ಕಣ್ಣಿ ತರಕಾರಿ ಮಾರುಕಟ್ಟೆ ಅಭಿವೃದ್ಧಿಗೆ ಪ್ರಸ್ತಾವನೆ
Team Udayavani, Nov 26, 2019, 11:07 AM IST
ಕಲಬುರಗಿ: ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕೇಂದ್ರ ಬಸ್ ನಿಲ್ದಾಣ ಬಳಿಯ ಕಣ್ಣಿ ತರಕಾರಿ ಮಾರುಕಟ್ಟೆ ಅಭಿವೃದ್ಧಿಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಸಹಯೋಗದಲ್ಲಿ ಅಭಿವೃದ್ಧಿಪಡಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಸೋಮವಾರ ನಡೆದ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ (ಕುಡಾ) ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಬಿ. ಶರತ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಣ್ಣಿ ತರಕಾರಿ ಮಾರುಕಟ್ಟೆಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಹಭಾಗಿತ್ವ ವಹಿಸುವ ಕುರಿತಾಗಿ ಎಪಿಎಂಸಿ ಒಪ್ಪಂದ ಪತ್ರ ಕಳುಹಿಸಿರುವುದರಿಂದ ಈಗ ಸರ್ಕಾರಕ್ಕೆ ಕುಡಾ-ಎಪಿಎಂಸಿ ಕರಾರುಗಳ ಒಪ್ಪಂದದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ ಪಡೆಯಲು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಅದೇ ರೀತಿ ಎಂಎಸ್‌ಕೆ ಮಿಲ್‌ನ ಕುಡಾ ಬಡಾವಣೆಯಲ್ಲಿ 54 ಕೋ.ರೂ ವೆಚ್ಚದ ಬೃಹತ್ ವಾಣಿಜ್ಯ ಮಳಿಗೆಯು ಪಿಪಿಯು ಆಧಾರದ ಮೇಲೆ ನಿರ್ಮಿಸಲು ಇಂಡೋಕ್ ಕಂಪನಿ ಮುಂದೆ ಬಂದಿರುವುದರಿಂದ ಆದಷ್ಟು ಬೇಗನೇ ಒಪ್ಪಂದ ಕಾರ್ಯ ಪೂರ್ಣಗೊಳಿಸಿ ಕಾಮಗಾರಿ ಶುರು ಮಾಡಲು ಸಹ ಸಭೆಯಲ್ಲಿ ಒಮ್ಮತಕ್ಕೆ ಬರಲಾಯಿತು.
ಕೋಟನೂರ ಡಿ ಬಡಾವಣೆಯ ಹಣವನ್ನು ಬೇರೆಯದಕ್ಕೆ ಬಳಸಬೇಡಿ. ರೈತರು ಪರಿಹಾರ ಕೋರಿ ನ್ಯಾಯಾಲಯಕ್ಕೆ ಮೋರೆ ಹೋಗಿದ್ದರಿಂದ ಯಾವುದೇ ಸಂದರ್ಭದಲ್ಲಿ ಆದೇಶ ಬರಬಹುದು. ಹೀಗಾಗಿ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಮಾರಾಟವಾಗಿರುವ ನಿವೇಶನ ಹಣ ಮೀಸಲಿಡಿ ಬೇರೆಯದಕ್ಕೆ ಬಳಸಬೇಡಿ ಎಂದು ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಹೇಳಿದರು.
ಧರಿಯಾಪುರ-ಕೋಟನೂರ ಕುಡಾ ಬಡಾವಣೆಯಲ್ಲಿ ಅರ್ಧಕ್ಕೆ ನಿಂತಿರುವ ರಾಜೀವ್ ಗಾಂಧಿ ಥೀಮ್ ಪಾರ್ಕ್ ಕುರಿತಾಗಿ ಸಭೆಯಲ್ಲಿ ಚರ್ಚೆಗೆ ಬಂತು. ಕಾಮಗಾರಿ ಉಸ್ತುವಾರಿ ಕೆಕೆಆರ್‌ಡಿಬಿಯೇ ವಹಿಸಿಕೊಂಡಿದೆ. ಕಾಮಗಾರಿಗೆ ಅನುದಾನ ಕೊರತೆಯಿಂದ ಅರ್ಧಕ್ಕೆ ನಿಂತಿದೆ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದರು. ಮುಂದಿನ ಸಭೆಗೆ ಸಮಗ್ರ ಮಾಹಿತಿ ತರಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಶಾಸಕರಾದ ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್, ಖನೀಜಾ ಫಾತೀಮಾ, ತಿಪ್ಪಣ್ಣಪ್ಪ ಕಮಕನೂರ, ಇಕ್ಬಾಲ್ ಅಹ್ಮದ ಸರಡಗಿ, ಕುಡಾ ಆಯುಕ್ತ ಎಂ. ರಾಚಪ್ಪ ಹಾಗೂ ಅಧಿಕಾರಿಗಳು ಹಾಜರಿದ್ದರು. ಕುಸನೂರ ಕುಡಾ ಬಡಾವಣೆಗೆ ಭೂಮಿ ನೀಡಿರುವ ರೈತರಿಗೆ ಪರಿಹಾರ ನೀಡುವ ಹಾಗೂ ಬಡಾವಣೆಗೆ ಕುಡಾ ಕಳುಹಿಸಿರುವ 117 ಕೋ. ರೂ ಪ್ರಸ್ತಾವನೆ ಬದಲು ಕೇವಲ 95 ಕೋ. ರೂ ಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಕುಡಾ ಯಾವ ನಿಟ್ಟಿನಲ್ಲಿ ಹೆಜ್ಜೆ ಇಡಬೇಕೆಂಬುದೇ ಗೊತ್ತಾಗುತ್ತಿಲ್ಲ ಎಂದು ಕುಡಾ ಅಧಿಕಾರಿಗಳು ಸಭೆ ಗಮನಕ್ಕೆ ತಂದರು.
