ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Team Udayavani, Apr 17, 2024, 12:15 PM IST
ಕಲಬುರಗಿ: ಉಸ್ತುವಾರಿ ಸಚಿವರಿಗೆ ಸ್ವ ಜಿಲ್ಲೆ ಜತೆಗೇ ಸ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ಕೊಡುವ ನಿರ್ದೇಶನವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಪಕ್ಷದ ಜಿಲ್ಲಾ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಕ್ಷ ಗೆಲ್ಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಆದರೆ ಸಚಿವರಿಗೆ ಹೆಚ್ಚಿನ ಜವಾಬ್ದಾರಿಯಿದೆ ಎಂದರು.
ಒಂದು ವೇಳೆ ಸ್ವ ಕ್ಷೇತ್ರದಲ್ಲಿ ಲೀಡ್ ಕೊಡದಿದ್ದರೆ ನೈತಿಕ ಹೊಣೆ ಹೊರುವುದು ಬಿಡುವುದು ಅವರಿಗೆ ಬಿಟ್ಟದ್ದು. ರಾಜಕಾರಣದಲ್ಲಿ ನೈತಿಕ ಹೊಣೆ ಹೊತ್ತು ಪದವಿ ತ್ಯಾಗ ಮಾಡಿರುವ ಉದಾಹರಣೆಗಳಿವೆ ಎಂದು ಹೇಳಿದರು.
ಸುಳ್ಳುಗಾರ ಪ್ರಧಾನಿ ಮೋದಿ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ಮತ್ತು ಅವರ ಟೀಂ ಆಟ ಈ ವರ್ಷ ಕಲಬುರಗಿಯಲ್ಲಿ ನಡೆಯದು ಎಂದು ಹೇಳಿದರು.
ಕೋಲಿ ಹಾಗೂ ಕುರುಬ ಸಮಾಜ ಎಸ್ ಟಿಗೆ ಸೇರಿಸುವ ಬಗ್ಗೆ ರಕ್ತದಲ್ಲಿ ಬರೆದು ಕೊಡುವುದಾಗಿ ಬಿಜೆಪಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಹೇಳಿದ್ದರು. ಅದನ್ನು ಜಾರಿಗೆ ತರದವರು ಈಗ ಏನೇನೋ ಸಬೂಬು ಹೇಳುತ್ತಿದ್ದಾರೆ. ಅಭಿವೃದ್ಧಿ ಕಾರ್ಯ ಒತ್ತಟ್ಟಿಗಿರಲಿ., ಕೋಲಿ- ಕುರುಬ ಸಮಾಜ ಎಸ್ಟಿಗೆ ಸೇರಿಸುವ ಕುರಿತಾಗಿ ಸ್ಪಷ್ಟತೆ ನೀಡಲಿ ಎಂದು ಸವಾಲು ಹಾಕಿದರು.
ಕೋಲಿ ಕಬ್ಬಲಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ವಾಪಸ್ ಕಳಿಸಿದ್ದು ಲೋಕಸಭೆ ಚುನಾವಣೆಯ ಬಳಿಕ ಮತ್ತೊಮ್ಮೆ ಪ್ರಸ್ತಾವನೆಯನ್ನು ಖುದ್ದಾಗಿ ಸಲ್ಲಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು.
ಪ್ರಸ್ತಾವನೆಯನ್ನು ವಾಪಸ್ ಕಳಿಸಿರುವ ವಾಸ್ತವಾಂಶವನ್ನು ಮರೆಮಾಚಿ ಸಂಸದ ಉಮೇಶ್ ಜಾಧವ ಈಗ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಯತ್ನ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಕಳೆದ ಲೋಕಸಭೆ ಚುನಾವಣೆ ವೇಳೆ ಕೋಲಿ ಕಬ್ಬಲಿಗ ಸಮಾಜವನ್ನು ಎಸ್ ಟಿ ಸೇರಿಸುವುದಾಗಿ ಹೇಳಿದ್ದ ಚುನಾವಣೆ ಉಸ್ತುವಾರಿ ಎಂಎಲ್ ಸಿ ರವಿಕುಮಾರ ಹಾಗೂ ಜಾಧವ ಮತ ಪಡೆದಿದ್ದರು. ಆದರೆ ಈಗ ಎಲ್ಲರೂ ಮೌನವಾಗಿದ್ದಾರೆ. ‘ಉಮೇಶ್ ಜಾಧವ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕೈಲಾಗದವರಾಗಿದ್ದಾರೆ. ಹೀಗಾಗಿ ವಾಸ್ತವಾಂಶವನ್ನು ಜನರ ಮುಂದಿಟ್ಟು ಅವರ ಕೈ ಕಾಲು ಹಿಡಿದು ಕ್ಷಮೆ ಕೇಳಲಿ’ ಎಂದು ಆಗ್ರಹಿಸಿದರು.
