ಮಹಿಳಾ ದೌರ್ಜನ್ಯ ಸಮಾಜದ ಕಂಟಕ: ಯಡಿಯೂರಪ್ಪ
Team Udayavani, Jan 25, 2017, 12:25 PM IST
ಕಲಬುರಗಿ: ತಂತ್ರಜ್ಞಾನ ಬಳಕೆಯ ಈ ದಿನಗಳಲ್ಲೂ ಕೂಡ ಮಹಿಳೆಯ ಮೇಲೆ ನಡೆಯುತ್ತಿರುವ ಹಲ್ಲೆಗಳು, ಲೈಂಗಿಕ ದಾಳಿಗಳು ನಿಜಕ್ಕೂ ಸಮಾಜದ ನಿತ್ಯದ ಕಂಟಕಗಳಾಗಿ ಪರಿಣಮಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಳವಳ ವ್ಯಕ್ತಪಡಿಸಿದರು.
ಹೊರವಲಯದ ಶ್ರೀನಿವಾಸ ಸರಡಗಿ ಸಂಸ್ಥಾನ ಹಿರೇಮಠದಲ್ಲಿ ಲಿಂಗೆ„ಕ್ಯ ಚಿಕ್ಕವೀರೇಶ್ವರ ಶಿವಾಚಾರ್ಯರ 70ನೇ ಪುಣ್ಯಾರಾಧನೆ ನಿಮಿತ್ತಹಮ್ಮಿಕೊಳ್ಳಲಾಗಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಬೃಹತ್ ಜನಾಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಾವು ಎಷ್ಟೆಲ್ಲಾ ಸುಶಿಕ್ಷಿತರಾಗುತ್ತಿದ್ದರೂ, ಸರಕಾರಗಳು ಕ್ರಮ ಕೈಗೊಳ್ಳುತ್ತಿದ್ದರೂ, ತಂತ್ರಜ್ಞಾನ ಮತ್ತು ಶಿಕ್ಷಣದಲ್ಲಿ ಉನ್ನತ ಸ್ಥಿತಿ ಕಾಪಾಡಿಕೊಳ್ಳುತ್ತಿದ್ದರೂ, ಮಹಿಳೆ ಅದರಲ್ಲೂ ಒಂಟಿ ಮಹಿಳೆಯ ಮೇಲೆ ದಾಳಿಗಳು ನಡೆಯುತ್ತಿರುವುದು ಪ್ರಜ್ಞಾವಂತ ಸಮಾಜಕ್ಕೆ ಅಂಟಿಕೊಳ್ಳುತ್ತಿರುವ ಹೊಸ ರೋಗ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದಲ್ಲಿ ಆರೋಗ್ಯ ಸ್ಥಿತಿ ಕಾಪಾಡುವ ನಿಟ್ಟಿನಲ್ಲಿ ಮಠಾಧೀಶರು ಜನರೊಂದಿಗೆ ಸೇರಿಕೊಂಡು ಜಾಗೃತಿ ಮೂಡಿಸಲು ಹೊರಟು ನಿಂತಿರುವುದು ನಿಜಕ್ಕೂ ಅಭಿನಂದನೀಯ ಮತ್ತು ಅನುಕರಣೀಯ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಸರಕಾರ ಮಾಡದ ಕೆಲಸವನ್ನು ಮಠಗಳು ಮಾಡುತ್ತಿರುವುದು ಶ್ಲಾಘನೀಯ ಎಂದರು.
ಬಬಲಾದನ ಗುರುಪಾದಲಿಂಗ ಸ್ವಾಮೀಜಿ, ಪಾಳಾದ ಗುರುಮೂರ್ತಿ ಶಿವಾಚಾರ್ಯರು, ವಿ.ಕೆ. ಸಲಗರದ ದ್ವಿತೀಯ ಸಾಂಬ ಶಿವಯೋಗಿ ಶಿವಾಚಾರ್ಯರು, ವೆಂಕಟಬೇನೂರಿನ ಸಿದ್ಧ ರೇಣುಕ ಶಿವಾಚಾರ್ಯರು, ಸ್ಟೇಷನ್ ಬಬಲಾದನ ರೇವಣಸಿದ್ಧ ಶಿವಾಚಾರ್ಯರು, ತೊನಸನಹಳ್ಳಿಯ ರೇವಣಸಿದ್ಧ ಚರಂತೇಶ್ವರ ಶಿವಾಚಾರ್ಯರು, ಮಹಾಗಾಂವನ ಗುರುಲಿಂಗ ಶಿವಾಚಾರ್ಯರು, ಸೊನ್ನಲಗಿರಿಯ ಪರ್ವತಲಿಂಗ ಪರಮೇಶ್ವರ ಮಹಾರಾಜರು, ಮುಗುಳನಾಗಾಂವಿಯ ಜೇಮಸಿಂಗ್ ಮಹಾರಾಜರು, ಗೊಬ್ಬೂರವಾಡಿಯ ಬಳಿರಾಮ್ ಮಹಾರಾಜರು ದಿವ್ಯ ಸಾನಿಧ್ಯ ವಹಿಸಿದ್ದರು.
ಶಾಸಕರಾದ ಬಿ.ಜಿ. ಪಾಟೀಲ, ದತ್ತಾತ್ರೇಯ ಪಾಟೀಲ ರೇವೂರ್, ಮಾಜಿ ಸಚಿವರಾದ ಬಾಬುರಾವ ಚವ್ಹಾಣ, ಸುನೀಲ ವಲ್ಲಾಪುರೆ, ರೇವೂ ನಾಯಕ ಬೆಳಮಗಿ, ರಾಜ್ಯ ವಿಧಾನಪರಿಷತ್ ಮಾಜಿ ಸದಸ್ಯ ಶಶೀಲ್ ಜಿ. ನಮೋಶಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ ಹಾಜರಿದ್ದರು. ನಾಮದೇವ ರಾಠೊಡ ಸ್ವಾಗತಿಸಿದರು. ನಾಗಲಿಂಗಯ್ಯ ಮಠಪತಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.