ರೈತರು ಭೂಮಿ ನೀಡಿ ನಾಲ್ಕೈದು ವರ್ಷಗಳಾಯಿತು. ಆದರೂ ಪರಿಹಾರ ಕೊಡದೇ ಇರುವುದು ರೈತರ ತಾಳ್ಮೆ ಪರೀಕ್ಷಿಸುವಂತಾಗಿದೆ. ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಿ ಎಂದು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಆಗ್ರಹಿಸಿದರು. ಇದಕ್ಕೆ ಬಿ.ಜಿ. ಪಾಟೀಲ್ ಧ್ವನಿಗೂಡಿಸಿದರು.
ಆದರೆ ಕುಡಾ ಪ್ರಸ್ತಾವನೆಗಿಂತ 22 ಕೋ. ರೂ ಕಡಿಮೆಗೊಳಿಸಿ ಸಂಪುಟ ಅನುಮೋದನೆ ನೀಡಿರುವದರಿಂದ ಕುಡಾಗೆ ಪರಿಹಾರ ನೀಡಲು ಸಾಧ್ಯವಾಗದಂತಾಗಿದೆ. ಎಲ್ಲವನ್ನು ಅವಲೋಕಿಸಿ 117 ಕೋ.ರೂ ಯೋಜನೆ ರೂಪಿಸಲಾಗಿದೆ. ಆದರೆ 22 ಕೋ.ರೂ. ಕಡಿಮೆಯಾಗಿರುವುದರಿಂದ ಕುಡಾ ನಷ್ಟವೇ ಜಾಸ್ತಿ. ಹೀಗಾಗಿ ಏನು ಹೆಜ್ಜೆ ಇಡಬೇಕೆಂಬುದೇ ಗೊತ್ತಾಗುತ್ತಿಲ್ಲ ಎಂದು ಅಧಿಕಾರಿಗಳು ಸಭೆ ಗಮನಕ್ಕೆ ತಂದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಹಣ ಇರದೇ ಇದ್ದರೆ ರೈತರಿಂದ ಭೂಮಿ ಏಕೆ ಪಡೆದಿರಿ. ಈ ಬಡಾವಣೆಯಿಂದ ಕುಡಾಗೆ ನಷ್ಟವಾದರೆ ಮಾಡುವುದು ಹೇಗೆ? ಎಂದು ಖಾರವಾಗಿ ಪ್ರಶ್ನಿಸಿದರಲ್ಲದೇ ರೈತರಿಗೆ ನೇರವಾಗಿ ಪರಿಹಾರ ದೊರಕಬೇಕೆಂದರು. ಇದಕ್ಕೆ ಜಿಲ್ಲಾಧಿಕಾರಿ ಬಿ. ಶರತ್ ಅವರು, ಭೂಮಿ ನೀಡಿದ ರೈತರಿಗೆ ನೇರವಾಗಿ ಆರ್‌ಟಿಜಿಎಸ್ ಮೂಲಕ ಅವರ ಖಾತೆಗೆ ಪರಿಹಾರ ಪಾವತಿಯಾಗುತ್ತದೆ. ಇಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಎದುರಾಗುವುದಿಲ್ಲ ಎಂದು ವಿವರಣೆ ನೀಡಿದರು. ಒಟ್ಟಾರೆ ಈ ಬಡಾವಣೆ ಜಟಿಲವಾಗಿದೆ. ಹೀಗಾಗಿ ಸಧ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಸಭೆ ಗಮನಕ್ಕೆ ತಂದರು. ಹೀಗಾಗಿ ಯಾವುದೇ ನಿರ್ಧಾರಕ್ಕೆ ಬರದೇ ಮುಂದಿನ ವಿಷಯಗಳತ್ತ ಚರ್ಚೆ ಮುಂದುವರೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.