ಮಕ್ಕಳೆ ಭಾರತಾಂಬೆ ನಿಮ್ಮೊಂದಿಗಿದ್ದಾಳೆ… ಪಾಲಕರನ್ನು ಕಳೆದುಕೊಂಡ ಮಕ್ಕಳೊಂದಿಗೆ ಮೋದಿ ಸಂವಾದ
Team Udayavani, May 30, 2022, 2:52 PM IST
ಕಲಬುರಗಿ : ಹೆತ್ತ ತಂದೆ-ತಾಯಿಗಳ ಪ್ರೀತಿ ಮತ್ತು ಕಾಳಜಿ ಯಾರಿಂದಲೂ ನೀಡಲು ಸಾಧ್ಯವಿಲ್ಲವಾದರೂ ತಾಯಿ ಭಾರತಾಂಬೆ ನಿಮ್ಮೊಂದಿಗಿದ್ದಾಳೆ. ಪಿ.ಎಂ. ಕೇರ್ ಯೋಜನೆ ಮೂಲಕ ನಿಮ್ಮ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮಕ್ಕಳನ್ನು ಉದ್ದೇಶಿಸಿ ಹೇಳಿದರು.
ಸೋಮವಾರ ಕೋವಿಡ್‍ನಿಂದ ತಂದೆ-ತಾಯಿಗಳನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳೊಂದಿಗೆ ದೆಹಲಿನಿಂದ ವಿಡಿಯೋ ಕಾನ್ಪೆರೆನ್ಸ್ ಮೂಲಕ ಸಂವಾದ ನಡೆಸಿದರು. ಇತ್ತ ಕಲಬುರಗಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಂವಾದಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಸಂಕಷ್ಟದ ದಿನಗಳನ್ನು ಎದುರಿಸಿ ಬಂದಿರುವ ನಿಮ್ಮ ಧೈರ್ಯಕ್ಕೆ ನಾನು ಸೆಲ್ಯೂಟ್ ಹೊಡೆಯುವೆ ಎಂದ ನರೇಂದ್ರ ಮೋದಿ ನಿಮ್ಮ ಕನಸನ್ನು ಸಾಕಾರಗೊಳಿಸುವ ಪಿ.ಎಂ.ಕೇರ್ ಸಣ್ಣ ಪ್ರಯತ್ನವಾಗಿದೆ. ಇಡೀ ದೇಶ, ದೇಶದ ಸಂವೇದನೆ ನಿಮ್ಮೊಂದಿಗೆ ಎಂದು ಮಕ್ಕಳಿಗೆ ಅಭಯ ನೀಡಿದರು.
ಈಗಾಗಲೆ ಮಕ್ಕಳ ಮನೆ ಹತ್ತಿರವಿರುವ ಸರ್ಕಾರಿ ಅಥವಾ ಖಾಸಗಿ ಶಾಲೆಗೆ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲಾಗಿದೆ. ಶಿಕ್ಷಣಕ್ಕೆ ಬೇಕಾದ ಪುಸ್ತಕ, ಬಟ್ಟೆ ಇನ್ನಿತರ ಖರ್ಚು ಸಹ ಸರ್ಕಾರ ನೋಡಿಕೊಳ್ಳಲಿದೆ. ಉನ್ನತ ಶಿಕ್ಷಣದ ಜೊತೆಗೆ ಶೈಕ್ಷಣಿಕ ಸಾಲಕ್ಕೂ ಪಿ.ಎಂ.ಕೇರ್ ನೆರವಾಗಲಿದೆ. 5 ಲಕ್ಷ ರೂ. ವೆರೆಗಿನ ಉಚಿತ ಚಿಕಿತ್ಸೆಯ ಆಯೂಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೀಡಲಾಗುತ್ತಿದೆ. ಮಕ್ಕಳ ಹೆಸರ ಮೇಲೆ ಅಂಚೆ ಬ್ಯಾಂಕ್‍ನಲ್ಲಿ ಇಡಲಾಗುವ ಇಡಗಂಟಿನ ಮೇಲೆ ಲಭ್ಯವಾಗುವ ಬಡ್ಡಿಯನ್ನು 18 ರಿಂದ 23 ವಯಸ್ಸಿನ ಅವಧಿಯಲ್ಲಿ ಪ್ರತಿ ತಿಂಗಳ ಸ್ಟೇಫಂಡ್ ರೂಪದಲ್ಲಿ ಖರ್ಚಿಗೆ ಹಣ ನೀಡಲಾಗುವುದು. 23 ವರ್ಷದ ನಂತರ ಮುಂದಿನ ಭವಿಷ್ಯಕ್ಕೆ 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಇದಲ್ಲದೆ ಸ್ಪಾನ್ಶರಶಿಪ್ ಯೋಜನೆಯಡಿ ಮಾಹೆಯಾನ 2000 ರೂ. ಆರ್ಥಿಕ ಸೌಲಭ್ಯ 2021-22ನೇ ಸಾಲಿನಿಂದ ಜಾರಿಗೊಳಿಸಿದ್ದು, 18 ವರ್ಷದೊಳಗಿನ ಮಕ್ಕಳಿಗೆ ಗರಿಷ್ಠ 3 ವರ್ಷ ಅಥವಾ 18 ವರ್ಷದ ವರೆಗೆ (ಇದರಲ್ಲಿ ಯಾವುದು ಮೊದಲು ಅಲ್ಲಿಯ ವರೆಗೆ) ಇದು ಸಿಗಲಿದೆ ಎಂದು ಪಿ.ಎಂ.ಕೇರ್ ಯೋಜನೆಗಳ ಕುರಿತು ವಿವರಿಸಿದರು.