ಮೋದಿ ವಿಶ್ವಗುರು ಅವರಿಗೆ ಉಕ್ರೇನ್ ರಷ್ಯಾ ಯುದ್ದ ನಿಲ್ಲಿಸುವ ಶಕ್ತಿ ಇದೆ. ಚೀನಾ, ಪಾಕಿಸ್ತಾನದವರು ಮೋದಿಯನ್ನು ಕಂಡರೆ ನಡುಗುತ್ತಾರೆ ಎಂದೆಲ್ಲ ಹೇಳಿಕೊಳ್ಳುವ ಬಿಜೆಪಿಗರಿಗೆ ಅವರಿಂದ ಈ ಕೆಲಸ ಮಾಡಿಸಲು ಯಾಕೆ ಆಗಲಿಲ್ಲ ? ರಾಜ್ಯ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರ ಬಂದರೆ ಎಲ್ಲ ಕೆಲಸ ಆಗುತ್ತವೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದ ಜಾಧವ ಅವರಿಗೆ ಕೋಲಿ ಕಬ್ಬಲಿಗ ಹಾಗೂ ಕುರುಬ ಸಮಾಜವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ಯಾಕೆ ಆಗಲಿಲ್ಲ ?. ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ ಜಿಲ್ಲಾ ಮಟ್ಟದಲ್ಲಿ ಸುಳ್ಳು ಹೇಳುತ್ತಾರೆ ಎಂದು ವಾಗ್ದಾಳಿ ಮಾಡಿದರು.
ಕೋಲಿ ಕಬ್ಬಲಿಗ ಪ್ರಸ್ತಾವನೆ ಚರ್ಚೆಗೆ ಬಂದಾಗ ಮಲ್ಲಿಕಾರ್ಜು ಖರ್ಗೆ ಅವರು ಸಂಸತ್ತಿನಲ್ಲಿ ಇರಲಿಲ್ಲ ಎನ್ನುವ ಜಾಧವ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಅವರು, ಜಾಧವ ಅವರಿಗೆ ಸಂಸದೀಯ ವ್ಯವಹಾರಗಳ ಬಗ್ಗೆ ಸಂಪೂರ್ಣ ಮಾಹಿತಿ ಇದ್ದಂತಿಲ್ಲ. ರಾಜ್ಯ ಸರ್ಕಾರವೇ ಪ್ರಸ್ತಾವನೆ ಕಳಿಸಿದ ಮೇಲೆ ಒಪ್ಪಿಗೆ ಇದೆ ಅಂತ ಅರ್ಥ. ಬಿಜೆಪಿ ಸರ್ಕಾರ 246 ಸಂಸದರನ್ನು ಸಸ್ಪೆಂಡ್ ಮಾಡಿ 57% ಬಿಲ್ ಗಳನ್ನು ಎರಡೇ ವಾರದಲ್ಲಿ ಯಾವುದೇ ಚರ್ಚೆ ನಡೆಸದೇ ಪಾಸ್ ಮಾಡಿದ್ದಾರೆ. ತ್ರಿವಳಿ ತಲಾಖ್, ಮಹಿಳಾ ಮೀಸಲಾತಿ ಬಿಲ್, ಜಮ್ಮು ಕಾಶ್ಮೀರ ರೀ ಅರ್ಗನೈಸೇಷನ್ ಬಿಲ್ ಗಳು ಹಾಗೆ ಪಾಸ್ ಆಗಿವೆ. ಅದರಂತೆ ಕೋಲಿ ಕಬ್ಬಲಿಗ ಹಾಗೂ ಕುರುಬ ಸಮುದಾಯಗಳನ್ನು ಎಸ್ ಟಿ ಪಟ್ಟಿಗೆ ಸೇರಿಸಬೇಕಿತ್ತು ಎಂದರು.
