ಮಳೆ ಹಾನಿ ಜಂಟಿ ಸಮೀಕ್ಷೆಗೆ ಒತ್ತಾಯ
Team Udayavani, Aug 11, 2022, 4:05 PM IST
ಚಿಂಚೋಳಿ: ಸೇಡಂ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂಥ ರುದ್ನೂರು, ಭೂತಪೂರ, ರಾಯಕೋಡ, ಗಡಿಕೇಶ್ವಾರ, ಚಿಂತಪಳ್ಳಿ ಮುಂತಾದ ಗ್ರಾಮಗಳಲ್ಲಿ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ರಸ್ತೆ, ಸೇತುವೆ, ಬೆಳೆಗಳಿಗೆ ಅಪಾರ ಹಾನಿಯಾಗಿದ್ದು, ಕಂದಾಯ ಮತ್ತು ಕೃಷಿ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಬೇಕು ಎಂದು ತಾಲೂಕು ಕೃಷಿ ಹುಟ್ಟುವಳಿ ಮಾರಾಟ ಸಹಕಾರ ಸಂಘದ ನಿರ್ದೇಶಕ ಮಲ್ಲಿಕಾರ್ಜುನ ಕೊಡದೂರ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪಂಚ ಪೂರ ಕುಗ್ರಾಮಗಳೆಂದೇ ಪರಿಗಣಿಸಲ್ಪಟ್ಟಿರುವ ಗ್ರಾಮದಲ್ಲಿ ರಸ್ತೆಗಳು ಸೇತುವೆಗಳು ಮತ್ತು ರೈತರು ಬೆಳೆದ ಮುಂಗಾರು ಬೆಳೆಗಳಾದ ತೊಗರಿ, ಉದ್ದು, ಹೆಸರು, ಸೋಯಾ ಇನ್ನಿತರ ಬೆಳೆಗಳು ನೀರು ಪಾಲಾಗಿವೆ. ನಿಡಗುಂದಾದ ರುದನೂರ ರಸ್ತೆ ಪ್ರಗತಿಯಲ್ಲಿರುವಾಗಲೇ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ 1.40ಕೋಟಿ ರೂ. ವ್ಯರ್ಥವಾಗಿದೆ ಎಂದು ವಿವರಿಸಿದರು.
ಭೂತಪೂರ, ಚಿಂತ್ರಪೂರ, ಚಿಂತ್ರಪಳ್ಳಿ, ರೈಕ್ವಾರ್ ಗ್ರಾಮಗಳಲ್ಲಿ ರೈತರು ಸಾಕಷ್ಟು ಪ್ರಮಾಣದಲ್ಲಿ ಹೆಸರು, ಉದ್ದು ಬೆಳೆಯುತ್ತಾರೆ. ಇದರಲ್ಲಿ ಮಳೆ ನೀರು ನಿಂತು ಬೆಳೆ ಸಂಪೂರ್ಣವಾಗಿ ಕೊಳೆಯುತ್ತಿದೆ. ಸೇಡಂ ವಿಧಾನಸಭೆ ಕ್ಷೇತ್ರದ ನಿಡಗುಂದಾ, ಖರ್ಚಖೇಡ ಗ್ರಾಮದ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿದ್ದರಿಂದ ರಸ್ತೆಗಳಲ್ಲಿ ವಾಹನಗಳು ಸಂಚರಿಸುವುದು ಕಷ್ಟಕರವಾಗಿದೆ. ಆದ್ದರಿಂದ ಕೂಡಲೇ ಸಂಬಂಧಪಟ್ಟವರು ಜಂಟಿ ಸಮೀಕ್ಷೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.