ಹಿತ್ತಲಶಿರೂರ ಅಭಿವೃದ್ದಿಗೆ ಆದ್ಯತೆ: ಶಾಸಕ ಗುತ್ತೇದಾರ
Team Udayavani, Sep 3, 2022, 2:39 PM IST
ಆಳಂದ: ತಾವು ಶಾಸಕರಾಗಿ ಆಯ್ಕೆ ಯಾದ ಮೇಲೆ ಹಿತ್ತಲಶಿರೂರ ಗ್ರಾಮಕ್ಕೆ ಸುಮಾರು 2ಕೋಟಿ ರೂ. ಅನುದಾನ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಸುಭಾಷ ಆರ್. ಗುತ್ತೇದಾರ ಹೇಳಿದರು.
ತಾಲೂಕಿನ ಹಿತ್ತಲಶಿರೂರ ಗ್ರಾಮದಲ್ಲಿ 2021-22ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದಡಿ ಮಂಜೂರಾದ 15.81ಲಕ್ಷ ರೂ. ವೆಚ್ಚದ ಅಂಬಿಗರ ಚೌಡಯ್ಯನವರ ಸಮುದಾಯ ಭವನ ನಿರ್ಮಾಣ, ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮುಜರಾಯಿ ಇಲಾಖೆಯಿಂದ ಮಂಜೂರಾದ 20ಲಕ್ಷ ರೂ. ವೆಚ್ಚದ ಅಂಬಾ ಭವಾನಿ ದೇವಸ್ಥಾನದ ನಿರ್ಮಾಣ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಗ್ರಾಮ ಪಂಚಾಯಿತ ನೂತನ ಕಟ್ಟಡ, ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಸಮುದಾಯ ಭವನ, ಕ್ಷೇಮಪಾಲನಾ ಕೇಂದ್ರ ನಿರ್ಮಾಣ, ಪ್ರೌಢಶಾಲೆಗೆ ಆವರಣ ಗೋಡೆ, ಸಿಸಿ ರಸ್ತೆ, ಅಂಬಾ ಭವಾನಿ ದೇವಸ್ಥಾನ ಜೀರ್ಣೋದ್ಧಾರ ಸೇರಿದಂತೆ ಅನೇಕ ಕಾಮಗಾರಿ ಪೂರ್ಣಗೊಳಿಸಲು ಅನುದಾನ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.
ಪಂಚಾಯತರಾಜ್ ಎಂಜಿನಿಯ ರಿಂಗ್ ಇಲಾಖೆ ಕಿರಿಯ ಅಭಿಯಂತರ ಸಂದೀಪ, ಮುಖಂಡರಾದ ರಾಜಶೇಖರ ಮಲಶೆಟ್ಟಿ, ಗಿರೀಶ ಕುಲಕರ್ಣಿ, ಶರಣಬಸಪ್ಪ ಸರಸಂಬಿ, ಅಮೃತ ಬಿಬ್ರಾಣಿ, ಶರಣಪ್ಪ ನಾಟಿಕಾರ, ನಿಂಗಣ್ಣ ಮಾಸ್ಟರ್ ದೆನಕ, ಪ್ರಭು ಸರಸಂಬಿ, ರಾಜು ಧಂಗಾಪೂರ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.