ಕಳೆದ ಚುನಾವಣೆಯ ಸಂದರ್ಭದಲ್ಲಿ ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿದ್ದ ರವಿಕುಮಾರ ಈಗ ಯಾಕೆ ಮಾತನಾಡುತ್ತಿಲ್ಲ ? ಈ ಸಲ ಮತ್ತೆ ಚುನಾವಣೆಗೆ ಬಂದರೆ ಅವರಿಗೆ ಜನರು ಕಲ್ಲಿನಲ್ಲಿ ಹೊಡೆಯುತ್ತಾರೆ ಎಂದು ಬಿಜೆಪಿ ಅವರನ್ನು ಬದಲಾಯಿಸಿದೆ. ನೀವು ರಕ್ತದಲ್ಲಿ ಬರೆದುಕೊಡುವುದು ಬೇಡ. ಕಾಗದಲ್ಲಿ ಪೆನ್ ನಲ್ಲಿ ಬರೆಸಿಬಿಡಿ ಸಾಕು ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ನಾಯಕರ ವಿರುದ್ದ ದೂರು ಬಂದರೆ ತಕ್ಷಣ ನೋಟಿಸು ನೀಡುವ ಚುನಾವಣಾ ಆಯೋಗ, ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಹಾಗೂ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನೀಡಿದ ದೂರಿನ ಮೇಲೆ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದರು.
ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ ಖುರ್ಚಿ ಖಾಲಿ ಮಾಡಬೇಕಾಗುತ್ತದೆ ಎನ್ನುವ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಸಚಿವರಿಗೆ ಸಹಜವಾಗಿ ಜವಾಬ್ದಾರಿಗಳಿವೆ. ಕಲಬುರಗಿಗೆ ನನಗೆ ಹಾಗೂ ಶರಣಪ್ರಕಾಶ ಪಾಟೀಲ ಹಾಗೆ ರಾಯಚೂರಿಗೆ ದರ್ಶನಾಪುರ ಹಾಗೂ ಬೋಸ್ ರಾಜ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಹಾಗಾಗಿ ನಾವು ಲೀಡ್ ಕೊಡಲೇಬೇಕು ಎಂದರು.
ಮಾಜಿ ಸಚಿವ ಮಾಲೀಕಯ್ಯ ಅವರು ಒಂದು ಕಾಲು ಬಿಜೆಪಿಯಿಂದ ಹೊರಗೆ ಇಟ್ಟಿದ್ದಾರೆ ನಿಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೀರಾ ಎಂದು ಕೇಳಿದಾಗ ಉತ್ತರಿಸಿದ ಅವರು ಗುತ್ತೇದಾರ ಈಗಾಗಲೇ ಎರಡೂ ಕಾಲು ಹೊರಗೆ ಇಟ್ಟಿದ್ದಾರೆ. ನನ್ನೊಂದಿಗೆ ವೈಯಕ್ತಿಕವಾಗಿ ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ. ನಮ್ಮ ವೈಯಕ್ತಿಕ ವಿಚಾರಗಳು ಏನೇ ಇರಲಿ, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರಬೇಕಾಗುತ್ತದೆ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಮೋದಿ ಬಂದರೂ ಸ್ವಾಗತಿಸುತ್ತೇವೆ, ಜಾಧವ ಬಂದರೂ ಸ್ವಾಗತಿಸುತ್ತೇವೆ. ಬಿಜೆಪಿಯವರು ಕೇವಲ ಸಮಾಜ ಒಡೆಯುತ್ತಾರೆ ಎಂದು ಭಾವಿಸಿದ್ದೆವು ಆದರೆ ಕುಟುಂಬವನ್ನೂ ಒಡೆಯುತ್ತಾರೆ ಎಂದು ಗುತ್ತೇದಾರ ಹೇಳಿದ್ದಾರೆ ಎಂದು ಕಿಚಾಯಿಸಿದರು.
ಶಿವಕುಮಾರ ಹೊನಗುಂಟಿ, ಈರಣ್ಣ ಝಳಕಿ, ಲಚ್ಚಪ್ಪ ಜಮಾದಾರ, ಕಿರಣ್ ದೇಶಮುಖ, ಪ್ರವೀಣ್ ಹರವಾಳ ಇದ್ದರು.
ಇದನ್ನೂ ಓದಿ: L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.