ಗರ್ಭಿಣಿ-ಶಿಶು ಮರಣ ಪ್ರಮಾಣ ಇಳಿಮುಖ: ಪಾಟೀಲ
Team Udayavani, Jun 25, 2017, 2:40 PM IST
ಕಲಬುರಗಿ: ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳು ನೇರವಾಗಿ ಜನರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ತಲುಪುತ್ತಿರುವ ಪ್ರಯುಕ್ತ ಜಿಲ್ಲೆಯಲ್ಲಿ ಗರ್ಭಿಣಿಯರ ಹಾಗೂ ಶಿಶು ಮರಣ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ “ಗರ್ಭಿಣಿಯರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮದ ನೂತನ ವಿಧಾನಗಳ’ ಕುರಿತು ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಗರ್ಭಿಣಿಯರಿಗೆ ಆರೋಗ್ಯ, ಸ್ವತ್ಛತೆಗೆ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ತಿಳಿವಳಿಕೆ ನೀಡುವ ಮೂಲಕ ಮಾನಸಿಕ ಹಾಗೂ ದೈಹಿಕ ಸ್ಥೈರ್ಯ ಹೆಚ್ಚಿಸುವ ಕಾರ್ಯ ಮಾಡಬೇಕು ಎಂದರು. ಜಿಲ್ಲೆಯಲ್ಲಿ ಕಳೆದ ತಿಂಗಳು ಪ್ರಾರಂಭವಾದ “ಕೂಸು’ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ.
ಅದೇ ರೀತಿ ಜುಲೈ ತಿಂಗಳಲ್ಲಿ ಪ್ರಾರಂಭವಾಗಲಿರುವ ಪ್ರೌಢಶಾಲೆ ಬಾಲಕಿಯರ ಮನೆಗೊಂದು ಕಡ್ಡಾಯ ಶೌಚಾಲಯ ಕಾರ್ಯಕ್ರಮಕ್ಕೂ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಬೆಂಬಲ ನೀಡಲಾಗುವುದು ಎಂದರು. ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಗರ್ಭಿಣಿಯರ ಹಾಗೂ ಶಿಶು ಮರಣ ಪ್ರಮಾಣ ತಗ್ಗಿಸುವಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹೆಚ್ಚಿನ ಗುರುತರ ಜವಾಬ್ದಾರಿಯಿದೆ.
ಗರ್ಭಿಣಿಯರಿಗೆ ಮಾಸಿಕ 6000 ರೂ. ಭತ್ಯೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ ಎಂದರು. ಡಿವೈನ್ ಸಂಸ್ಕಾರ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷೆ ಡಾ| ಶುಭದಾ ನೀಲ್ ಮಾತನಾಡಿ, ಜನಿಸುವ ಮಗು ಜೀವನ ಪರ್ಯಂತ ಸುಖೀಯಾಗಿರಬೇಕಾದರೆ ಗರ್ಭಿಣಿ ಮಹಿಳೆಯರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಬೇಕು ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಪಾಲಿಕೆ ಮಹಾಪೌರ ಶರಣು ಮೋದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶಿವರಾಜ ಸಜ್ಜನಶೆಟ್ಟಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ರವೀಂದ್ರ ನಾಗಲೀಕರ್, ಕಲಬುರಗಿ ಬ್ರಹ್ಮಕುಮಾರಿ ನಿರ್ದೇಶಕಿ ರಾಜಯೋಗಿನಿ ಬಿ.ಕೆ. ರತ್ನಾ ಬಜೇನಜೀ ಬಹೇನಜೀ ಪಾಲ್ಗೊಂಡಿದ್ದರು.
ವ್ಯಕ್ತಿತ್ವ ವಿಕಾಸನ ತರಬೇತಿದಾರ ಇ.ವ್ಹಿ. ಗಿರೀಶ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಸ್ವಾಗತಿಸಿದರು. ಚಾಮರಾಜ್ ದೊಡ್ಮನಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi:ರೈಲ್ವೇ ವಿಭಾಗೀಯ ಕಚೇರಿಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ
Kalaburagi: ತೊಗರಿ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ ಬಂದ್…
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು
ಹೈಸ್ಕೂಲ್‌ನಲ್ಲಿ ಹಿಂದಿ ಬದಲಿಗೆ ಕೌಶಲ ವಿಷಯ ಆಯ್ಕೆಗೆ ಒತ್ತಡ
Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು