ದಲಿತ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ ಖಂಡಿಸಿ ಪ್ರತಿಭಟನೆ
Team Udayavani, Dec 21, 2017, 9:51 AM IST
ಕಲಬುರಗಿ: ವಿಜಯಪುರದ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆ ಖಂಡಿಸಿ ಮಹಿಳಾ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ದಲಿತ ವಿದ್ಯಾರ್ಥಿನಿಯನ್ನು ಕೊಂದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮರಣದಂಡನೆ ಶಿಕ್ಷೆ ನೀಡಬೇಕು ಹಾಗೂ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಬೇಕು. ಸರ್ಕಾರ ವಿದ್ಯಾರ್ಥಿನಿಯ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಮತ್ತು ಭೂಮಿ ಹಂಚಿಕೆ ಮಾಡುವುದರೊಂದಿಗೆ ದಾನಮ್ಮಳ ಕುಟುಂಬದ ಸಂಪೂರ್ಣ ಹೊಣೆಯನ್ನು ಸರ್ಕಾರ ಹೊರಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಡಾ.ವಿಠಲ ದೊಡ್ಮನಿ, ಮಿಲಿಂದ ಸನಗುಂದಿ, ಲಕ್ಷ್ಮೀಕಾಂತ ಹುಬಳಿ, ಹಣಮಂತ ಇಟಗಿ, ಸಂತೋಷ ಮೇಲ್ಮನಿ, ನಾಗೇಂದ್ರ ಜವಳಿ, ಮಲ್ಲಪ್ಪ ಹೊಸ್ಮನಿ ಹಾಗೂ ಎಐಎಂಎಸ್‌ಎಸ್ ಜಿಲ್ಲಾಧ್ಯಕ್ಷೆ ಡಾ| ಸೀಮಾ ದೇಶಪಾಂಡೆ, ಮಲ್ಲಿನಾಥ ಸಿಂಗೆ, ಎಸ್.ಎಂ.ಶರ್ಮಾ, ವಿ.ಜಿ.ದೇಸಾಯಿ ಸೇರಿದಂತೆ ಎಐಡಿಎಸ್‌ಒ, ಎಐಡಿವಾಯ್‌ಒ ಸಂಘಟನೆಗಳ ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.