ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ: ಡಿಸಿ ಶರತ್
Team Udayavani, Jun 23, 2020, 7:37 AM IST
ಕಲಬುರಗಿ: ಜಿಲ್ಲೆಯಲ್ಲಿ ಜೂ.25ರಿಂದ ಜುಲೈ3ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 136 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆಗಳನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಹಾಗೂ ನಕಲು ತಡೆಯಲು ಅನುಕೂಲವಾಗುವಂತೆ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಕಲಂ 144ರಡಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ನಿಯೋಜಿತ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹೊರತುಪಡಿಸಿ ಇತರ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. 200 ಮೀಟರ್ ಪ್ರದೇಶದಲ್ಲಿ ಪರೀಕ್ಷಾ ಕೇಂದ್ರದ ಉಪಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಬೇರೆ ವ್ಯಕ್ತಿಗಳು ಮೊಬೈಲ್, ಪೇಜರ್, ಬ್ಲೂಟೂತ್ ಹಾಗೂ ವೈರ್‌ಲೆಸ್ ಸೆಟ್‌ಗಳು ಸೇರಿ ಮತ್ತಿತರ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ಉಪಯೋಗಿಸುವುದನ್ನು ನಿರ್ಬಂಧಿಸಲಾಗಿದೆ. ಎಲ್ಲ ಝೆರಾಕ್ಸ್ ಮತ್ತು ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.