ಡೆಂಘೀ ವಿರುದ್ಧ ಪ್ರತಿಭಟನೆ: 8 ಜನರ ಬಂಧನ


Team Udayavani, Oct 24, 2017, 9:32 AM IST

gul-1.jpg

ಕಲಬುರಗಿ: ಜಿಲ್ಲೆಯಲ್ಲಿ ಡೆಂಘೀ ಜ್ವರ ಹೆಚ್ಚಾಗಿ ಕಾಡುತ್ತಿದ್ದು, ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆಗೆ ಆಗ್ರಹಿಸಿ ಸರಕಾರ ಆಸ್ಪತ್ರೆ ಮುಂದೆ ಸೋಮವಾರ ಮಧ್ಯಾಹ್ನ ಪ್ರತಿಭಟನೆ ಮಾಡುತ್ತಿದ್ದ ಬೀಯಿಂಗ್‌ ಹ್ಯೂಮನ್‌ ಸಂಘಟನೆಯ 8 ಜನ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.

ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶವಲ್ಲದೆ, ಗ್ರಾಮೀಣ ಪ್ರದೇಶದಲ್ಲಿ ಡೆಂಘೀ ಹಾವಳಿ ತುಂಬಾ ಜೋರಾಗಿದೆ. ಅದಕ್ಕೆ
ಸರಿಯಾದ ಚಿಕಿತ್ಸೆ ಯಾವುದೇ ಸರಕಾರಿ ಆಸ್ಪತ್ರೆ ಸಿಗುತ್ತಿಲ್ಲ. ಅದರಲ್ಲೂ ಪ್ರಮುಖವಾಗಿ ಸಿಂಗಲ್‌ ಡೋನರ್‌ ಪ್ಲೇಟ್‌ಲೆಟ್ಸ್‌ ರಕ್ತ ಖರೀದಿಸಲು ಖಾಸಗಿ ರಕ್ತ ನಿಧಿ ಕೇಂದ್ರಗಳಿಗೆ ಓಡಾಡಬೇಕಾಗುತ್ತದೆ.

ಈ ಕೇಂದ್ರಗಳು 12 ಸಾವಿರ ರೂ. ಪಡೆದು ಸಿಂಗಲ್‌ ಡೋನರ್‌ ಪ್ಲೇಟ್‌ಲೆಟ್ಸ್‌ ನೀಡುತ್ತಿದೆ. ಇದನ್ನೇ ಸರಕಾರ ಆಸ್ಪತ್ರೆಯಲ್ಲಿ ಮಾಡಿದರೆ ಬಡ ಮತ್ತು ಗ್ರಾಮೀಣ ಜನರಿಗೆ ಅನುಕೂಲವಾಗಲಿದೆ. ಆದರೆ, ಇದನ್ನು ಮಾಡದೆ ಖಾಸಗಿ ಅವರಿಗೆ ಸರಕಾರಿ ವೈದ್ಯರು ನೆರವು ನೀಡುತ್ತಿದ್ದಾರೆ ಎಂದು ಪ್ರತಿಭಟನೆಯಲ್ಲಿ ನಿರತ ಬೀಯಿಂಗ್‌ ಹ್ಯೂಮನ್‌ ಎಜ್ಯುಕೇಷನ್‌ ವೆಲಫೇರ್‌ ಅಂಡ್‌ ಚಾರಿಟೇಬಲ್‌ ಟ್ರಸ್ಟನ ಸಂಸ್ಥಾಪಕ ಅಧ್ಯಕ್ಷ ಸಾದಿಕ್‌ ಅಲಿ ದೇಶಮುಖ ಮತ್ತು ತುಕಾರಾಮ ಮಾನಕರ್‌ ತಿಳಿಸಿದರು.

ಇನ್ನೂ ಸರಕಾರ ದವಾಖಾನೆಗಳಲ್ಲಿ ಚಿಕಿತ್ಸೆ ಎನ್ನುವುದು ಮರೀಚಿಕೆಯಾಗಿದೆ. ನರ್ಸುಗಳು, ವೈದ್ಯರು ಸರಿಯಾಗಿ ಕೆಲಸವೂ ಮಾಡುತ್ತಿಲ್ಲ. ಎಲ್ಲವೂ ಖಾಸಗಿ ದವಾಖಾನೆಗಳಿಗೆ ರೆಫರ್‌ ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಈ ವಿಷಯವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಕೀಯ ಸಚಿವರು ಆಗಿರುವ ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಲು ಈ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ, ಹೋರಾಟವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ನಮ್ಮನ್ನು ಪೊಲೀಸರ ಮೂಲಕ ಬಂಧಿಸಿ ಬಿಡುಗಡೆ ಮಾಡಿಸುವುದು ಸತ್ಯವನ್ನು ಕೊಲ್ಲುವುದು ಆಗಿದೆ ಎಂದು ದೂರಿದ್ದಾರೆ.

ಪೊಲೀಸರು ಸಂಘಟನೆಯ 8 ಜನರನ್ನು ಮಧ್ಯಾಹ್ನ ಬಂಧಿಸಿ ಸಂಜೆ 5 ಗಂಟೆಗೆ ಬಿಡುಗಡೆ ಮಾಡಲಾಗಿದೆ. ಈ ಕುರಿತು ಯಾವುದೆ ಪ್ರಕರಣ ದಾಖಲು ಮಾಡಲಾಗಿಲ್ಲ. ಆದರೆ, ಪ್ರತಿಭಟನೆಯಲ್ಲಿ ನಿರತ ಕಾರ್ಯಕರ್ತರು ಆಸ್ಪತ್ರೆಯ ಮುಂಭಾಗದ ರಸ್ತೆಯನ್ನು ಸಂಪೂರ್ಣ ಬಂದ್‌ ಮಾಡಿದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅದಕ್ಕಾಗಿ ಪ್ರತಿಭಟನಾಕಾರರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ಮಜರ್‌, ಅಭಿಷೇಕ ಬಾಲಾಜಿ, ಇಮ್ರಾನ್‌ ಹುಸ್ಸೇನ, ಜುಬೀರ ಶೇಖ್‌, ಹಾಜಿ ಶೇಖ್‌, ನವೀನಕುಮಾರ ಮತ್ತು ಆಸೀಪ್‌ ಎಸ್‌.ಕೆ. ಇನ್ನು ಹಲವರು ಇದ್ದರು.

ಟಾಪ್ ನ್ಯೂಸ್

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.