27ರಂದು ಎಚ್‌ಕೆಆರ್‌ಡಿಬಿ ಅಧ್ಯಕ್ಷರ ನಿವಾಸದ ಎದುರು ಪ್ರತಿಭಟನೆ
Team Udayavani, Feb 5, 2018, 11:19 AM IST
ಕಲಬುರಗಿ: ಹೈದ್ರಾಬಾದ ಕರ್ನಾಟಕದ ಖಾಸಗಿ ಶಾಲಾ, ಕಾಲೇಜುಗಳಿಗೆ 371ನೇ (ಜೆ) ಅಡಿ ಅನುದಾನ ನೀಡಬೇಕು ಎಂದು ಆಗ್ರಹಿಸಿ ಫೆ. 27ರಂದು ಎಚ್‌ಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರ ನಿವಾಸದ ಎದುರು ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಹೈ.ಕ.ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟದ ಅಧ್ಯಕ್ಷ ಎಂ.ಬಿ.ಅಂಬಲಗಿ ಹೇಳಿದರು.
ನಗರದ ಹಳೆ ಜೇವರ್ಗಿ ರಸ್ತೆಯಲ್ಲಿನ ಗುರುಪಾದಲಿಂಗೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 371ನೇ(ಜೆ) ಅಡಿ ಅನುದಾನರಹಿತ ಶಾಲಾ ಕಾಲೇಜುಗಳಿಗೆ ವೇತಾನುದಾನ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಧನಸಹಾಯ ನೀಡುವ ಅವಕಾಶ ಕಲ್ಪಿಸಿರುವುದರಿಂದ ಅದನ್ನು ಜಾರಿಗೆ ತರಬೇಕು ಎಂದು ಹೋರಾಟ ಮಾಡಿದ ಪರಿಣಾಮ 371ನೇ(ಜೆ) ಕಲಂನ ವಿಶೇಷ ಕೋಶದ ಜಂಟಿ ಕಾರ್ಯದರ್ಶಿಗಳು ಹೈ.ಕ.ಪ್ರದೇಶಾಭಿವೃದ್ದಿ ಮಂಡಳಿಗೆ ಸೂಚಿಸಿದರು ಎಂದು ಹೇಳಿದರು.
ವೇತಾನುದಾನ ಹಾಗೂ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ,
ಪೀಠೊಪಕರಣ ಮುಂತಾದವುಗಳಿಗಾಗಿ ಖಾಸಗಿ ಸಂಸ್ಥೆಗಳು ನಡೆಸುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಸಂಖ್ಯೆಗಳಿಗೆ ಅನುಗುಣವಾಗಿ ಅಥವಾ ಇತರೆ ಮಾನದಂಡದ ಪ್ರಕಾಶ ಕನಿಷ್ಠ 5ರಿಂದ 50 ಲಕ್ಷ ರೂ.ವರೆಗೆ ಧನಸಹಾಯ ನೀಡುವಂತೆ ಒತ್ತಾಯಿಸಿ ಎಚ್‌ಕೆಆರ್‌ಡಿಬಿ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದಾಗ ಅಂದಿನ ಕಾರ್ಯದರ್ಶಿಯವರು ಸ್ಪಂದಿಸಿ ವೇತಾನುದಾನ ಹಾಗೂ ಹಣ ಬಿಡುಗಡೆ ಸರ್ಕಾರವೇ ತೀರ್ಮಾನಿಸುತ್ತದೆ ಎಂದು ಉತ್ತರಿಸಿದ್ದರು.
ನಂತರ ಮಂಡಳಿ ಕಾರ್ಯದರ್ಶಿ ಹರ್ಷ ಗುಪ್ತಾ ಅವರನ್ನು ಭೇಟಿಯಾಗಿ ಬೇಡಿಕೆ ಬಗ್ಗೆ ವಿವರಿಸಿದಾಗ 371ನೇ(ಜೆ) ಕುರಿತು ರೂಪಿಸಿರುವ ನಿಯಮಗಳಿಗನುಸಾರವಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.
ಪ್ರಸಕ್ತ ಸಾಲಿನಿಂದ ವೇತಾನುದಾನ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಪ್ರಸಕ್ತ ವರ್ಷದಿಂದ ಜಾರಿಗೊಳಿಸುವಂತೆ ಆಗ್ರಹಿಸಿ ನಡೆಯುವ ಧರಣಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಡಾ| ಪರಮೇಶ್ವರ ಬನಸೂಡೆ, ಚನ್ನವೀರಪ್ಪ ಸಲಗರ, ಸಿದ್ರಾಮಪ್ಪ ಡಬಾಲೆ, ಗುಂಡು ಬಡಿಗೇರ, ಅಪ್ಪಾರಾವ ಪಾಟೀಲ, ಗೌರಿ ಎಸ್., ಗುರುಪಾದಪ್ಪ ಬಿರಾದಾರ, ಅಡಿವೆಪ್ಪ ಚಿಂಚೋಳಿ, ಸಂಗನಗೌಡ ಪಾಟೀಲ, ಅಪ್ಪಣ್ಣ ಕುಲಕರ್ಣಿ, ಸಾಯಬಣ್ಣ ಪುರ್ಲೆ, ನೀತಿನ ಕೋಸಗಿ, ನಾಗರಾಜ ಚಿತ್ತಾಪುರ, ಸುನೀಲ ಸೇಡಂ, ಬಾಬುರಾವ ಸುಳ್ಳದ, ಮಲ್ಲಿಕಾರ್ಜುನ ಅಲ್ಲಾಪುರ, ಅರುಣಕುಮಾರ ಪೂಚುಲ್, ಬಸವರಾಜ ಹಡಪದ, ಶಾಂತಯ್ಯ ಹಿರೇಮಠ ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.