಿ ಸೇವೆಗಳ ಸ್ಥಗಿತ: ಹೆಚ್ಚು ಜನರು ಸೇರದಂತೆ ನೀಡಿಕೊಳ್ಳಲು ಕೆಲ ಸರ್ಕಾರಿ ಸೇವೆಗಳನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಉಪನೋಂದಣಾಧಿಕಾರಿ ಕಚೇರಿ, ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಕಂದಾಯ ಇಲಾಖೆಯಲ್ಲಿ ಪಹಣಿ, ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್ ನೀಡುವ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ. ಉಳಿದಂತೆ ಸರ್ಕಾರಿ ಕಚೇರಿಗಳು ನಡೆಯುತ್ತವೆ ಎಂದರು.
ತುರ್ತು ಕೆಲಸ ಇದ್ದರೆ ಮಾತ್ರ ಬನ್ನಿ: ಬೇರೆ-ಬೇರೆ ಜಿಲ್ಲೆಗಳಿಂದ ಕಲಬುರಗಿಗೆ ತುರ್ತು ಕೆಲಸ ಇದ್ದರೆ ಮಾತ್ರ ಬರಬೇಕೆಂದು ಜಿಲ್ಲಾಧಿಕಾರಿ ಕೋರಿದರು. ಕಲಬುರಗಿಗೆ ಬೇರೆ ಜಿಲ್ಲೆಯ ಜನರು ಬರುವುದನ್ನು ತಪ್ಪಿಸಲು ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರವನ್ನು ಕಡಿಮೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಮದುವೆಗೆ ಅನುಮತಿ ಅಗತ್ಯ: ಕೊರೊನಾ ಭೀತಿ ಕಡಿಮೆಯಾಗುವರೆಗೆ ಮದುವೆ ಸಮಾರಂಭಕ್ಕೆ ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ. ಮದುವೆಯಲ್ಲಿ ವಧು-ವರರ ಕುಟುಂಬಗಳು ಮಾತ್ರ ಇರಬೇಕು. ಇದನ್ನು ಖಚಿತ ಪಡಿಸಿದ ನಂತರವೇ ಅನುಮತಿ ನೀಡಲಾಗುತ್ತದೆ ಎಂದರು.
ಕೊರೊನಾ ಶಂಕಿತರು ಅಥವಾ ಕೆಮ್ಮು, ನೆಗಡಿಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ತಾವಾಗಿಯೇ ಸಮಸ್ಯೆ ಹೇಳಿಕೊಳ್ಳಲು ಹಿಂಜರಿಯುತ್ತಾರೆ. ಹೀಗಾಗಿ ಬೇರೆಯವರಾದರೂ ಮಾಹಿತಿ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿ ಆರಂಭಿಸಲಾಗುವುದು ಎಂದು ಡಿಸಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.