ಇದನ್ನೂ ಓದಿ : ವೀಲ್‌ಚೇರ್ ರೋಮಿಯೋಗೆ ಸಿಕ್ಕ ರೆಸ್ಪಾನ್ಸ್ ಕಂಡು ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ..?
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 1-12ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಡಿಜಿಟಲ್ ಮೋಡ್ ಮೂಲಕ ಸ್ಕಾಲರ್ ಶಿಪ್ ಹಣ ವರ್ಗಾವಣೆ ಗೊಳಿಸಿದರು.
ಇದಕ್ಕೂ ಮುನ್ನ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಮಾತನಾಡಿ ದೇಶದಲ್ಲಿ ಕೋವಿಡ್‍ನಿಂದ ಹೆತ್ತವರನ್ನು ಕಳೆದುಕೊಂಡ 4345 ಮಕ್ಕಳ ರಕ್ಷಣೆಯ ಜವಬ್ದಾರಿ ಸರ್ಕಾರ ವಹಿಸಿಕೊಂಡಿದೆ ಎಂದರು.
ಮಕ್ಕಳಿಗೆ ಕಿಟ್ ವಿತರಣೆ ಮಾಡಿದ ಡಿ.ಸಿ
ಕಾರ್ಯಕ್ರಮದ ಅಂಗವಾಗಿ ಕೋವಿಡ್ ನಿಂದ ತಂದೆ-ತಾಯಿಗಳನ್ನು ಕಳೆದಕೊಂಡ ಕಲಬುರಗಿಯ ಮಕ್ತಂಪೂರ ಪ್ರದೇಶದ 10 ವರ್ಷದ ತನುಷ್ ವಿ.ಎಸ್. ತಂದೆ ದಿ. ವೇದಮೂರ್ತಿ, ಕಲಬುರಗಿಯ ಶಾಂತಿ ನಗರದ 14 ವರ್ಷದ ಮಾನಸಿ ತಂದೆ ದಿ. ಶಿವಾಜಿರಾವ್ ಹಾಗೂ ಆಳಂದ ತಾಲೂಕಿನ ಹೊದಲೂರು ಗ್ರಾಮದ 17 ವರ್ಷದ ಗಣೇಶ ತಂದೆ ದಿ. ಬಂದಪ್ಪ ಮಕ್ಕಳಿಗೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅಂಚೆ ಇಲಾಖೆಯ ಪಾಸ್ ಬುಕ್, ಮಕ್ಕಳಿಗೆ ಬರೆದ ಪ್ರಧಾನಮಂತ್ರಿಗಳ ಪತ್ರ, ಆಯೂಷ್ಮಾನ್ ಆರೋಗ್ಯ ಕಾರ್ಡ್, ಪಿ.ಎಂ.ಕೇರ್ ಸರ್ಟಿಫಿಕೇಟ್ ಒಳಗೊಂಡ ಕಿಟ್ ವಿತರಿಸಿ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಯು., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಯಲ್ಲಾಲಿಂಗ ಕಾಳನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಬಸಪ್ಪ ಬೆಳಗುಂಪಿ, ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.