ಕಲಬುರಗಿಯಲ್ಲಿ ಪ್ರಧಾನಿ ಭರ್ಜರಿ ರೋಡ್ ಶೋ… ಲಕ್ಷಾಂತರ ಮಂದಿ ಭಾಗಿ
Team Udayavani, May 2, 2023, 10:07 PM IST
ಕಲಬುರಗಿ: ಕಲ್ಯಾಣದ ಹೆಬ್ಬಾಗಿಲು ಕಲಬುರಗಿ ನಗರದಲ್ಲಿ ಮಂಗಳವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮೂಲಕ ಚುನಾವಣೆ ಕಣದಲ್ಲಿ ಭಾರೀ ಸಂಚಲನ ಮೂಡಿಸಿದರು. ಅಲ್ಲದೆ, ಎಐಸಿಸಿ ಅಧ್ಯಕ್ಷ ಡಾ|ಮಲ್ಲಿಕಾರ್ಜುನ ಖರ್ಗೆ ಭದ್ರಕೋಟೆ ಮತ್ತು ತವರು ನೆಲಕ್ಕೆ ಲಗ್ಗೆ ಇಟ್ಟು ದೊಡ್ಡ ಹವಾ ಸೃಷ್ಟಿಸಿದರು.
ನಗರದ ವರ್ತುಲ ರಸ್ತೆಯ ಕೆಎಂಎಫ್ ಡೈರಿಯಿಂದ ಮಹಾನಗರದ ಹೃದಯ ಭಾಗ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದವರೆಗೂ ಮಂಗಳವಾರ ಸಂಜೆ ಬೃಹತ್‌ರೋಡ್ ಶೋ ನಡೆಸಿದ ಪ್ರಧಾನಿ ಮೋದಿ, ಮುಕ್ತಾಯದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸುತ್ತು ಹಾಕಿ ಕೊನೆಗೊಳಿಸಿದರು. 6 ಕಿ.ಮೀ. ಉದ್ದದವರೆಗೆ ಸುಮಾರು ಒಂದೂವರೆ ತಾಸು ನಡೆದ ರೋಡ್ ಶೋದಲ್ಲಿ ಲಕ್ಷಾಂತರ ಜನ ಪಾಲ್ಗೊಂಡು ಪ್ರಧಾನಿಯತ್ತ ಕೈ ಮಾಡಿ ಅಭಿಮಾನ ಮೆರೆದರು.
ಶಾಸಕ- ಅಭ್ಯರ್ಥಿಗಳಿಗೆ ವ್ಯವಸ್ಥೆ: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ತೆರೆದ ವ್ಯಾನ್ ದಲ್ಲಿ ಕಲಬುರಗಿ ಸಂಸದ ಡಾ.ಉಮೇಶ ಜಾಧವ್, ಕೇಂದ್ರದ ಸಚಿವ ಭಗವಂತ ಖೂಬಾ ಮಾತ್ರ ಪಾಲ್ಗೊಂಡಿದ್ದರು. ಹೀಗಾಗಿ ಕಲಬುರಗಿ ದಕ್ಷಿಣ, ಕಲಬುರಗಿ ಉತ್ತರ, ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಅಭ್ಯರ್ಥಿಗಳಿಗೆ ಮತ್ತು ಶಾಸಕರಿಗೆ ರಸ್ತೆಯುದ್ದಕ್ಕೂ ಅಲ್ಲಲ್ಲಿ ವಿಶೇಷವಾಗಿ ನಿಲ್ಲುವ ವ್ಯವಸ್ಥೆ ಮಾಡಲಾಗಿತ್ತು.
ದೂರವಾದ ಮಳೆ: ಮಧ್ಯಾಹ್ನ ಸಂಜೆ ಹೊತ್ತಲ್ಲಿ ಮಳೆ ಬರಬಹದು ಎಂಬ ಆತಂಕ ಕಾಡಿತ್ತು. ಆದರೆ ಒಂದು ಹನಿ ಮಳೆ ಬಾರದೇ ನಿರಾಂತಕವಾಗಿ ಪ್ರಧಾನಿ ರೋಡ್ ಶೋ ನಡೆಯಿತು.
ಹಸಿಗೂಸಿನೊಂದಿಗೆ ಆಗಮಿಸಿದ ಮಹಿಳೆಯರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನೋಡಲು ಒಂದು ತಿಂಗಳಿನ ಹಸುಗೂಸಿನೊಂದಿಗೆ ಮಹಿಳೆಯರು ಆಗಮಿಸಿರುವುದು ವಿಶೇಷವಾಗಿ ಕಂಡು ಬಂತು.
ಯುವಕರಲ್ಲದೇ ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ರೋಡ್ ಶೋದಲ್ಲಿ ಪಾಲ್ಗೊಂಡಿದ್ದರು. ಜನಪ್ರನಿಧಿಗಳು ಸಹ ಸಾರ್ವಜನಿಕರ ಸಾಲಿನಲ್ಲಿ ನಿಂತು ನಾಯಕನಿಗೆ ಪುಷ್ಪಾರ್ಚನೆ ಮಾಡಿದರು.
ಅಭ್ಯರ್ಥಿ ಗಳು ವಾಹನದಲ್ಲಿ ಇರಬೇಕಿತ್ತು: ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ಅವರ ರೋಡ್ ಶೋ ವಾಹನದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ. ಉಮೇಶ ಜಾಧವ್ ಜತೆಗೇ ಕಲಬುರಗಿ ದಕ್ಷಿಣ ಕ್ಷೇತ್ರ ಹಾಗೂ ಕಲಬುರಗಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ದತ್ತಾತ್ರೇಯ ಪಾಟೀಲ್ ರೇವೂರ ಹಾಗೂ ಚಂದು ಪಾಟೀಲ್ ಸಹ ಪಾಲ್ಗೊಳ್ಳಬೇಕಿತ್ತು ಎಂಬ ಅಭಿಪ್ರಾಯ ಸಾರ್ವಜನಿಕರಿಂದ ಕೇಳಿ ಬಂತು.
ಇದನ್ನೂ ಓದಿ: Perinje: ಕಾರು ಆಟೋ ರಿಕ್ಷಾಕ್ಕೆ ಢಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಬಾಲಕ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.