ಪರಿಶಿಷ್ಟರಿಗೆ ಪ್ರಗತಿ ಕಾಲೋನಿ: ಪ್ರಿಯಾಂಕ್
Team Udayavani, Jul 7, 2018, 10:54 AM IST
ವಾಡಿ: ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿ
ಮತ್ತು ತಾಂಡಾಗಳಿಗೆ ತಲಾ ಕನಿಷ್ಠ ಒಂದು ಕೋಟಿ ರೂ. ಹಾಗೂ ಗರಿಷ್ಠ 5 ಕೋಟಿ ರೂ. ವರೆಗೆ ಅನುದಾನ ಒದಗಿ
ಸುವ ಮೂಲಕ “ಪ್ರಗತಿ ಕಾಲೋನಿ’ ಎನ್ನುವ ಹೊಸ ಯೋಜನೆಯಡಿ ಹಂತ-ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಚಿತ್ತಾಪುರ ಮೀಸಲು ಮತಕ್ಷೇತ್ರದ ಶಾಸಕ, ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ.
ಗುರುವಾರ ರಾಜ್ಯ ಸರಕಾರ ಮಂಡಿಸಿರುವ ಬಜೆಟ್‌ನಲ್ಲಿ ಕಲಬುರಗಿ ಜಿಲ್ಲೆಗೆ ಏನು ಲಾಭವಾಗಿದೆ ಎನ್ನುವ
ಮುಖ್ಯಾಂಶಗಳನ್ನು ಪ್ರಕಟಿಸಿರುವ ಅವರು, ಜಿಲ್ಲೆಯ ಜನತೆಗೆ ತಮ್ಮ ಇಲಾಖೆಯಿಂದ ಹಾಗೂ ಸರಕಾರದಿಂದ ಲಭ್ಯವಾಗಲಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ್ದಾರೆ.
ಗಂಗಾ ಕಲ್ಯಾಣ ಯೋಜನೆಯಡಿ ಪಜಾ/ಪಪಂ ಅರ್ಹ ಫಲಾನುಭವಿಗಳಿಗೆ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಸದ್ಯ ಜಾರಿಯಲ್ಲಿರುವ ಸಹಾಯ ಧನದ ಮೊತ್ತವನ್ನು 2.50 ಲಕ್ಷ ರೂ.ಗಳಿಂದ 3 ಲಕ್ಷಕ್ಕೆ ಹಾಗೂ 3.50 ಲಕ್ಷ ರೂ. ಗಳಿಂದ 4 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.
ಸಾಮಾಜಿಕ ಉದ್ಯಮಶೀಲತಾ ಯೋಜನೆಯಡಿ ಪಜಾ/ಪಪಂ 5000 ಯುವಕ ಯುವತಿಯರಿಗೆ ಸರಕಾರಿ ಮತ್ತು ಖಾಸಗಿ ಬ್ರಾಂಡೆಡ್ ಸಂಸ್ಥೆಗಳ ಸಹಯೋಗದೊಂದಿಗೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಗರಿಷ್ಠ 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.
371(ಜೆ)ನೇ ಕಲಂ ವ್ಯಾಪ್ತಿಗೆ ಬರುವ ಕಲಬುರಗಿ ನಗರದಲ್ಲಿ ಖಾಸಗಿ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ
ಪಜಾ/ಪಪಂ ಪದವಿಧರರಿಗೆ ಯುಪಿಎಸ್‌ಸಿ, ಕೆಪಿಎಸ್‌ಸಿ ಹಾಗೂ ಬ್ಯಾಂಕಿಂಗ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ನೀಡಲು ನೆರವು ನೀಡಲಾಗುವುದು. ಪಜಾ/ಪಪಂ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಕ್ರೀಡೆಗಳಲ್ಲಿ ಹೆಚ್ಚಿನ ಪ್ರಾವಿಣ್ಯತೆ ಪಡೆಯಲು ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು. ಇದಕ್ಕಾಗಿ 2 ಕೋಟಿ ರೂ. ವೆಚ್ಚ ಮಾಡಲಾಗುವುದು.
ಕಲಬುರಗಿ ಜಿಲ್ಲೆಯನ್ನು ಭಾರತದ ಸೋಲಾರ್ ಜಿಲ್ಲೆಯನ್ನಾಗಿ ಅಭಿವೃದ್ಧಿಪಡಿಸುವ ಮಹತ್ವದ ನಿರ್ಧಾರವನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಸೌರವಿದ್ಯುತ್ ಉತ್ಪಾದಿಸಲು ಅಗತ್ಯವಿರುವ ಸೋಲಾರ್ ಪ್ಯಾನಲ್, ಇನ್ವರ್ಟರ್ ಗಳು, ಕೆಪ್ಯಾಸೀಟರ್‌ಗಳು ಮತ್ತು ಲುಮಿನೇಟರ್‌ಗಳನ್ನು ಜಿಲ್ಲೆಯಲ್ಲಿಯೇ ಉತ್ಪಾದಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.