ಉದ್ಯೋಗ ಮೂಲಭೂತ ಹಕ್ಕಾಗಿ ರೂಪಿಸಿ: ಜಂಬಗಿ
Team Udayavani, Mar 22, 2019, 10:24 AM IST
ವಾಡಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆಯೇ ಪ್ರಧಾನವಾಗಿದ್ದು, ಎದುರಾಗುತ್ತಿರುವ ಎಲ್ಲ ಸಮಸ್ಯೆಗಳಿಗೆ ಇದುವೇ ಮೂಲ ಕಾರಣವಾಗಿದೆ. ಶಿಕ್ಷಣ ಮೂಲಭೂತ ಹಕ್ಕಾಗಿರುವಂತೆ ಉದ್ಯೋಗವನ್ನು ಸರಕಾರ ಮೂಲಭೂತ ಹಕ್ಕಾಗಿ ಘೋಷಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಜಿಲ್ಲಾ ಕಾರ್ಯದರ್ಶಿ ನಿಂಗಣ್ಣ ಜಂಬಗಿ ಒತ್ತಾಯಿಸಿದರು.
ಪಟ್ಟಣದಲ್ಲಿ ಎಐಡಿವೈಒ ವತಿಯಿಂದ ಏರ್ಪಡಿಸಲಾಗಿದ್ದ ನಿರುದ್ಯೋಗ ವಿರೋಧಿ ಯುವಜನ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳಲ್ಲಿ ಖಾಲಿ ಉದ್ಯೋಗಗಳಿದ್ದರೂ ಅವುಗಳನ್ನು ಭರ್ತಿ ಮಾಡುತ್ತಿಲ್ಲ. ಬದಲಿಗೆ ಇದ್ದ ಹುದ್ದೆಗಳನ್ನೇ
ಕಡಿತಗೊಳಿಸಲಾಗುತ್ತಿದೆ. ಪ್ರತಿವರ್ಷವೂ ಉದ್ಯೋಗ ಸೃಷ್ಟಿಸಬೇಕಾದ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಬಂಡವಾಳಶಾಹಿಗಳ ಕುತಂತ್ರಕ್ಕೆ ತಾಳ ಹಾಕುವ ಮೂಲಕ ನಿರುದ್ಯೋಗ ಸಮಸ್ಯೆ ಹೆಚ್ಚಾಗುವಂತೆ ಮಾಡುತ್ತಿವೆ. ಜನರು ಆರ್ಥಿಕವಾಗಿ ದಿವಾಳಿಯಾಗುತ್ತಿದ್ದು, ವ್ಯವಸ್ಥೆಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗುತ್ತಿದೆ. ಉದ್ಯೋಗಕ್ಕಾಗಿ ಬೀದಿ ಬೀದಿ ಅಲೆಯುತ್ತಿರುವ ಯುವಜನರು ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿ ಕೈಗೊಳ್ಳಲು ಸಂಘಟಿತರಾಗಬೇಕು ಎಂದು ಕರೆ ನೀಡಿದರು.
ಎಸ್‌ಯುಸಿಐ (ಸಿ) ಪಕ್ಷದ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ., ಸದಸ್ಯ ಶರಣು ಹೇರೂರ ಮಾತನಾಡಿದರು. ಎಐಡಿವೈಒ ಅಧ್ಯಕ್ಷ ರಾಘವೇಂದ್ರ ಅಲ್ಲಿಪುರ ಅಧ್ಯಕ್ಷತೆ ವಹಿಸಿದ್ದರು. ಮಲ್ಲಣ್ಣ ದಂಡಬಾ, ರಾಜು ಒಡೆಯರ ಪಾಲ್ಗೊಂಡಿದ್ದರು.
ಪದಾಧಿಕಾರಿಗಳ ಆಯ್ಕೆ: ಯುವಜನ ಸಮಾವೇಶದಲ್ಲಿ ಎಐಡಿವೈಒ ನಗರ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಶರಣು ವಿ.ಕೆ. (ಅಧ್ಯಕ್ಷ), ಮಲ್ಲಿನಾಥ ಹುಂಡೇಕಲ್ (ಕಾರ್ಯದರ್ಶಿ), ಶ್ರೀಶರಣ ಹೊಸಮನಿ, ಶ್ರೀಶೈಲ ಕಡಬೂರ, ಬಸವರಾಜ ನಾಟೇಕರ, ನಂದೀಶ ಪೋದ್ದಾರ, ಸಾಬು ಯಾದವ್, ಸುನೀಲ ಜಂಗಮ ಲಾಡ್ಲಾಪುರ, ಸುರೇಶ ಲಾಡ್ಲಾಪುರ, ಅವಿನಾಶ ಒಡೆಯರ,
ಮಹೆಬೂಬ ಪಟೇಲ, ಹಣಮಂತ ಲಾಡ್ಲಾಪುರ, ದೇವು ಹಡಪದ, ಶರಣಬಸು ಲಾಡ್ಲಾಪುರ, ನಾಗರಾಜ ಅಕ್ಕಿ ಹಳಕರ್ಟಿ, ಖದೀರ ಡೋಣಗಾಂವ, ಅಹ್ಮದ್ ಮಿರ್ಜಾ ಸದಸ್ಯರಾಗಿ ಆಯ್ಕೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.